ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಜನವರಿ 11 ರಂದು ರಾಜ್‌ಕೋಟ್‌ಗೆ ಭೇಟಿ
January 09th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 11 ರಂದು ರಾಜ್‌ಕೋಟ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಅವರು ಸಮ್ಮೇಳನದಲ್ಲಿ ವ್ಯಾಪಾರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಆನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್‌ಕೋಟ್‌ನ ಮಾರ್ವಾಡಿ ವಿಶ್ವವಿದ್ಯಾಲಯದಲ್ಲಿ ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು 14 ಗ್ರೀನ್‌ಫೀಲ್ಡ್ ಸ್ಮಾರ್ಟ್ ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಜಿಐಡಿಸಿ) ಎಸ್ಟೇಟ್‌ಗಳ ಅಭಿವೃದ್ಧಿಯನ್ನು ಘೋಷಿಸಲಿದ್ದಾರೆ ಮತ್ತು ರಾಜ್‌ಕೋಟ್‌ನಲ್ಲಿ ಜಿಐಡಿಸಿಯ ವೈದ್ಯಕೀಯ ಸಾಧನಗಳ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.ಪ್ರಧಾನಮಂತ್ರಿ ಜನವರಿ 10-12 ರವರೆಗೆ ಗುಜರಾತ್ ಭೇಟಿ
January 09th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10 ರಿಂದ 12 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಜನವರಿ 10 ರಂದು ಸಂಜೆ ಸೋಮನಾಥಕ್ಕೆ ಆಗಮಿಸಲಿದ್ದಾರೆ ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಅವರು ಸೋಮನಾಥ ದೇವಾಲಯದಲ್ಲಿ ಡ್ರೋಣ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.