ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
August 30th, 08:00 am
ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
July 04th, 05:56 am
ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು
July 04th, 04:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.2024-25 ರಿಂದ 2028-29ರ ಹಣಕಾಸು ವರ್ಷಕ್ಕೆ “ವೈಬ್ರೆಂಟ್ ವಿಲೇಜಸ್ ಪ್ರೋಗ್ರಾಂ-II (ವಿವಿಪಿ-II)” ಗೆ ಸಂಪುಟದ ಅನುಮೋದನೆ
April 04th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು ವೈಬ್ರೆಂಟ್ ವಿಲೇಜಸ್ ಪ್ರೋಗ್ರಾಂ-II (ವಿವಿಪಿ-II) ಅನ್ನು ಕೇಂದ್ರ ವಲಯದ ಯೋಜನೆಯಾಗಿ (ಶೇ.100 ಕೇಂದ್ರದ ಧನಸಹಾಯ) ಅನುಮೋದಿಸಿದೆ. ಇದು 'ಸುರಕ್ಷಿತ, ಸುಭದ್ರ ಮತ್ತು ಚೈತನ್ಯಶೀಲ ಭೂ ಗಡಿ'ಗಳಿಗಾಗಿ ವಿಕಸಿತ ಭಾರತ@2047 ರ ದೃಷ್ಟಿಗೆ ಸರ್ಕಾರದ ಬದ್ಧತೆಯನ್ನು ಹೆಚ್ಚಿಸುತ್ತದೆ. ಈಗಾಗಲೇ ವಿವಿಪಿ-I ಅಡಿಯಲ್ಲಿ ಒಳಗೊಂಡಿರುವ ಉತ್ತರದ ಗಡಿಯನ್ನು ಹೊರತುಪಡಿಸಿ ಅಂತರರಾಷ್ಟ್ರೀಯ ಭೂ ಗಡಿಗಳ (ಐ ಎಲ್ ಬಿ) ಪಕ್ಕದ ಬ್ಲಾಕ್ ಗಳಲ್ಲಿರುವ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಈ ಕಾರ್ಯಕ್ರಮವು ನೆರವು ನೀಡುತ್ತದೆ.ET Now ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣದ ಪಠ್ಯ
February 15th, 08:30 pm
ಪ್ರಧಾನಿ ಮೋದಿ ಅವರು ET Now ಜಾಗತಿಕ ವ್ಯಾಪಾರ ಶೃಂಗಸಭೆ 2025 ಅನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಧಾರಣೆಗಳನ್ನು ಎತ್ತಿ ತೋರಿಸಿದರು. ಸ್ವಾಮಿತ್ವ ಯೋಜನೆ ಮತ್ತು ಬ್ಯಾಂಕಿಂಗ್ ಸುಧಾರಣೆಗಳಂತಹ ಪರಿವರ್ತನಾ ನೀತಿಗಳನ್ನು ಮನ್ನಣೆ ನೀಡುವ ಮೂಲಕ ಜಾಗತಿಕ ಆರ್ಥಿಕ ನಾಯಕನಾಗಿ ಭಾರತದ ಏರಿಕೆಯನ್ನು ಅವರು ಒತ್ತಿ ಹೇಳಿದರು. ಸಕಾರಾತ್ಮಕ ಮನಸ್ಥಿತಿ, ತ್ವರಿತ ನ್ಯಾಯ ಮತ್ತು ವ್ಯಾಪಾರ ಮಾಡುವ ಸುಲಭತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು, ವಿಕಸಿತ್ ಭಾರತಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
February 15th, 08:00 pm
ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.We launched the SVAMITVA Yojana to map houses and lands using drones, ensuring property ownership in villages: PM
January 18th, 06:04 pm
PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು
January 18th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಸ್ವಾಮಿತ್ವ ಯೋಜನೆಯಡಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಭಾರತದ ಹಳ್ಳಿಗಳು ಮತ್ತು ಗ್ರಾಮೀಣ ಪ್ರದೇಶಗಳಿಗೆ ಚರಿತ್ರಾರ್ಹ ದಿನವಾಗಿದೆ ಎಂದರಲ್ಲದೆ ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳು ಮತ್ತು ನಾಗರಿಕರಿಗೆ ಶುಭ ಕೋರಿದರು.ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,