ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

May 04th, 08:21 am

ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಕನಸನ್ನು ಬಲವರ್ಧನೆಗೊಳಿಸಲು ಉಪರಾಷ್ಟ್ರಪತಿಗಳು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿಯವರು ಉಲ್ಲೇಖಿಸಿದರು. ಸಂಸದೀಯ ಕಲಾಪಗಳ ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಮಾಡಲು ಮತ್ತು ಅದರ ಪರಿಣಾಮ ಹೆಚ್ಚಳಕ್ಕೆ ನಿರಂತರ ಪ್ರಯತ್ನಗಳನ್ನು ಕೈಗೊಳ್ಳುತ್ತಿರುವುದು ಸಂಸದೀಯ ಮೌಲ್ಯಗಳಿಗೆ ಅವರ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.

ಪ್ರಧಾನಮಂತ್ರಿ ಅವರು ಭಾರತದ ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು

April 14th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಉಪ ರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ತಮಿಳು ಜನತೆಯ ಹೊಸ ವರ್ಷವಾದ ಪುತ್ತಾಂಡು ಹಬ್ಬದ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು.

ಉಪರಾಷ್ಟ್ರಪತಿಗಳನ್ನು ಭೇಟಿಯಾದ ಪ್ರಧಾನಮಂತ್ರಿ

February 16th, 09:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ ಉಪರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಶ್ರೀ.ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.

ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

October 20th, 07:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಪ್ರಧಾನಮಂತ್ರಿ ಅವರಿಂದ 24 ವರ್ಷಗಳ ಸಾರ್ವಜನಿಕ ಸೇವೆಗೆ ಶುಭ ಹಾರೈಸಿರುವ ಉಪರಾಷ್ಟ್ರಪತಿಗಳಿಗೆ ಧನ್ಯವಾದ ಸಮರ್ಪಣೆ

October 09th, 01:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 24 ವರ್ಷಗಳ ನಿರಂತರ ಸೇವೆಯನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಶುಭ ಹಾರೈಸಿದ್ದು, ಅವರ ಆತ್ಮೀಯ ನುಡಿಗಳು ಮತ್ತು ಶುಭಾಶಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಭಾರತದ ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

September 28th, 09:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿದರು.

ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

September 17th, 09:22 am

ತಮ್ಮ 75ನೇ ವರ್ಷದ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರ ಪತಿಗಳಾದ ಸಿ ಪಿ ರಾಧಾಕೃಷ್ಣನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಶುಭಾಶಯಗಳು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಪ್ರಧಾನಿಗಳು ಹೇಳಿದ್ದಾರೆ.

ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

September 12th, 12:16 pm

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಜನಸೇವೆಗೆ ಸಮರ್ಪಿತರಾದ ಶ್ರೀ ರಾಧಾಕೃಷ್ಣನ್ ಅವರ ಉಪರಾಷ್ಟ್ರಪತಿ ಅವಧಿ ಯಶಸ್ವಿಯಾಗಲಿ ಎಂದು ಶ್ರೀ ಮೋದಿ ಅವರು ಶುಭ ಹಾರೈಸಿದರು.

ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು

September 09th, 11:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.

2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

September 09th, 08:24 pm

ಪ್ರಧಾನಮಂತ್ರಿ ಅವರು ಇಂದು 2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನಮಂತ್ರಿ ಅವರು ಮತ ಚಲಾಯಿಸಿದರು

September 09th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದರು.

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿ ಶ್ರೀ. ಸಿ. ಪಿ. ರಾಧಾಕೃಷ್ಣನ್ ಅವರಿಂದ ಪ್ರಧಾನಮಂತ್ರಿ ಭೇಟಿ

August 18th, 03:14 pm

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀ.ಸಿ. ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಅಭ್ಯರ್ಥಿಯಾಗಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರ ನಾಮನಿರ್ದೇಶನ - ಪ್ರಧಾನಮಂತ್ರಿ ಸ್ವಾಗತ

August 17th, 08:54 pm

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌.ಡಿ.ಎ)ದ ನಿರ್ಧಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಶ್ರೀ ಜಗದೀಪ್ ಧನಕರ್ ಅವರಿಗೆ ಉತ್ತಮ ಆರೋಗ್ಯದ ಹಾರೈಕೆ

July 22nd, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಜಗದೀಪ್ ಧನಕರ್ ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ. ಭಾರತದ ಉಪರಾಷ್ಟ್ರಪತಿ ಪದವಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಶ್ರೀ ಜಗದೀಪ್ ಧನಕರ್ ಅವರಿಗೆ ಅನೇಕ ಅವಕಾಶಗಳು ಸಿಕ್ಕಿವೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ

April 21st, 08:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್‌ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್‌, ಅವರ ಮಕ್ಕಳು ಮತ್ತು ಯು.ಎಸ್‌. ಆಡಳಿತದ ಹಿರಿಯ ಸದಸ್ಯರು ಇದ್ದರು.

ಉಪರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ ಮತ್ತು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಮಂತ್ರಿ

March 09th, 04:32 pm

ಉಪರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಾರೈಸಿದ್ದಾರೆ. ಏಮ್ಸ್‌ ಗೆ ಹೋಗಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದೆ. ಉತ್ತಮ ಆರೋಗ್ಯ ಮತ್ತು ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ದೀಪಾವಳಿ ಶುಭಾಶಯಗಳನ್ನು ತಿಳಿಸಲು ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

October 31st, 10:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಹುಟ್ಟು ಹಬ್ಬದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಅವರಿಂದ ಕೃತಜ್ಞತೆ ಸಲ್ಲಿಕೆ

September 17th, 08:59 pm

ಜನುಮ ದಿನದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

'ಏಕ್ ಪೆಡ್ ಮಾ ಕೆ ನಾಮ್' ಅಡಿಯಲ್ಲಿ ಸಸಿ ನೆಟ್ಟ ಉಪರಾಷ್ಟ್ರಪತಿ ಅವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ

July 27th, 10:04 pm

ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಜಗದೀಪ್ ಧನಕರ್ ಅವರು ತಮ್ಮ ತಾಯಿಯ ಗೌರವಾರ್ಥ ಸಸಿ ನೆಡುತ್ತಿರುವುದು ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉಪರಾಷ್ಟ್ರಪತಿ ಅವರನ್ನು ಪ್ರಶಂಸಿಸಿದ್ದಾರೆ.

ಚಳಿಗಾಲದ ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ

December 04th, 11:56 am

ಚಳಿ, ಬಹುಶಃ ತಡವಾಗಿದೆ ಮತ್ತು ಇದು ಬಹಳ ನಿಧಾನವಾಗಿ ಸಮೀಪಿಸುತ್ತಿದೆ. ಆದರೆ ರಾಜಕೀಯ ಶಾಖ ಏರುತ್ತಿದೆ. ನಿನ್ನೆಯಷ್ಟೇ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ ಮತ್ತು ಫಲಿತಾಂಶ ಅತ್ಯಂತ ಪ್ರೋತ್ಸಾಹದಾಯಕವಾಗಿದೆ.