ಕ್ರೀಡಾ ಕಾರ್ಯಕ್ರಮಕ್ಕಾಗಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
July 10th, 08:21 am
ಭಾರತ-ಆಸ್ಟ್ರೇಲಿಯಾ ನಡುವಿನ ಕ್ರೀಡಾ ಸಂಬಂಧಗಳನ್ನು ಆಚರಿಸುವ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ವಿಕ್ಟೋರಿಯಾದ ಪ್ರೀಮಿಯರ್ ಗೌರವಾನ್ವಿತ ಜೆಸಿಂತಾ ಅಲನ್ ಅವರೊಂದಿಗೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕೆ ಭೇಟಿ ನೀಡಿದರು. ಶ್ರೀ ಸ್ಟೀವ್ ವಾ ಮತ್ತು ಶ್ರೀಮತಿ ಲಿಸಾ ಸ್ಥಾಲೇಕರ್ ಸೇರಿದಂತೆ ಹಲವು ಆಸ್ಟ್ರೇಲಿಯಾದ ಕ್ರೀಡಾ ದಿಗ್ಗಜರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಆಧಾರಸ್ತಂಭಗಳಾಗಿ ಕ್ರೀಡೆ, ಸಾಂಸ್ಕೃತಿಕ ವಿನಿಮಯ ಮತ್ತು ಜನರ ನಡುವಿನ ಸಂಬಂಧ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಈ ಭೇಟಿ ಬಲವಾಗಿ ಪ್ರತಿಪಾದಿಸಿತು.ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಭಾಗಿ
June 29th, 08:00 am
ಸೆಶೆಲ್ಸ್ ಅಧ್ಯಕ್ಷ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಸೆಶೆಲ್ಸ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಭಾರತ-ಸೆಷಲ್ಸ್ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮ (ಏ.8, 2021)
April 07th, 06:02 pm
ಸೆಷಲ್ಸ್ ನಲ್ಲಿ ಭಾರತ ಕೈಗೊಂಡಿರುವ ಹಲವು ಯೋಜನೆಗಳನ್ನು ಉದ್ಘಾಟಿಸಲು 2021ರ ಏಪ್ರಿಲ್ 8ರಂದು ನಡೆಯಲಿರುವ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಷಲ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ವಾವೆಲ್ ರಾಮ್ ಕಲಾವನ್ ಅವರೊಂದಿಗೆ ಭಾಗವಹಿಸಲಿದ್ದಾರೆ.