ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ವಿಯೆಟ್ನಾಂ ರಾಜ್ಯ ಅಧ್ಯಕ್ಷರು ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಯೊಂದಿಗೆ ಪ್ರಧಾನಮಂತ್ರಿ ಅವರ ಸಭೆ
September 24th, 12:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 23ರಂದು ಯುಎನ್ ಜಿಎಯಲ್ಲಿ ನಡೆದ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ರಾಜ್ಯ ಅಧ್ಯಕ್ಷ ಘನತೆವೆತ್ತ ಶ್ರೀ ತೋ ಲಾಮ್ ಅವರನ್ನು ನ್ಯೂಯಾರ್ಕ್ ನಲ್ಲಿ ಭೇಟಿಯಾದರು.ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.ವಿಯೆಟ್ನಾಂ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 20th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ವಿಯೆಟ್ನಾಂನ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿಯಾದರು.ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟನ್ನು ಉದ್ಘಾಟಿಸಲು ನಡೆದ ಕಾರ್ಯಕ್ರಮದಲ್ಲಿಪ್ರಧಾನಮಂತ್ರಿ ಅವರು ಭಾಗವಹಿಸಿದರು
May 23rd, 02:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿಇಂದು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟು (ಐ.ಪಿ.ಇ.ಎಘ್)ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್.ಬೈಡೆನ್ ಮತ್ತು ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಕಿಶಿಡಾ ಫುಮಿಯೊ ಮತ್ತು ಇತರ ಪಾಲುದಾರ ರಾಷ್ಟ್ರಗಳಾದ ಆಸ್ಪ್ರೇಲಿಯಾ, ಬ್ರೂನೈ, ಇಂಡೋನೇಷ್ಯಾ, ಕೊರಿಯಾ ಗಣರಾಜ್ಯ, ಮಲೇಷ್ಯಾ, ನ್ಯೂಜಿಲ್ಯಾಂಡ್, ಫಿಲಿಪೈನ್ಸ್, ಸಿಂಗಾಪುರ, ಥಾಯ್ಲೆಂಡ್ ಮತ್ತು ವಿಯೆಟ್ನಾಂನ ನಾಯಕರು ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ದೂರವಾಣಿ ಸಮಾಲೋಚನೆ
July 10th, 01:08 pm
ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.India - Vietnam Joint Vision for Peace, Prosperity and People
December 21st, 04:50 pm
PM Narendra Modi and PM Nguyen Xuan Phuc of Vietnam co-chaired a virtual summit on 21 December 2020, during which they exchanged views on wide-ranging bilateral, regional and global issues and set forth the 'Joint Vision for Peace, Prosperity and People' to guide the future development of India-Vietnam Comprehensive Strategic Partnership.ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳು
December 21st, 04:40 pm
ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳುIndia-Vietnam Leaders’ Virtual Summit
December 21st, 04:26 pm
Prime Minister Narendra Modi held a virtual summit with PM Nguyen Xuan Phuc of Vietnam. The two Prime Ministers reviewed ongoing bilateral cooperation initiatives, and also discussed regional and global issues. A ‘Joint Vision for Peace, Prosperity and People’ document was adopted during the Summit, to guide the future development of the India-Vietnam Comprehensive Strategic Partnership.Virtual Summit between Prime Minister Shri Narendra Modi and Prime Minister of Vietnam H.E. Nguyen Xuan Phuc
December 19th, 08:56 am
Prime Minister Shri Narendra Modi will be holding Virtual Summit with the Prime Minister of Vietnam H.E Mr. Nguyen Xuan Phuc on 21 December 2020.Telephone conversation between PM and Prime Minister of the Socialist Republic of Vietnam.
April 13th, 04:31 pm
Prime Minister Shri Narendra Modi had a telephone conversation today with H.E. Mr. Nguyen Xuan Phuc, Prime Minister of the Socialist Republic of Vietnam.ವಿಯೆಟ್ನಾಂನ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ
November 04th, 08:02 pm
ಬ್ಯಾಂಕಾಕ್ನಲ್ಲಿ ನಡೆದ ಭಾರತ-ಏಷಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ 2019 ರ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 04 ರಂದು ವಿಯೆಟ್ನಾಂ ಪ್ರಧಾನ ಮಂತ್ರಿ ಶ್ರೀ ನ್ಗುಯೆನ್ ಕ್ಸುವಾನ್ ಫುಕ್ ಅವರನ್ನು ಭೇಟಿಯಾದರು.ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.List of MoUs/Agreements signed during the State visit of President of Vietnam to India (March 03, 2018)
March 03rd, 06:07 pm
List of MoUs/Agreements signed during the State visit of President of Vietnam to India (March 03, 2018)India-Vietnam Joint Statement during State visit of President of Vietnam to India (March 03, 2018)
March 03rd, 01:14 pm
At the invitation of H. E. Shri Ram NathKovind, President of the Republic of India, H.E. Mr. Tran Dai Quang, President of the Socialist Republic of Viet Nam, and Spouse paid a State Visit to the Republic of India from 02-04 March 2018. The President of Viet Nam was accompanied by a high-level official delegation, including Deputy Prime Minister and Foreign Minister H.E. Mr. Pham Binh Minh, leaders of many ministries, provinces and a large business delegation.Statement by PM at Joint Press Meet with Vietnamese President
March 03rd, 01:13 pm
At the Joint Press Meet with Vietnamese President, PM Modi today highlighted steps being undertaken to further enhance the strategic partnership between both the countries in the fields of defence and security, trade and investment, energy, agriculture, science and technology and tourism. The leaders also discussed issues of global importance.ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ಡೆಸ್ಟಿನಿ: ನರೇಂದ್ರ ಮೋದಿ
January 26th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಿಯಾನ್ – ಭಾರತ ಪಾಲುದಾರಿಕೆಯ ಬಗ್ಗೆ ಸಂಪಾದಕೀಯ ಪುಟದ ಪಕ್ಕದ ಪುಟದಲ್ಲಿ ‘ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ನಿರ್ದಿಷ್ಟ ಸ್ಥಾನ (ಡೆಸ್ಟಿನಿ)’ ಎಂಬ ಶೀರ್ಷಿಕೆಯಡಿ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ಲೇಖನ ಆಸಿಯಾನ್ ಸದಸ್ಯ ರಾಷ್ಟ್ರಗಳ ಪ್ರಮುಖ ದೈನಿಕಗಳಲ್ಲಿ ಪ್ರಕಟವಾಗಿವೆ. ಈ ಲೇಖನದ ಪೂರ್ಣ ಪಾಠ ಈ ಕೆಳಕಂಡಂತಿದೆ.