ಶ್ರೀಮತಿ ವಿಜಯ ಮೆಹ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

July 01st, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಮತಿ ವಿಜಯ ಮೆಹ್ತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀಮತಿ ವಿಜಯ ಮೆಹ್ತಾ ಅವರು ಆಧುನಿಕ ಮರಾಠಿ ರಂಗಭೂಮಿಯ ಪ್ರವರ್ತಕರಾಗಿದ್ದರು. ಅವರು ಸೃಜನಶೀಲತೆ ಮತ್ತು ಕಲಾತ್ಮಕ ಶ್ರೇಷ್ಠತೆಗೆ ಹೆಸರುವಾಸಿಯಾಗಿದ್ದರು. ಅವರ ಕಾರ್ಯವೈಖರಿಯು ಅವರ ಸಮಕಾಲೀನ ನಟರು, ನಿರ್ದೇಶಕರು ಮತ್ತು ರಂಗಭೂಮಿ ಕೃಷಿಕರಿಗೆ ಸ್ಫೂರ್ತಿ ನೀಡಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.