ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ
February 08th, 11:19 am
ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್‌ಟೆಕ್' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.ಭಾರತಕ್ಕೆ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿರುವ ಬ್ರಿಟನ್ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ
October 08th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತಕ್ಕೆ ಐತಿಹಾಸಿಕ ಮೊದಲ ಭೇಟಿ ನೀಡುತ್ತಿರುವ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ: ಪ್ರಧಾನ ಮಂತ್ರಿಯವರು ಹರ್ಷ ವ್ಯಕ್ತಪಡಿಸಿದ್ದಾರೆ
February 12th, 12:52 pm
ಫೆಬ್ರವರಿ 24 ಮತ್ತು 25, 2020 ರಂದು ಮುಂಬರುವ ಅಮೆರಿಕ ಅಧ್ಯಕ್ಷರು ಭಾರತಕ್ಕೆ ನೀಡುವ ಭೇಟಿಯ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದರು. ಈ ಭೇಟಿ ಬಹಳ ವಿಶೇಷವಾದದ್ದು ಮತ್ತು ಉಭಯ ದೇಶಗಳ ಸ್ನೇಹ ಸಂಬಂಧವನ್ನು ಮತ್ತಷ್ಟು ಬಲಪಡಿಸುವಲ್ಲಿ ಬಹಳ ಮುಖ್ಯವಾಗಲಿದೆ ಎಂದು ಅವರು ಹೇಳಿದರು.Text of PM's Video Message on the occasion of launch of the “Visit India Year 2015” in China
February 03rd, 10:57 am
Text of PM's Video Message on the occasion of launch of the “Visit India Year 2015” in China