ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 02:06 pm
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ₹8,800 ಕೋಟಿ ರೂಪಾಯಿ ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
May 02nd, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ 8,800 ಕೋಟಿ ರೂ. ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಬಹುಪಯೋಗಿ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭಗವಾನ್ ಆದಿ ಶಂಕರಾಚಾರ್ಯರ ಜಯಂತಿಯ ಶುಭ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂರು ವರ್ಷಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ಸಿಕ್ಕಿತ್ತು ಎಂದು ಹೇಳಿದರು. ತಮ್ಮ ಸಂಸದೀಯ ಕ್ಷೇತ್ರವಾದ ಕಾಶಿಯಲ್ಲಿರುವ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು. ಈ ಪ್ರತಿಮೆ ಆದಿ ಶಂಕರಾಚಾರ್ಯರ ಅಪಾರ ಆಧ್ಯಾತ್ಮಿಕ ಜ್ಞಾನ ಮತ್ತು ಬೋಧನೆಗಳಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಅವರು ಒತ್ತಿ ಹೇಳಿದರು. ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮದಲ್ಲಿ ಆದಿ ಶಂಕರಾಚಾರ್ಯರ ದೈವಿಕ ಪ್ರತಿಮೆಯನ್ನು ಅನಾವರಣಗೊಳಿಸುವ ಗೌರವ ತಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕೇದಾರನಾಥ ದೇವಾಲಯದ ಬಾಗಿಲುಗಳು ಭಕ್ತರಿಗಾಗಿ ತೆರೆದಿರುವುದು ಇಂದು ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ಕೇರಳದಿಂದ ಬಂದ ಆದಿ ಶಂಕರಾಚಾರ್ಯರು ದೇಶದ ವಿವಿಧ ಮೂಲೆಗಳಲ್ಲಿ ಮಠಗಳನ್ನು ಸ್ಥಾಪಿಸಿ ರಾಷ್ಟ್ರದ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅವರ ಪ್ರಯತ್ನಗಳು ಏಕೀಕೃತ ಮತ್ತು ಆಧ್ಯಾತ್ಮಿಕವಾಗಿ ಪ್ರಬುದ್ಧವಾದ ಭಾರತಕ್ಕೆ ಅಡಿಪಾಯ ಹಾಕಿದವು ಎಂದು ಅವರು ಒತ್ತಿ ಹೇಳಿದರು.ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 30th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಮೇ 1ರಂದು ಮುಂಬೈಗೆ ಪ್ರಯಾಣಿಸಲಿದ್ದು, ಬೆಳಗ್ಗೆ 10.30ರ ಸುಮಾರಿಗೆ ವಿಶ್ವ ದೃಶ್ಯ ಶ್ರವಣ ಮತ್ತು ಮನರಂಜನಾ ಶೃಂಗಸಭೆ(ವೇವ್ಸ್-WAVES) ಉದ್ಘಾಟಿಸಲಿದ್ದಾರೆ.