ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ
December 30th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿರುವ ವರದಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 21st, 04:25 pm
ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 21st, 12:00 pm
ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
December 05th, 05:53 pm
ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
December 05th, 02:00 pm
ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.PM Modi’s remarks during the joint press meet with Russian President Vladimir Putin
December 05th, 01:50 pm
PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.ಪ್ರಧಾನಮಂತ್ರಿ ಅವರಿಂದ ರಷ್ಯಾ ಅಧ್ಯಕ್ಷರಿಗೆ ಸ್ವಾಗತ
December 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರಾದ ಪುಟಿನ್ ಅವರಿಗೆ ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ರಷ್ಯಾ ಅಧ್ಯಕ್ಷರ ಅನುಯಾಯಿಗಳಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
November 18th, 09:02 pm
ರಷ್ಯಾ ಒಕ್ಕೂಟದ ಸಾಗರ ಮಂಡಳಿಯ ಅಧ್ಯಕ್ಷರಾದ ಮತ್ತು ರಷ್ಯಾದ ರಾಷ್ಟಾಧ್ಯಕ್ಷರಾದ ಪುಟಿನ್ ಅವರ ಅನುಯಾಯಿಯಾದ ಶ್ರೀ ನಿಕೊಲಾಯ್ ಪತ್ರುಶೇವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂಭಾಷಣೆ; ಪುಟಿನ್ ಅವರ 73ನೇ ಜನುಮ ದಿನಕ್ಕೆ ಶುಭ ಹಾರೈಕೆ
October 07th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಇಂದು ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾದ ಉಪ ಪ್ರಧಾನಮಂತ್ರಿ ಡಿಮಿಟ್ರಿ ಪಟ್ರುಶೆವ್
September 25th, 08:56 pm
ರಷ್ಯಾ ಒಕ್ಕೂಟದ ಉಪ ಪ್ರಧಾನಮಂತ್ರಿ ಘನತೆವೆತ್ತ ಡಿಮಿಟ್ರಿ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಅಧ್ಯಕ್ಷರಾದ ಶ್ರೀ ಪುಟಿನ್
September 17th, 07:14 pm
ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಪ್ರಧಾನಮಂತ್ರಿ ಅವರ 75ನೇ ಹುಟ್ಟುಹಬ್ಬದಂದು ಅಧ್ಯಕ್ಷರಾದ ಶ್ರೀ ಪುಟಿನ್ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ರಷ್ಯಾ ಒಕ್ಕೂಟದ ಅಧ್ಯಕ್ಷರ ಶುಭಾಶಯಗಳು ಮತ್ತು ನಿರಂತರ ಸ್ನೇಹಕ್ಕಾಗಿ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ರಷ್ಯಾದ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆ
September 01st, 01:24 pm
ನಿಮ್ಮನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ ಮತ್ತು ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ನೆನಪಿನಲ್ಲಿಡುವ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಇದು ವಿವಿಧ ವಿಷಯಗಳ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ನಮಗೆ ಅವಕಾಶವನ್ನು ಒದಗಿಸುತ್ತದೆ.ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
September 01st, 01:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೀನಾದ ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ನೇಪಥ್ಯದಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು.ರಷ್ಯಾ-ಯುಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವ ಕುರಿತು ಪ್ರಧಾನಿ ಮೋದಿ ಅವರ ದೊಡ್ಡ ಹೇಳಿಕೆ
September 01st, 12:48 pm
ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸಿದರು, ಅಲ್ಲಿ ಯುಕ್ರೇನ್ ಸಂಘರ್ಷವು ಚರ್ಚೆಯ ಕೇಂದ್ರಬಿಂದುವಾಗಿತ್ತು. ಶಾಂತಿಗಾಗಿ ಇತ್ತೀಚಿನ ಪ್ರಯತ್ನಗಳನ್ನು ಪ್ರಧಾನಿ ಮೋದಿ ಸ್ವಾಗತಿಸಿದರು ಮತ್ತು ಎಲ್ಲಾ ಕಡೆಯವರು ರಚನಾತ್ಮಕವಾಗಿ ಮುಂದುವರಿಯುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು ಮತ್ತು ಶಾಶ್ವತ ಶಾಂತಿಗೆ ಮಾರ್ಗವನ್ನು ಕಂಡುಕೊಳ್ಳುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ವಿಶಾಲ ಮಾನವ ಆಯಾಮವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಇದು ಕೇವಲ ಪ್ರಾದೇಶಿಕ ಕಾಳಜಿಯಲ್ಲ, ಬದಲಾಗಿ ಮಾನವೀಯತೆಯ ಕರೆ ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಚೀನಾದ ಟಿಯಾಂಜಿನ್‌ಗೆ ಆಗಮಿಸಿದರು
August 30th, 04:00 pm
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಚೀನಾಕ್ಕೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಟಿಯಾಂಜಿನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಅವರು ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಅಧ್ಯಕ್ಷ ಪುಟಿನ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
August 18th, 05:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
August 08th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.