ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ
May 09th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ತನ್ನ ತುಷ್ಟೀಕರಣ ರಾಜಕೀಯವನ್ನು ಅನುಸರಿಸುತ್ತಿರುವಾಗ, ಬಿಆರ್‌ಎಸ್ ಮುಸ್ಲಿಂ ಐಟಿ ಪಾರ್ಕ್‌ನ ಪ್ರಸ್ತಾಪವನ್ನೂ ಮಾಡಿದೆ: ವಾರಂಗಲ್‌ನಲ್ಲಿ ಪ್ರಧಾನಿ ಮೋದಿ
May 08th, 10:20 am
ದಿನದ ಎರಡನೇ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ನನ್ನ ಹೃದಯದಲ್ಲಿ ಮತ್ತು ಬಿಜೆಪಿಯ ಪಯಣದಲ್ಲಿ ವಾರಂಗಲ್ ವಿಶೇಷ ಸ್ಥಾನವನ್ನು ಹೊಂದಿದೆ. 40 ವರ್ಷಗಳ ಹಿಂದೆ ಬಿಜೆಪಿ ಕೇವಲ 2 ಸಂಸದರನ್ನು ಹೊಂದಿದ್ದಾಗ ಅವರಲ್ಲಿ ಒಬ್ಬರು ಹನಮಕೊಂಡ. ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮಗೆ ಕಷ್ಟ ಬಂದಾಗಲೆಲ್ಲಾ ವಾರಂಗಲ್‌ನ ಜನರು ನಮ್ಮನ್ನು ಬೆಂಬಲಿಸಿದ್ದಾರೆ.