Yuva Shakti is driving developed India while strengthening cultural roots: PM at release of 500th Book of Shrimad Vijayaratna Sunder Surishwarji Maharaj
January 11th, 01:00 pm
Delivering his remarks during the release of Shrimad Vijayaratna Sunder Surishwarji Maharaj’s 500th book, PM Modi expressed confidence that this creation would benefit society, youth and humanity at large. He remarked that Maharaj’s 500 works are like a vast ocean containing countless gems of thought, offering simple and spiritual solutions to humanity’s problems. The PM also recalled the nine appeals and nine resolutions he had made for the welfare of the society.PM Modi’s remarks during release of Shrimad Vijayaratna Sunder Surishwarji Maharaj’s 500th book
January 11th, 12:44 pm
Delivering his remarks during the release of Shrimad Vijayaratna Sunder Surishwarji Maharaj’s 500th book, PM Modi expressed confidence that this creation would benefit society, youth and humanity at large. He remarked that Maharaj’s 500 works are like a vast ocean containing countless gems of thought, offering simple and spiritual solutions to humanity’s problems. The PM also recalled the nine appeals and nine resolutions he had made for the welfare of the society.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ನವ ರಾಯ್‌ಪುರದ “ಸತ್ಯಸಾಯಿ ಸಂಜೀವಿನಿ ಮಕ್ಕಳ ಹೃದ್ರೋಗ ಆಸ್ಪತ್ರೆ”ಯಲ್ಲಿ ಯಶಸ್ವೀ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿ ಸಂವಾದ
November 01st, 05:30 pm
ನಾನು ಹಾಕಿ ಚಾಂಪಿಯನ್. ನಾನು ಹಾಕಿಯಲ್ಲಿ 5 ಪದಕಗಳನ್ನು ಗೆದ್ದಿದ್ದೇನೆ. ನನ್ನ ಶಾಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ, ನನ್ನ ಹೃದಯದಲ್ಲಿ ರಂಧ್ರವಿದೆ ಎಂದು ವೈದ್ಯರು ಪತ್ತೆ ಹಚ್ಚಿದರು. ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದೆ, ಶಸ್ತ್ರಚಿಕಿತ್ಸೆಗೆ ಒಳಗಾದೆ, ನಾನೀಗ ಗುಣಮುಖವಾಗಿದ್ದು, ನಾನು ಮತ್ತೆ ಹಾಕಿ ಆಡಬಹುದು.ಜನ್ಮಜಾತ ಹೃದಯ ಕಾಯಿಲೆಗಳನ್ನು ಉತ್ತಮ ಚಿಕಿತ್ಸೆ ಮೂಲಕ ನಿವಾರಿಸಿಕೊಂಡ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
November 01st, 05:15 pm
'ಹೃದಯದ ಮಾತು (ದಿಲ್ ಕಿ ಬಾತ್)' ಕಾರ್ಯಕ್ರಮದ ಭಾಗವಾಗಿ, ಛತ್ತೀಸ್ ಗಢದ ನವ ರಾಯ್ ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆದ 'ಜೀವನದ ಉಡುಗೊರೆ' ಸಮಾರಂಭದಲ್ಲಿ ಜನ್ಮಜಾತ ಹೃದಯ ಕಾಯಿಲೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಿದರು.ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡರು
September 09th, 03:01 pm
ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9, 2025 ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 28th, 11:15 am
ಶ್ರವಣಬೆಳಗೊಳದ ಸ್ವಾಮಿ ಚಾರುಕೀರ್ತಿ ಜಿ ಮುಖ್ಯಸ್ಥರಾದ ಪರಮ ಶ್ರದ್ಧೆಯ ಆಚಾರ್ಯ ಶ್ರೀ ಪ್ರಜ್ಞಾಸಾಗರ ಮಹಾರಾಜ್ ಜಿ, ನನ್ನ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜಿ, ನನ್ನ ಸಹ ಸಂಸದ ನವೀನ್ ಜೈನ್ ಜಿ, ಭಗವಾನ್ ಮಹಾವೀರ ಅಹಿಂಸಾ ಭಾರತಿ ಟ್ರಸ್ಟ್ ಅಧ್ಯಕ್ಷ ಪ್ರಿಯಾಂಕ್ ಜೈನ್ ಜಿ, ಕಾರ್ಯದರ್ಶಿ ಮಮತಾ ಜೈನ್ ಜಿ, ಇತರೆ ಗೌರವಾನ್ವಿತ ಗಣ್ಯರೆ, ಪೂಜ್ಯ ಸಾಧು ಸಂತರೆ, ಮಹಿಳೆಯರೆ ಮತ್ತು ಮಹನೀಯರೆ, ಜೈ ಜಿನೇಂದ್ರ!ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 28th, 11:01 am
ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಆಚಾರ್ಯ ಶ್ರೀ ವಿದ್ಯಾನಂದ ಜಿ ಮುನಿರಾಜ್ ಅವರ ಶತಮಾನೋತ್ಸವ ಆಚರಣೆಯ ಪಾವಿತ್ರ್ಯವನ್ನು ಪ್ರಸ್ತಾಪಿಸಿದ ಅವರು, ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಒಂದು ಮಹತ್ವದ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿದೆ. ಪೂಜ್ಯ ಆಚಾರ್ಯರ ಅಮರ ಸ್ಫೂರ್ತಿಯಿಂದ ತುಂಬಿರುವ ಈ ಕಾರ್ಯಕ್ರಮವು ಅಸಾಧಾರಣ ಮತ್ತು ಉನ್ನತಿಗೇರಿಸುವ ವಾತಾವರಣವನ್ನು ಸೃಷ್ಟಿಸುತ್ತಿದೆ. ಇಲ್ಲಿ ನೆರೆದಿರುವ ಎಲ್ಲಾ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಕ್ಕ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 01:00 pm
ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.