ಪ್ರಧಾನಮಂತ್ರಿ ಅವರಿಂದ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 3ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ
August 20th, 09:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಮತ್ತು ವಿದೇಶಾಂಗ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಬಗ್ಗೆ ಅವರು ಚರ್ಚಿಸಿದರು.ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ
August 06th, 06:55 pm
ಭಾರತ-ಇಸ್ರೇಲ್ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸಂಪರ್ಕದಲ್ಲಿರಲು ಒಪ್ಪಿಕೊಂಡರು.PM chairs CCS Meeting to review the situation in context of ongoing West Asia Conflict
July 30th, 07:38 pm
Prime Minister Shri Narendra Modi today chaired a meeting of the Cabinet Committee on Security (CSS) to review the situation in the context of ongoing West Asia conflict and measures taken by various Ministries and Departments. This was the 4th special CCS meeting on the issue.ಸಂಸತ್ತಿನ 2026ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 20th, 10:30 am
ಮುಂಗಾರಿನ ಪ್ರಯೋಜನಗಳು ಗೋಚರಿಸುತ್ತಿವೆ ಮತ್ತು ಮಳೆಗಾಲದ ಅಧಿವೇಶನವೂ ಪ್ರಾರಂಭವಾಗುತ್ತಿದೆ. ಅದು ಮುಂಗಾರು ಮಳೆಯಾಗಿರಲಿ ಅಥವಾ ಮುಂಗಾರು ಅಧಿವೇಶನವಾಗಲಿ - ಎರಡೂ ಸಕ್ರಿಯವಾಗಿದ್ದಾಗ, ಅವು ಹೆಚ್ಚು ಉತ್ಪಾದಕವಾಗುತ್ತವೆ; ಮತ್ತು ಎರಡೂ ಉತ್ಪಾದಕವಾಗಿದ್ದರೆ, ಅದು ರಾಷ್ಟ್ರದ ಕಲ್ಯಾಣ ಮತ್ತು ಎಲ್ಲಾ ಜೀವಿಗಳ ಯೋಗಕ್ಷೇಮಕ್ಕೆ ಕಾರಣವಾಗುತ್ತದೆ. ಆದ್ದರಿಂದ, ಮುಂಗಾರು ಸಕ್ರಿಯವಾಗಿ ಇರಲಿ ಮತ್ತು ಮುಂಗಾರಿನ ಅಧಿವೇಶನವು ಉತ್ಪಾದಕವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ.2026ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
July 20th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2026ರ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಹೊಸ ಸಂಸತ್ತಿನ ಅಧಿವೇಶನದ ಆರಂಭಕ್ಕೆ ಆಗಮಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ನೈಸರ್ಗಿಕ ಹವಾಮಾನ ಮಾದರಿಗಳು ಮತ್ತು ಶಾಸಕಾಂಗ ಉತ್ಪಾದಕತೆಯ ನಡುವೆ ಸಮಾನಾಂತರವಾದ ಹೋಲಿಕೆಯನ್ನು ಮಾಡಿದರು. ರಾಷ್ಟ್ರದ ಸರ್ವತೋಮುಖ ಯೋಗಕ್ಷೇಮದ ಮೇಲೆ ಸಕ್ರಿಯ ಮತ್ತು ದೂರದೃಷ್ಟಿಯ ಕ್ರಮಗಳ ಆಳವಾದ ಪ್ರಭಾವವನ್ನು ಎತ್ತಿಹಿಡಿದ ಪ್ರಧಾನಮಂತ್ರಿಯವರು, ಅಂತಿಮವಾಗಿ ಪ್ರತಿಯೊಂದು ಜೀವಿಗೂ ಪ್ರಯೋಜನವನ್ನು ನೀಡುವ ಅತ್ಯಂತ ರಚನಾತ್ಮಕ ಫಲಿತಾಂಶಗಳ ನಿರೀಕ್ಷೆಯನ್ನು ವ್ಯಕ್ತಪಡಿಸಿದರು. ಮುಂಗಾರು ಸಕ್ರಿಯವಾಗಿರಲಿ ಮತ್ತು ಮುಂಗಾರು ಅಧಿವೇಶನವೂ ಉತ್ಪಾದಕವಾಗಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ, ಎಂದು ಶ್ರೀ ಮೋದಿ ಹೇಳಿದರು.ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ
July 11th, 07:59 am
ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಉಪಕ್ರಮಗಳಿಗೆ ಹೆಚ್ಚು ಸಹಯೋಗದ ಶಕ್ತಿಯನ್ನು ನೀಡುವ ಇಂಗಿತವನ್ನು ತಮ್ಮ ಉತ್ಸಾಹದ ಮಾತುಗಳಲ್ಲಿ ವ್ಯಕ್ತಪಡಿಸಿದರು. ಬೇಸಿಗೆಯ ತೀವ್ರ ಬಿಸಿಲಿನ ಬಿಸಿಲಿನ ತಾಪವನ್ನು ಧೈರ್ಯದಿಂದ ನಿಭಾಯಿಸಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಬೃಹತ್ ಪ್ರಮಾಣದ ಜನಸಮೂಹದ ಪಾಲ್ಗೊಳ್ಳುವಿಕೆಯು ಪ್ರಸ್ತುತ ಆಡಳಿತಕ್ಕೆ ನೀಡಿರುವ ಬೆಂಬಲದ ದೃಢೀಕರಣವಾಗಿದೆ ಎಂದು ವ್ಯಾಖ್ಯಾನಿಸಿದರು. ಈ ಅಪಾರ ಬೆಂಬಲಕ್ಕಾಗಿ ನಾನು ರಾಜಸ್ಥಾನದ ಮಣ್ಣಿಗೆ ಸಂಪೂರ್ಣವಾಗಿ ಋಣಿಯಾಗಿದ್ದೇನೆ, ಇದು ನಮ್ಮ ಸರ್ಕಾರದ ಪ್ರಯತ್ನಗಳಲ್ಲಿ ನಿಮ್ಮ ಅತ್ಯುನ್ನತ ನಂಬಿಕೆಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ
June 30th, 09:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೂದ್ ಪೆಜೆಷ್ಕಿಯಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ
June 28th, 11:30 am
‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕತಾರ್ ನ ಅಮೀರ್ ದೂರವಾಣಿ ಕರೆ
June 23rd, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 18th, 05:04 am
ಜೂನ್ 17, 2026 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಭೇಟಿಯಾದರು.ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ
June 18th, 05:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು
June 17th, 06:07 pm
ಫ್ರಾನ್ಸ್‌ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.ಎವಿಯಾನ್ ನಲ್ಲಿ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
June 17th, 05:34 pm
ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದಿರುವ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಮಾನ್ಯ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಿದರು. ಈ ವರ್ಷದಲ್ಲಿ ಉಭಯ ನಾಯಕರ ನಡುವಿನ ಎರಡನೇ ಭೇಟಿ ಇದಾಗಿದೆ.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 17th, 12:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. 2026ರಲ್ಲಿ ಉಭಯ ನಾಯಕರ ನಡುವಿನ ಮೂರನೇ ಭೇಟಿ ಇದಾಗಿದ್ದು, ಇದು ಬಲವಾದ ಮತ್ತು ರೋಮಾಂಚಕ ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
June 17th, 12:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಕೊನೆಗೊಳಿಸುವ ಕುರಿತಾದ ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಸ್ವಾಗತಿಸಿರುವ ಪ್ರಧಾನಮಂತ್ರಿ
June 15th, 01:21 pm
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ಕುರಿತಾದ ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಒಪ್ಪಂದವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.ಕುವೈತ್ ಅಮೀರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತುಕತೆ
June 09th, 03:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ಅಮೀರ್ ಮಾನ್ಯ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
May 23rd, 04:20 pm
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ ಮಾರ್ಕೊ ರುಬಿಯೊ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ