India-New Zealand relationship built on enduring friendship, shared values, common commitment: PM Modi in Auckland
July 11th, 01:15 pm
PM Modi addressed a vibrant community event in Auckland, praising the Indian diaspora as a strong bridge between India and New Zealand. He highlighted the elevation of bilateral ties to a Strategic Partnership, celebrated 100 years of sporting ties between the two countries and underscored the shared heritage and deepening partnership between the two nations.Prime Minister Addresses the Indian Diaspora in New Zealand
July 11th, 12:35 pm
PM Modi addressed a vibrant community event in Auckland, praising the Indian diaspora as a strong bridge between India and New Zealand. He highlighted the elevation of bilateral ties to a Strategic Partnership, celebrated 100 years of sporting ties between the two countries and underscored the shared heritage and deepening partnership between the two nations.Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16th, 10:12 pm
Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ
June 16th, 10:07 pm
ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 16th, 01:30 pm
ಇದೀಗ ಸ್ಟಾರ್ಟಪ್ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್‌ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 12th, 06:45 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು
January 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಇಂದು, ನಾರಿ ಶಕ್ತಿ ವಿಕಸಿತ ಭಾರತದ ನಿರ್ಣಯದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಮತ್ತು ಕ್ಷೇತ್ರಗಳಲ್ಲಿ ಮಾದರಿಯಾಗಿದೆ: ಪ್ರಧಾನಮಂತ್ರಿ
June 08th, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿವೃದ್ಧಿ ಹೊಂದಿದ ಭಾರತದೆಡೆಗಿನ ಪಯಣದಲ್ಲಿ ಮಹಿಳೆಯರು ವಹಿಸಿದ ಪರಿವರ್ತನಾತ್ಮಕ ಪಾತ್ರವನ್ನು ಬಿಂಬಿಸಿದರು, ಕಳೆದ 11 ವರ್ಷಗಳಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ನೀಡಿರುವ ಗಮನವನ್ನು ಒತ್ತಿ ಹೇಳಿದರು.Our government is making the vision of women-led development the axis of development: PM Modi in Bhopal, Madhya Pradesh
May 31st, 11:00 am
PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು
May 31st, 10:27 am
ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಭೋಪಾಲ್ ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಮಾ ಭಾರತಿ'ಗೆ ಗೌರವ ಸಲ್ಲಿಸುವ ಮೂಲಕ ಮತ್ತು ಭಾರತದ ಮಹಿಳೆಯರ ಶಕ್ತಿಯನ್ನು ಅಂಗೀಕರಿಸುವ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮವನ್ನು ಆಶೀರ್ವದಿಸಲು ಬಂದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ದೊಡ್ಡ ಗುಂಪಿಗೆ ಅವರು ಕೃತಜ್ಞತೆ ಸಲ್ಲಿಸಿದರು, ಅವರ ಉಪಸ್ಥಿತಿಯಿಂದ ತಮಗೆ ಗೌರವವಿದೆ ಎಂದು ಹೇಳಿದರು. ಇಂದು ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ, ಇದು 140 ಕೋಟಿ ಭಾರತೀಯರಿಗೆ ಸ್ಫೂರ್ತಿಯ ಸಂದರ್ಭ ಮತ್ತು ರಾಷ್ಟ್ರ ನಿರ್ಮಾಣದ ಸ್ಮರಣೀಯ ಪ್ರಯತ್ನಗಳಿಗೆ ಕೊಡುಗೆ ನೀಡುವ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇವಿ ಅಹಲ್ಯಾಬಾಯಿ ಅವರನ್ನು ಉಲ್ಲೇಖಿಸಿದ ಅವರು, ನಿಜವಾದ ಆಡಳಿತ ಎಂದರೆ ಜನರ ಸೇವೆ ಮತ್ತು ಅವರ ಜೀವನವನ್ನು ಸುಧಾರಿಸುವುದು ಎಂದು ಪುನರುಚ್ಚರಿಸಿದರು. ಇಂದಿನ ಕಾರ್ಯಕ್ರಮವು ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಮತ್ತು ಅವರ ಆದರ್ಶಗಳನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು. ಇಂದೋರ್ ಮೆಟ್ರೋಗೆ ಚಾಲನೆ ನೀಡಿರುವುದನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ದಾತಿಯಾ ಮತ್ತು ಸತ್ನಾಕ್ಕೆ ವಾಯು ಸಂಪರ್ಕವನ್ನು ಸೇರಿಸಲಾಯಿತು. ಈ ಯೋಜನೆಗಳು ಮಧ್ಯಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುತ್ತವೆ, ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಹಾಜರಿದ್ದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.