ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

September 16th, 08:47 am

2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ, ವೇಗ ಮತ್ತು ಉತ್ಸಾಹ ಅವರನ್ನು ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆ ಅಸಂಖ್ಯಾತ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಶ್ರೀ ಮೋದಿ ಅವರು ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಶಂಸಿಸಿದ್ದಾರೆ.