ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ ಶಿಪ್ 2026ರಲ್ಲಿ ಐತಿಹಾಸಿಕ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ

July 26th, 03:28 pm

ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ ಶಿಪ್‌ 2026ರಲ್ಲಿ ಐತಿಹಾಸಿಕ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ. ಚಿನ್ನದ ಪದಕ ಜಯಿಸಿರುವ ಮತ್ತು ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸ್ಕ್ವಾಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅನಾಹತ್ ಸಿಂಗ್ ಅವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.