ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ

April 02nd, 02:00 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

January 26th, 05:56 pm

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಪ್ರಧಾನಿ ಮೋದಿ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು

September 17th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ಮದಿನದ ಶುಭಾಶಯಗಳನ್ನು ಕೋರಿದ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದಗಳು

August 15th, 09:20 pm

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಪ್ರಗತಿಯತ್ತ ರಾಷ್ಟ್ರದ ಪ್ರಯಾಣ ಮತ್ತು ಅದರ ಬೆಳೆಯುತ್ತಿರುವ ಜಾಗತಿಕ ಪ್ರಭಾವವನ್ನು ಒತ್ತಿ ಹೇಳಿದರು. ಪ್ರಧಾನಿಯವರು ಅಂತಾರಾಷ್ಟ್ರೀಯ ಸಂಬಂಧಗಳ ಬಲವನ್ನು ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಹಂಚಿಕೊಂಡ ದೃಷ್ಟಿಯನ್ನು ಎತ್ತಿ ತೋರಿಸಿದರು.

100 ಮಿಲಿಯನ್ ಫಾಲೋವರ್ಸ್ ದಾಟಿದ ಪ್ರಧಾನಮಂತ್ರಿ ಯವರ X ಖಾತೆ

July 14th, 10:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಖಾತೆಯು ಸಾಮಾಜಿಕ ಮಾಧ್ಯಮವಾದ ' X'ನಲ್ಲಿ ನೂರು ಮಿಲಿಯನ್ ಅನುಸಾರಕರನ್ನು ದಾಟಿದೆ. ಅವರು ಈ ವೇದಿಕೆಯಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವ ನಾಯಕರಾಗಿ ಮುಂದುವರೆದಿದ್ದಾರೆ.

ಭಾರತದ 18 ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಧಾನಿಯವರಿಗೆ ವಿಶ್ವ ನಾಯಕರಿಂದ ಅಭಿನಂದನಾ ಸಂದೇಶಗಳು

June 05th, 04:45 pm

ಭಾರತದಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಅಭಿನಂದನಾ ಸಂದೇಶಗಳನ್ನು ಕಳುಹಿಸಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ 'X' ನಲ್ಲಿ ವಿಶ್ವ ನಾಯಕರ ಸಂದೇಶಗಳಿಗೆ ಶ್ರೀ ಮೋದಿ ಪ್ರತಿಕ್ರಿಯಿಸಿದ್ದಾರೆ.