25ನೇ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ

September 01st, 10:14 am

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 25ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನನಗೆ ಸಂತಸವಾಗಿದೆ. ಸಂಭ್ರಮದಿಂದ ಸ್ವಾಗತಿಸಿ, ಸಂತೋಷದಿಂದ ಆತಿಥ್ಯ ಸತ್ಕಾರ ನೀಡಿದ ಅಧ್ಯಕ್ಷರಾದ ಕ್ಸಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ತಿಯಾನ್ ಜಿನ್ ನಲ್ಲಿ ಚೀನಾ ಅಧ್ಯಕ್ಷರಾದ ಕ್ಸಿ ಜಿನ್ ಪಿಂಗ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

August 31st, 11:06 am

ನಿಮ್ಮ ಆತ್ಮೀಯ ಸ್ವಾಗತಕ್ಕೆ ನನ್ನ ಹೃತ್ಪೂರ್ವಕ ವಂದನೆಗಳು. ಕಜಾನ್ ನಲ್ಲಿ ಕಳೆದ ವರ್ಷ ನಾವು ನಡೆಸಿದ ಅರ್ಥಪೂರ್ಣ ಚರ್ಚೆಯು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ದಿಶೆಯನ್ನು ನೀಡಿದೆ. ಗಡಿಯಲ್ಲಿ ಯುದ್ಧದ ಸನ್ನಿವೇಶದಿಂದ ಹಿಂದಕ್ಕೆ ಸರಿದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನೆಲೆಸಿದೆ. ನಮ್ಮ ವಿಶೇಷ ಪ್ರತಿನಿಧಿಗಳು ಗಡಿ ನಿರ್ವಹಣೆಯ ಕುರಿತು ಒಮ್ಮತದ ತಿಳುವಳಿಕೆ ಹೊಂದಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಯು ಪುನರಾರಂಭಗೊಂಡಿದೆ ಮತ್ತು ಎರಡೂ ದೇಶಗಳ ನಡುವೆ ನೇರ ವಿಮಾನ ಸೇವೆಯನ್ನೂ ಸಹ ಪ್ರಾರಂಭಿಸಲಾಗುತ್ತಿದೆ. ನಮ್ಮ ನಡುವಿನ ಸಹಕಾರವು ನಮ್ಮ ಎರಡೂ ರಾಷ್ಟ್ರಗಳ 2.8 ಶತಕೋಟಿ ಜನರ ಹಿತಾಸಕ್ತಿಗಳಿಗೆ ಸಂಬಂಧಿಸಿದೆ. ಇದು ಎಲ್ಲಾ ಮಾನವೀಯ ಕಲ್ಯಾಣಕ್ಕೂ ದಾರಿ ಮಾಡಿಕೊಡಲಿದೆ. ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮ ಭಾವನಾತ್ಮಕತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ.

ಚೀನಾ ಅಧ್ಯಕ್ಷರಾದ ಕ್ಸಿ ಜಿನ್ಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ಅವರ ದ್ವಿಪಕ್ಷೀಯ ಮಾತುಕತೆ

August 31st, 11:00 am

ಆಗಸ್ಟ್ 31, 2025 ರಂದು ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್.ಸಿ.ಒ.) ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದರು.

ಪ್ರಧಾನಿ ಮೋದಿ ಅವರು ಚೀನಾದ ಟಿಯಾಂಜಿನ್‌ಗೆ ಆಗಮಿಸಿದರು

August 30th, 04:00 pm

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಚೀನಾಕ್ಕೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಟಿಯಾಂಜಿನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಅವರು ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಅಧ್ಯಕ್ಷ ಪುಟಿನ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರ ಜಪಾನ್ ಮತ್ತು ಚೀನಾ ದೇಶಗಳ ಭೇಟಿಯ ಮುನ್ನಾ ದಿನದಂದು ನೀಡಿರುವ ನಿರ್ಗಮನ ಹೇಳಿಕೆ

August 28th, 08:40 pm

ನನ್ನ ಭೇಟಿಯ ಸಮಯದಲ್ಲಿ, ಕಳೆದ ಹನ್ನೊಂದು ವರ್ಷಗಳಲ್ಲಿ ಆಗಿರುವ ಸ್ಥಿರತೆ ಕುರಿತು ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಿರುವ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಮುಂದಿನ ಹಂತವನ್ನು ರೂಪಿಸುವತ್ತ ನಾವು ಗಮನಹರಿಸುತ್ತೇವೆ. ನಮ್ಮ ಸಹಯೋಗಕ್ಕೆ ಹೊಸ ರೆಕ್ಕೆ ಹಾಗೂ ಆಯಾಮಗಳನ್ನು ನೀಡಲು, ನಮ್ಮ ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸಲು ಮತ್ತು ಕೃತಕ ಬುದ್ಧಿಮತ್ತೆ (ಎಐ)ಮತ್ತು ಸೆಮಿಕಂಡಕ್ಟರ್‌ ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಮುನ್ನಡೆಸಲು ನಾವು ಪ್ರಯತ್ನಿಸುತ್ತೇವೆ. ಈ ಭೇಟಿಯು ನಮ್ಮ ನಾಗರಿಕತೆಯ ಪರಸ್ಪರ ಬಂಧಗಳು ಮತ್ತು ನಮ್ಮ ಜನರನ್ನು ಸಂಪರ್ಕಿಸುವ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ.

ಜಪಾನ್ ಮತ್ತು ಚೀನಾಕ್ಕೆ ಪ್ರಧಾನ ಮಂತ್ರಿಗಳ ಭೇಟಿ

August 22nd, 06:15 pm

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಆಗಸ್ಟ್ 29–30, 2025 ರವರೆಗೆ ಜಪಾನ್‌ಗೆ ಮತ್ತು ಆಗಸ್ಟ್ 31–1, 2025 ರವರೆಗೆ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಜಪಾನ್‌ನಲ್ಲಿ, ಪ್ರಧಾನಿಯವರು 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಜಪಾನಿನ ಪ್ರಧಾನಿ ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಚೀನಾದಲ್ಲಿ, ಪ್ರಧಾನಿಯವರು ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Mutual trust, mutual respect & mutual sensitivity should continue to be the basis of our relations: PM Modi in meeting with President Xi Jinping

October 23rd, 07:35 pm

Prime Minister Narendra Modi met with Mr. Xi Jinping, President of the People’s Republic of China, on the sidelines of the 16th BRICS Summit at Kazan on 23 October 2024.

ಪ್ರಧಾನಮಂತ್ರಿ ಅವರಿಂದ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ ಪಿಂಗ್ ಅವರ ಭೇಟಿ

October 23rd, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಅಕ್ಟೋಬರ್ 23 ರಂದು ಕಜಾನ್ನಲ್ಲಿ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿದರು.

12ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತದ ಭಾಗವಹಿಸುವಿಕೆಯನ್ನು ಮುನ್ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

November 17th, 04:00 pm

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅಧ್ಯಕ್ಷತೆಯಲ್ಲಿ 2020ರ ನವೆಂಬರ್ 17ರಂದು ವರ್ಚುವಲ್ ರೂಪದಲ್ಲಿ ನಡೆದ 12ನೇ ಬ್ರಿಕ್ಸ್ ಶೃಂಗಸಭೆಯ ಭಾರತದ ಪಾಲ್ಗೊಳ್ಳುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುನ್ನಡೆಸಿದರು. ಈ ಶೃಂಗಸಭೆಯ ಘೋಷ ವಾಕ್ಯ “ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನಾವಿನ್ಯ ಬೆಳವಣಿಗೆ’’ ಎಂಬುದಾಗಿತ್ತು. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸೈರಿಲ್ ರಾಮಫೋಸ ಮತ್ತಿತರರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

PM Modi's remarks at BRICS Dialogue with Business Council and New Development Bank

November 14th, 09:40 pm

PM Modi addressed the Dialogue with BRICS Business Council and New Development Bank. The PM said the BRICS Business Council should make a roadmap of achieving the target of $500 billion Intra-BRICS trade. He also urged BRICS nations and New Development Bank to join coalition for disaster resilient infrastructure.

ಭಾರತದಲ್ಲಿ ಬ್ರಿಕ್ಸ್ ಜಲ ಸಚಿವರುಗಳ ಪ್ರಥಮ ಸಭೆ ಆಯೋಜಿಸಲು ಪ್ರಧಾನಮಂತ್ರಿ ಪ್ರಸ್ತಾಪ

November 14th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಜಿಲ್ ನಲ್ಲಿಂದು 11ನೇ ಬ್ರಿಕ್ಸ್ ಶೃಂಗಸಭೆಯ ಮಹಾಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಬ್ರಿಕ್ಸ್ ಇತರ ರಾಷ್ಟ್ರಗಳ ಮುಖ್ಯಸ್ಥರುಗಳು ಕೂಡ ಈ ಮಹಾಧಿವೇಶನದಲ್ಲಿ ಮಾತನಾಡಿದರು.

Prime Minister's remarks at BRICS Business Forum

November 14th, 11:24 am

PM Modi addressed BRICS Business Forum in Brazil. He said that India was the world's most open and investment friendly economy due to political stability, predictable policy and business friendly reforms.

ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಹೊರತಾಗಿಯೂ, ಬ್ರಿಕ್ಸ್ ದೇಶಗಳು ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಿವೆ, ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿವೆ: ಪ್ರಧಾನಮಂತ್ರಿ

November 14th, 11:23 am

ರಾಜಕೀಯ ಸ್ಥಿರತೆ, ನಿರ್ವಹಿಸಬಹುದಾದ ನೀತಿ ಮತ್ತು ವ್ಯಾಪಾರ ಸ್ನೇಹಿ ಸುಧಾರಣೆಗಳಿಂದಾಗಿ ಭಾರತ ವಿಶ್ವದ ಅತ್ಯಂತ ಮುಕ್ತ ಮತ್ತು ಹೂಡಿಕೆ ಸ್ನೇಹಿ ಆರ್ಥಿಕತೆಯಾಗಿದೆ: ಪ್ರಧಾನಿ

11ನೇ ಬ್ರಿಕ್ಸ್ ಶೃಂಗಸಭೆಯ ವೇಳೆ ಚೀನಾ ಪ್ರಜಾ ಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 14th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ನವೆಂಬರ್ 13ರಂದು ಬ್ರೆಸಿಲಿಯಾದಲ್ಲಿ 11ನೇ ಬ್ರಿಕ್ಸ್ ಶೃಂಗಸಭೆಯ ವೇಳೆ ಚೈನಾ ಪ್ರಜಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Prime Minister's visit to Brasilia, Brazil

November 12th, 01:07 pm

PM Modi will be visiting Brasilia, Brazil during 13-14 November to take part in the BRICS Summit. The PM will also hold bilateral talks with several world leaders during the visit

ಪ್ರಧಾನಮಂತ್ರಿ ನವೆಂಬರ್ 13 ಮತ್ತು 14ರಂದು ಬ್ರೆಜಿಲ್ ನಲ್ಲಿ ನಡೆಯಲಿರುವ ಬ್ರಿಕ್ಸ್

November 11th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2019ರ ನವೆಂಬರ್ 13 ಮತ್ತು 14ರಂದು

‘Chennai Connect’ begins a New Era of Cooperation in India-China relations says Prime Minister Narendra Modi

October 12th, 03:09 pm

Prime Minister Narendra Modi termed that 2nd Informal Summit at Mamallapuram, Chennai, Tamil Nadu has begun a “New Era of Cooperation” between India and China.

ಪ್ರಧಾನಮಂತ್ರಿ ಮೋದಿ, ಚೈನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಮಿಳುನಾಡಿನ ಮಮಲ್ಲಾಪುರಂಗೆ ಭೇಟಿ ನೀಡಿದರು.

October 11th, 09:04 pm

ಭಾರತ ಮತ್ತು ಚೈನಾ ನಡುವಿನ ಎರಡನೇ ಅನೌಪಚಾರಿಕ ಶೃಂಗಸಭೆ ವೇಳೆ ಪ್ರಧಾನಮಂತ್ರಿ ಮೋದಿ, ಚೈನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರಿಂದ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ತಮಿಳುನಾಡಿನ ಮಮಲ್ಲಾಪುರಂಗೆ ಭೇಟಿ. ಇಬ್ಬರೂ ನಾಯಕರು ಅರ್ಜುನ ತಪವನ್ನಾಚರಿಸಿದ ಸ್ಥಳ, ಪಂಚರಥಗಳ ಸಂಕೀರ್ಣ ಮತ್ತು ಕಡಲ ತಡಿಯ ದೇವಾಲಯಕ್ಕೆ ಭೇಟಿ ನೀಡಿದರು.

ರಷ್ಯಾ-ಚೀನಾ-ಭಾರತ ತ್ರಿಪಕ್ಷೀಯ ಮಾತುಕತೆ

November 30th, 11:50 pm

ಬ್ಯುನೊಸ್ ಎರೆಸಿನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಚೀನಾ ಪ್ರಜಾಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾಡಿಮಿರ್ ಪುಟಿನ್ ಅವರ ನಡುವೆ ತ್ರಿಪಕ್ಷೀಯ ಸಭೆ ನಡೆಯಿತು.

ಬ್ಯುನೊಸ್ ಎರೆಸಿನಲ್ಲಿಂ ಜಿ- 20 ಶೃಂಗಸಭೆಯ ನೇಪಥ್ಯದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ದ್ವಿಪಕ್ಷೀಯ ಸಭೆ

November 30th, 08:18 pm

ಬ್ಯುನೊಸ್ ಎರೆಸಿನಲ್ಲಿಂ ಜಿ- 20 ಶೃಂಗಸಭೆಯ ನೇಪಥ್ಯದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು.