ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಉರುಗ್ವೆ ಅಧ್ಯಕ್ಷರನ್ನು ಭೇಟಿ ಮಾಡಿದರು
July 07th, 09:20 pm
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ಚರ್ಚೆಗಳನ್ನು ನಡೆಸಿದರು. ಡಿಜಿಟಲ್ ಸಹಯೋಗ, ಐಸಿಟಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಯುಪಿಐ, ರಕ್ಷಣೆ, ರೈಲ್ವೆ, ಆರೋಗ್ಯ ಮತ್ತು ಔಷಧೀಯ, ಕೃಷಿ, ಇಂಧನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಪರ್ಕ ಕ್ಷೇತ್ರಗಳಲ್ಲಿನ ಸಹಕಾರವನ್ನು ಅವರು ಪರಿಶೀಲಿಸಿದರು. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಬಲಪಡಿಸುವುದು ಚರ್ಚೆಯ ಪ್ರಮುಖ ಕ್ಷೇತ್ರವಾಗಿತ್ತು. ಹೆಚ್ಚಿನ ಆರ್ಥಿಕ ಸಾಮರ್ಥ್ಯ ಮತ್ತು ವ್ಯಾಪಾರದ ಅವಕಾಶಗಳನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಭಾರತ-ಮೆರ್ಕೋಸುರ್ ಆದ್ಯತಾ ವ್ಯಾಪಾರ ಒಪ್ಪಂದದ ವಿಸ್ತರಣೆಯಲ್ಲಿ ಎರಡೂ ಕಡೆಯವರು ಆಸಕ್ತಿ ವ್ಯಕ್ತಪಡಿಸಿದರು.