ಮಾರ್ಚ್ 28 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 26th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 28ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಅವರು ಗೌತಮ್ ಬುದ್ಧ ನಗರದ ಜೇವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದಲ್ಲಿ ನಡೆದಾಡಿ ಪರಿಶೀಲಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿಯವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ ಪರಿಷ್ಕೃತ ವೆಚ್ಚದ ಅಂದಾಜಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ
March 10th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ 3630.77 ಕೋಟಿ ರೂಪಾಯಿಗಳ ಪರಿಷ್ಕೃತ ಒಟ್ಟು ಬಂಡವಾಳ ವೆಚ್ಚಕ್ಕೆ ಅನುಮೋದನೆ ನೀಡಿದೆ.ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
May 28th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಉತ್ತರ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಸಂಪುಟ ಅನುಮೋದನೆ
May 14th, 03:06 pm
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್ ನಡುವಿನ ಜಂಟಿ ಉದ್ಯಮವಾದ ಜೆವರ್ ವಿಮಾನ ನಿಲ್ದಾಣದ ಬಳಿಯಿರುವ ಈ ಸ್ಥಾವರವು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನವುಗಳಿಗೆ ಡಿಸ್ಪ್ಲೇ ಡ್ರೈವರ್ ಚಿಪ್‌ಗಳನ್ನು ತಯಾರಿಸುತ್ತದೆ.