ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 02:07 pm
ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು, ನಮಸ್ಕಾರಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
March 06th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಾರಣ ಮತ್ತು ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಂತರ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ಮುಖ್ವಾದಲ್ಲಿ ಮಾ ಗಂಗಾನ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನ ಗ್ರಾಮದಲ್ಲಿ ನಡೆದ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರದ ಜನರು ಒಗ್ಗಟ್ಟಿನಿಂದ ನಿಂತಿದ್ದಾರೆ, ಇದು ಸಂತ್ರಸ್ತ ಕುಟುಂಬಗಳಿಗೆ ಅಪಾರ ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು.ಮಾರ್ಚ್ 6 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 05th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 6ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30 ರ ಸುಮಾರಿಗೆ ಅವರು ಮುಖ್ವಾದ ಗಂಗಾ ಮಾತೆಯ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ಬೆಳಗ್ಗೆ 10:40 ಕ್ಕೆ ಅವರು ಚಾರಣ ಮತ್ತು ಬೈಕ್ ಜಾಥಾಗೆ ಚಾಲನೆ ನೀಡಲಿದ್ದಾರೆ ಮತ್ತು ಹರ್ಸಿಲ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.