ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು
June 24th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
May 20th, 04:42 pm
ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
May 20th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.