ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
June 04th, 06:41 pm
ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 04th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.