ಪಂಜಾಬ್ ಮತ್ತು ಹರಿಯಾಣದಲ್ಲಿ ಹೈಬ್ರಿಡ್ ವಾರ್ಷಿಕ ಅನುದಾನ(ಆನ್ಯುಟಿ-ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ) ಮಾದರಿಯಲ್ಲಿ 1878.31 ಕೋಟಿ ರೂ. ವೆಚ್ಚದಲ್ಲಿ 19.2 ಕಿ.ಮೀ ಉದ್ದದ 6 ಪಥದ ಪ್ರವೇಶ ನಿಯಂತ್ರಿತ ಜಿರಾಕ್‌ಪುರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ
April 09th, 03:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಯಿತು. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ವಾರ್ಷಿಕ ಅನುದಾನ ಮಾದರಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ)ಯಲ್ಲಿ ರಾಷ್ಟ್ರೀಯ ಹೆದ್ದಾರಿ-7 (ಜಿರಾಕ್‌ಪುರ-ಪಾಟಿಯಾಲ) ಜಂಕ್ಷನ್‌ನಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿ-5 (ಜಿರಾಕ್‌ಪುರ-ಪರ್ವಾನೂ) ಜಂಕ್ಷನ್‌ನಲ್ಲಿ ಕೊನೆಗೊಳ್ಳುವ 6 ಪಥದ ಜಿರಾಕ್‌ಪುರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಇದು ಪ್ರಧಾನಮಂತ್ರಿಗಳ ಗತಿಶಕ್ತಿ ರಾಷ್ಟ್ರೀಯ ಸಮಗ್ರ ಯೋಜನೆ (ಮಾಸ್ಟರ್ ಪ್ಲಾನ್) ತತ್ವದ ಅಡಿ, ಸಮಗ್ರ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಯನ್ನು ಸುಗಮಗೊಳಿಸುವ ಮಹತ್ವದ ಹೆಜ್ಜೆಯಾಗಿದೆ.