ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 21st, 04:25 pm

ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 21st, 12:00 pm

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.

September 28th, 11:00 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

ಜನಪ್ರಿಯ ಗಾಯಕ ಜುಬೀನ್ ಗಾರ್ಗ್ ಅವರ ಹಠಾತ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

September 19th, 06:26 pm

ಜನಪ್ರಿಯ ಗಾಯಕರಾದ ಜುಬೀನ್ ಗರ್ಗ್ ಅವರ ಹಠಾತ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಅನುಮಪ ಕೊಡುಗೆಗಾಗಿ ಅವರು ಸದಾ ಸ್ಮರಣೀಯರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.