ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮ ಕಾರ್ಯಕ್ರಮ" (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.

ಉತ್ತರದ ಗಡಿಯಲ್ಲಿರುವ ವಿಭಾಗದ ಗ್ರಾಮಗಳ ಸಮಗ್ರ ಅಭಿವೃದ್ಧಿಯಿಂದ ಗುರುತಿಸಲಾದ ಗಡಿ ಗ್ರಾಮಗಳಲ್ಲಿ ವಾಸಿಸುವ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ.  ಇದು ಗಡಿ ಪ್ರದೇಶಗಳಲ್ಲಿ ತಮ್ಮ ಜನ್ಮಸ್ಥಳಗಳಲ್ಲಿ ಉಳಿಯಲು ಜನರನ್ನು ಉತ್ತೇಜಿಸಲು ನೆರವಾಗುತ್ತದೆ ಮತ್ತು ಈ ಗ್ರಾಮಗಳಿಂದ ವಲಸೆ ಹೋಗುವುದನ್ನು ತಡೆಯುತ್ತದೆ ಮತ್ತು ಗಡಿಯ ಸುಧಾರಿತ ಭದ್ರತೆಯನ್ನು ಹೆಚ್ಚಿಸುತ್ತದೆ.

ಈ ಯೋಜನೆಯು ದೇಶದ ಉತ್ತರದ ಭೂ ಗಡಿಯುದ್ದಕ್ಕೂ ಇರುವ 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳಲ್ಲಿನ 19 ಜಿಲ್ಲೆಗಳು ಮತ್ತು 46 ಗಡಿ ವಿಭಾಗಗಳ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಹಣವನ್ನು ಒದಗಿಸುತ್ತದೆ, ಇದು ಸಮಗ್ರ ಪ್ರಗತಿ ಸಾಧಿಸಲು ಮತ್ತು ಗಡಿ ಪ್ರದೇಶಗಳಲ್ಲಿ ಜನಸಂಖ್ಯೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಮೊದಲ ಹಂತದಲ್ಲಿ 663 ಗ್ರಾಮಗಳನ್ನು ಈ ಕಾರ್ಯಕ್ರಮದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಈ ಯೋಜನೆಯು ಉತ್ತರದ ಗಡಿಯಲ್ಲಿರುವ ಗಡಿ ಗ್ರಾಮಗಳ ಸ್ಥಳೀಯ ನೈಸರ್ಗಿಕ ಮಾನವ ಮತ್ತು ಇತರ ಸಂಪನ್ಮೂಲಗಳ ಆಧಾರದ ಮೇಲೆ ಆರ್ಥಿಕ ಚಾಲಕಶಕ್ತಿಯನ್ನು ಗುರುತಿಸಲು ಮತ್ತು ಅಭಿವೃದ್ಧಿಪಡಿಸಲು ಪೂರಕವಾಗಿದ್ದು, ಸಾಮಾಜಿಕ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ "ಹಬ್ ಮತ್ತು ಸ್ಪೋಕ್ ಮಾದರಿ" ಯಲ್ಲಿ ಪ್ರಗತಿ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು, ಸಮುದಾಯ ಆಧಾರಿತ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳು, ಸ್ವಸಹಾಯ ಗುಂಪುಗಳು, ಎನ್.ಜಿ.ಒಗಳು ಇತ್ಯಾದಿಗಳ ಮೂಲಕ "ಒಂದು ಗ್ರಾಮ-ಒಂದು ಉತ್ಪನ್ನ" ಪರಿಕಲ್ಪನೆಯ ಮೇಲೆ ಸುಸ್ಥಿರ ಪರಿಸರ ಕೃಷಿ ವ್ಯವಹಾರಗಳ ಸಾಂಪ್ರದಾಯಿಕ ಜ್ಞಾನ ಮತ್ತು ಪರಂಪರೆ ಮತ್ತು ಅಭಿವೃದ್ಧಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮೂಲಕ ಯುವಜನರು ಮತ್ತು ಮಹಿಳೆಯರ ಸಬಲೀಕರಣ, ಸ್ಥಳೀಯ ಸಾಂಸ್ಕೃತಿಕ ಪ್ರಚಾರದ ಮೂಲಕ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  

ರೋಮಾಂಚಕ ಗ್ರಾಮ ಕ್ರಿಯಾ ಯೋಜನೆಗಳನ್ನು ಜಿಲ್ಲಾ ಆಡಳಿತವು ಗ್ರಾಮ ಪಂಚಾಯಿತಿಗಳ ಸಹಾಯದಿಂದ ರಚಿಸುತ್ತದೆ. ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಶೇ.100ರಷ್ಟು ಗರಿಷ್ಠತೆಯನ್ನು ಖಚಿತಪಡಿಸಲಾಗುತ್ತದೆ.

ಎಲ್ಲಾ ಹವಾಮಾನದ ರಸ್ತೆಗಳೊಂದಿಗೆ ಸಂಪರ್ಕ, ಕುಡಿಯುವ ನೀರು, 24×7 ವಿದ್ಯುತ್ - ಸೌರ ಮತ್ತು ಪವನ ವಿದ್ಯುತ್ ಗೆ ಗಮನ ಹರಿಸುವುದು, ಮೊಬೈಲ್ ಮತ್ತು ಇಂಟರ್ನೆಟ್ ಸಂಪರ್ಕ, ಪ್ರವಾಸಿ ಕೇಂದ್ರಗಳು, ವಿವಿಧೋದ್ದೇಶ ಕೇಂದ್ರಗಳು ಮತ್ತು ಆರೋಗ್ಯ ಹಾಗೂ ಸ್ವಾಸ್ಥ್ಯ ಕೇಂದ್ರಗಳು ಪ್ರಯತ್ನಶೀಲತೆಯ ಫಲಶ್ರುತಿಗಳಾಗಿವೆ.

ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮದೊಂದಿಗೆ ಈ ಯೋಜನೆ ಪುನರಾವರ್ತನೆ (ಓವರ್ ಲ್ಯಾಪ್) ಆಗಿರುವುದಿಲ್ಲ. 4800 ಕೋಟಿ ರೂ.ಗಳ ಹಣ ಹಂಚಿಕೆಯಲ್ಲಿ 2500 ಕೋಟಿ ರೂ.ಗಳನ್ನು ರಸ್ತೆಗಳಿಗಾಗಿ ಬಳಸಲಾಗುವುದು.

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
How Varanasi epitomises the best of Narendra  Modi’s development model

Media Coverage

How Varanasi epitomises the best of Narendra Modi’s development model
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಫೆಬ್ರವರಿ 2024
February 26, 2024

Appreciation for the Holistic Development of Critical Infrastructure Around the Country