ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯು, ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ (ಅಂದಾಜು) ವೆಚ್ಚದಲ್ಲಿ ಬಖ್ತಿಯಾರಪುರ್ – ರಾಜಗೀರ್ – ತಿಲೈಯ ನಡುವಿನ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಅನುಮೋದನೆ ನೀಡಿದೆ.
ಬಿಹಾರ ರಾಜ್ಯದ ನಾಲ್ಕು ಜಿಲ್ಲೆಗಳನ್ನು ಒಳಗೊಂಡ ಈ ಯೋಜನೆಯು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 104 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ.
ಯೋಜನೆಯ ವಿಭಾಗವು ಪ್ರಮುಖ ಸ್ಥಳಗಳಾದ ರಾಜಗೀರ್ (ಶಾಂತಿ ಸ್ತೂಪ), ನಳಂದ, ಪವಾಪುರಿ ಇತ್ಯಾದಿಗಳಿಗೆ ರೈಲು ಸಂಪರ್ಕವನ್ನು ಒದಗಿಸುತ್ತದೆ, ಇದು ದೇಶಾದ್ಯಂತದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತದೆ.
ಬಹು-ಹಳಿ ಯೋಜನೆಗಳು ಸುಮಾರು 1,434 ಗ್ರಾಮಗಳು ಮತ್ತು ಸುಮಾರು 13.46 ಲಕ್ಷ ಜನಸಂಖ್ಯೆ ಮತ್ತು ಎರಡು ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ (ಗಯಾ ಮತ್ತು ನವಾಡಾ) ಸಂಪರ್ಕವನ್ನು ಹೆಚ್ಚಿಸುತ್ತವೆ.
ಕಲ್ಲಿದ್ದಲು, ಸಿಮೆಂಟ್, ಕ್ಲಿಂಕರ್, ಹಾರುಬೂದಿ ಮುಂತಾದ ಸರಕುಗಳ ಸಾಗಣೆಗೆ ಇದು ಅಗತ್ಯ ಮಾರ್ಗವಾಗಿದೆ. ಸಾಮರ್ಥ್ಯವರ್ಧನೆ ಕಾರ್ಯಗಳು 26 ಎಂಟಿಪಿಎ (ವಾರ್ಷಿಕ ದಶಲಕ್ಷ ಟನ್) ಪ್ರಮಾಣದ ಹೆಚ್ಚುವರಿ ಸರಕು ಸಾಗಣೆಗೆ ನೆರವಾಗಲಿವೆ. ರೈಲ್ವೆಯು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷತೆಯ ಸಾರಿಗೆ ವಿಧಾನವಾಗಿದ್ದು, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಸರಕು-ಸಾಗಣೆ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದನ್ನು ಕಡಿಮೆ ಮಾಡಲು (5 ಕೋಟಿ ಲೀಟರ್) ಜೊತೆಗೆ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆ ಮಾಡಲು (24 ಕೋಟಿ ಕೆ.ಜಿ) ಸಹಾಯ ಮಾಡುತ್ತದೆ. ಇದು 1 ಕೋಟಿ ಮರಗಳನ್ನು ನೆಡುವುದಕ್ಕೆ ಸಮನಾಗಿರುತ್ತದೆ.
ಸುಧಾರಿತ ರೈಲ್ವೆ ಮಾರ್ಗದ ಸಾಮರ್ಥ್ಯವು ಸಾರಿಗೆ ಸಂಪರ್ಕವನ್ನು ಸುಧಾರಿಸಲಿದೆ. ಭಾರತೀಯ ರೈಲ್ವೆಗೆ ಹೆಚ್ಚಿನ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಬಹು-ಹಳಿ ಪ್ರಸ್ತಾಪವು ಕಾರ್ಯಾಚರಣೆಯನ್ನು ಸರಾಗಗೊಳಿಸುತ್ತದೆ ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಆ ಮೂಲಕ, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಯನ್ನು ಒದಗಿಸುತ್ತದೆ. ಈ ಯೋಜನೆಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ʻನವ ಭಾರತʼ ದೃಷ್ಟಿಕೋನಕ್ಕೆ ಅನುಗುಣವಾಗಿವೆ, ಇದು ಈ ಪ್ರದೇಶದ ಜನರನ್ನು ಸಮಗ್ರ ಅಭಿವೃದ್ಧಿಯ ಮೂಲಕ "ಆತ್ಮನಿರ್ಭರ"ವಾಗಿಸುತ್ತದೆ. ಇದು ಜನರ ಉದ್ಯೋಗ / ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ.
ಸಮಗ್ರ ಯೋಜನೆ, ಮಧ್ಯಸ್ಥಗಾರರ ಸಮಾಲೋಚನೆಗಳ ಮೂಲಕ ಬಹು-ಮಾದರಿ ಸಂಪರ್ಕ ಹಾಗೂ ಸರಕು-ಸಾಗಣೆ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ʻಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ʼನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಈ ಯೋಜನೆಗಳು ಜನರು, ಸರಕು -ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತವೆ.
बिहार में रेल कनेक्टिविटी को बढ़ावा देने के लिए हम प्रतिबद्ध हैं। इसी दिशा में आज हमारी सरकार ने बख्तियारपुर-राजगीर-तिलैया रेलवे लाइन सेक्शन के दोहरीकरण को मंजूरी दी है। इसका लाभ इस पूरे क्षेत्र के लोगों के साथ-साथ तीर्थयात्रियों और पर्यटकों को भी होगा।https://t.co/5b5LwARuES
— Narendra Modi (@narendramodi) September 24, 2025


