​​​​​​​ಬಹುರಾಜ್ಯ ಸಹಕಾರ ಸಂಘಗಳ (ಎಂಎಸ್ ಸಿಎಸ್) ಕಾಯಿದೆ, 2002 ಅಡಿ ನೋಂದಾಯಿಸಬಹುದು
ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಂದ ಅಪೆಕ್ಸ್ ವರೆಗೆ: ಪ್ರಾಥಮಿಕ ಸಂಘಗಳು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಒಕ್ಕೂಟಗಳು ಮತ್ತು ಬಹುರಾಜ್ಯ ಸಹಕಾರ ಸಂಘಗಳು ಸೇರಿದಂತೆ ಪ್ರಾಥಮಿಕ ಸೊಸೈಟಿಗಳಿಂದ ಹಿಡಿದು ರಾಷ್ಟ್ರೀಯ ಮಟ್ಟದ ಸಹಕಾರ ಸಂಘಗಳು ಇದರ ಸದಸ್ಯರಾಗಬಹುದು. ಈ ಎಲ್ಲಾ ಸಹಕಾರಿಗಳು ಸೊಸೈಟಿ ಉಪನಿಯಮಗಳ (ಬೈಲಾ) ಪ್ರಕಾರ, ಸೊಸೈಟಿ ಆಡಳಿತ ಮಂಡಳಿಯಲ್ಲಿ ತಮ್ಮ ಚುನಾಯಿತ ಪ್ರತಿನಿಧಿಗಳನ್ನು ಹೊಂದಿರುತ್ತಾರೆ
ಸಂಬಂಧಿತ ಕೇಂದ್ರ ಸಚಿವಾಲಯಗಳ ಬೆಂಬಲದೊಂದಿಗೆ ದೇಶಾದ್ಯಂತ ವಿವಿಧ ಸಹಕಾರ ಸಂಘಗಳು ಉತ್ಪಾದಿಸುವ ಹೆಚ್ಚುವರಿ ಸರಕುಗಳು ಮತ್ತು ಸೇವೆಗಳ ರಫ್ತಿಗೆ ಇದು ಪ್ರಧಾನ(ಆಶ್ರಯ) ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲಿದೆ
ಎಲ್ಲರನ್ನೂ ಒಳಗೊಂಡ ಸಹಕಾರಿ ಸಂಸ್ಥೆಗಳ ಪ್ರಗತಿ ಮಾದರಿ ಮೂಲಕ “ಸಹಕಾರ್-ಸೇ-ಸಮೃದ್ಧಿ” ಗುರಿ ಸಾಧಿಸಲು ಸಹಾಯ ಮಾಡುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬಹುರಾಜ್ಯ ಸಹಕಾರ ಸಂಘಗಳ (ಎಂಎಸ್ ಸಿಎಸ್) ಕಾಯಿದೆ 2002ರ ಅಡಿ ರಾಷ್ಟ್ರೀಯ ಮಟ್ಟದ ಬಹುರಾಜ್ಯ ಸಹಕಾರ ರಫ್ತು ಸಂಘವನ್ನು ಸ್ಥಾಪಿಸಿ, ಉತ್ತೇಜನ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿತ ಸಚಿವಾಲಯಗಳು ವಿಶೇಷವಾಗಿ ವಿದೇಶಾಂಗ ವ್ಯವಹಾರ  ಮತ್ತು ವಾಣಿಜ್ಯ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ 'ಸರ್ಕಾರದ ಸಂಪೂರ್ಣ ವಿಧಾನ ಅನುಸರಿಸುವ ಮೂಲಕ, ತಮ್ಮ ರಫ್ತು ಸಂಬಂಧಿತ ನೀತಿಗಳು, ಯೋಜನೆಗಳು ಮತ್ತು ಏಜೆನ್ಸಿಗಳ ಮೂಲಕ ಸಹಕಾರಿ ಸಂಸ್ಥೆಗಳು ಮತ್ತು ಸಂಬಂಧಿತ ಘಟಕಗಳು ಉತ್ಪಾದಿಸುವ ಎಲ್ಲಾ ಸರಕುಗಳು ಮತ್ತು ಸೇವೆಗಳ ರಫ್ತುಗಳನ್ನು ಕೈಗೊಳ್ಳಲು ಬೆಂಬಲ ನೀಡಲಿವೆ.

ಪ್ರಸ್ತಾವಿತ ಅಥವಾ ಉದ್ದೇಶಿತ ಸೊಸೈಟಿಯು ಸರಕು ಮತ್ತು ಸೇವೆಗಳ ರಫ್ತುಗಳನ್ನು ಕೈಗೊಳ್ಳಲು ಮತ್ತು ಉತ್ತೇಜಿಸಲು ಆಶ್ರಯ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುವ ಮೂಲಕ ಸಹಕಾರಿ ವಲಯದ ರಫ್ತಿಗೆ ಒತ್ತು ನೀಡುತ್ತದೆ. ಇದು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತೀಯ ಸಹಕಾರಿ ಸಂಸ್ಥೆಗಳ ರಫ್ತು ಸಾಮರ್ಥ್ಯವನ್ನು ಹೊರತರಲು, ಹೆಚ್ಚಿಸಲು ಸಹಾಯ ಮಾಡಲಿದೆ. ಈ ಉದ್ದೇಶಿತ  ಸೊಸೈಟಿಯು ಸಹಕಾರಿಗಳಿಗೆ ವಿವಿಧ ರಫ್ತು ಸಂಬಂಧಿತ ಯೋಜನೆಗಳು ಮತ್ತು ಭಾರತ ಸರ್ಕಾರದ ವಿವಿಧ ಸಚಿವಾಲಯಗಳ ನೀತಿಗಳ ಪ್ರಯೋಜನಗಳನ್ನು 'ಸಂಪೂರ್ಣ ಸರ್ಕಾರಿ ವಿಧಾನ'ದ ಮೂಲಕ ಎಲ್ಲರನ್ನೂ ಒಳಗೊಂಡ ಪ್ರಗತಿ ಮಾದರಿಯಲ್ಲಿ ಪಡೆಯಲು ಸಹಾಯ ಮಾಡುತ್ತದೆ. "ಸಹಕಾರ್-ಸೇ-ಸಮೃದ್ಧಿ"ಯ ಗುರಿ ಸಾಧಿಸಲು ಸಹ ಇದು ಸಹಾಯ ಮಾಡುತ್ತದೆ, ಅಲ್ಲದೆ, ಸದಸ್ಯರು ತಮ್ಮ ಸರಕು ಮತ್ತು ಸೇವೆಗಳ ರಫ್ತಿಗೆ ಉತ್ತಮ ಬೆಲೆ ಪಡೆಯುವ ಜತೆಗೆ, ಸೊಸೈಟಿಯಲ್ಲಿ ಉತ್ಪತ್ತಿಯಾಗುವ ಲಾಭಾಂಶವನ್ನು ಸಹ ಪಡೆಯುತ್ತಾರೆ. 

ಪ್ರಸ್ತಾವಿತ ಸೊಸೈಟಿಯ ಮೂಲಕ ಮಾಡುವ ಹೆಚ್ಚಿನ ರಫ್ತುಗಳು ವಿವಿಧ ಹಂತಗಳಲ್ಲಿ ಸಹಕಾರಿಗಳಿಂದ ಸರಕು ಮತ್ತು ಸೇವೆಗಳ ಉತ್ಪಾದನೆ ಹೆಚ್ಚಿಸುತ್ತದೆ. ಇದರಿಂದಾಗಿ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ. ಸರಕುಗಳ ಸಂಸ್ಕರಣೆ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಹೊಂದಿಕೆಯಾಗುವ ಸೇವೆಗಳನ್ನು ಹೆಚ್ಚಿಸುವುದರಿಂದ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಸಹಕಾರಿ ಉತ್ಪನ್ನಗಳ ಹೆಚ್ಚಿನ ರಫ್ತು ವಹಿವಾಟಿನಿಂದ ಮೇಕ್ ಇನ್ ಇಂಡಿಯಾ ಉತ್ತೇಜಿಸುವ ಜತೆಗೆ, ಆತ್ಮನಿರ್ಭರ್ ಭಾರತ ಕಟ್ಟಲು ಕಾರಣವಾಗುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
APEDA Facilitates First Export Of Premium Areko Cherries And Scentrose Plums From J&K To Singapore

Media Coverage

APEDA Facilitates First Export Of Premium Areko Cherries And Scentrose Plums From J&K To Singapore
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಜುಲೈ 2026
July 19, 2026

Exports Booming, Skies Opening, Energy Transforming — PM Modi’s India in Full Flight