ಯೋಜನೆಗಳ ಒಟ್ಟು ಅಂದಾಜು ವೆಚ್ಚ 4,474 ಕೋಟಿ ರೂ.ಗಳಾಗಿದ್ದು, 2030-31 ರಲ್ಲಿ ಈ ಯೋಜನೆಗಳು ಪೂರ್ಣಗೊಳ್ಳಲಿವೆ

ಪ್ರಧಾನಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ವೆಚ್ಚ 4,474 ಕೋಟಿ ರೂಪಾಯಿ ವೆಚ್ಚದ (ಅಂದಾಜು) 02 (ಎರಡು) ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಲ್ಲಿ ಇವುಗಳು ಸೇರಿವೆ:

a. ಸೈಂಥಿಯಾ - ಪಾಕೂರ್ 4 ನೇ ಮಾರ್ಗ
b. ಸಂತ್ರಗಾಚಿ - ಖರಗ್ಪುರ 4 ನೇ ಮಾರ್ಗ

ಹೆಚ್ಚಿದ ಮಾರ್ಗ ಸಾಮರ್ಥ್ಯವು ಚಲನಶೀಲತೆಯನ್ನು ಗಮನಾರ್ಹವಾಗಿ ಸಾರಿಗೆ ಸೌಕರ್ಯವನ್ನು ಹೆಚ್ಚಿಸುತ್ತದೆ, ಇದರ ಪರಿಣಾಮವಾಗಿ ಭಾರತೀಯ ರೈಲ್ವೆಗೆ ಸುಧಾರಿತ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಉಂಟಾಗುತ್ತದೆ. ಈ ಬಹು-ಟ್ರ್ಯಾಕ್ಕಿಂಗ್ ಪ್ರಸ್ತಾವನೆಗಳು ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಮತ್ತು ದಟ್ಟಣೆಯನ್ನು ನಿವಾರಿಸಲು ಸಿದ್ಧವಾಗಿವೆ. ಈ ಯೋಜನೆಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನವ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿವೆ, ಇದು ಈ ಪ್ರದೇಶದ ಜನರನ್ನು ಸಮಗ್ರ ಅಭಿವೃದ್ಧಿಯ ಮೂಲಕ "ಆತ್ಮನಿರ್ಭರ"ರನ್ನಾಗಿ ಮಾಡುತ್ತದೆ, ಇದು ಅವರ ಉದ್ಯೋಗ/ ಸ್ವ-ಉದ್ಯೋಗ ಅವಕಾಶಗಳನ್ನು ಹೆಚ್ಚಿಸುತ್ತದೆ.

ಸಮಗ್ರ ಯೋಜನೆ ಮತ್ತು ಪಾಲುದಾರರ ಸಮಾಲೋಚನೆಗಳ ಮೂಲಕ ಬಹು-ಮಾದರಿ ಸಂಪರ್ಕ ಮತ್ತು ಸಾಗಣಿಕೆ(ಲಾಜಿಸ್ಟಿಕ್) ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸುವ ಮೂಲಕ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ನಲ್ಲಿ ಯೋಜನೆಗಳನ್ನು ಯೋಜಿಸಲಾಗಿದೆ. ಈ ಯೋಜನೆಗಳು ಜನರು, ಸರಕುಗಳು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.

ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 05 ಜಿಲ್ಲೆಗಳನ್ನು ಒಳಗೊಂಡ 02 (ಎರಡು) ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 192 ಕಿ.ಮೀ.ಗಳಷ್ಟು ಹೆಚ್ಚಿಸುತ್ತವೆ.

ಅನುಮೋದಿತ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು ಸುಮಾರು 147 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸುಮಾರು 5,652 ಹಳ್ಳಿಗಳಿಗೆ ಸಂಪರ್ಕಸೌಲಭ್ಯಗಳನ್ನು ಹೆಚ್ಚಿಸುತ್ತದೆ.

ಪ್ರಸ್ತಾವಿತ ಸಾಮರ್ಥ್ಯ ವರ್ಧನೆಯು ಬೋಲ್ಪುರ್-ಶಾಂತಿನಿಕೇತನ, ನಂದಿಕೇಶ್ವರಿ ದೇವಸ್ಥಾನ (ಶಕ್ತಿಪೀಠ), ತಾರಾಪೀಠ (ಶಕ್ತಿಪೀಠ), ಪಟಚಿತ್ರ ಗ್ರಾಮ, ಧಾಡಿಕಾ ಅರಣ್ಯ, ಭೀಮಬಂಧ್ ವನ್ಯಜೀವಿ ಅಭಯಾರಣ್ಯ, ರಾಮೇಶ್ವರ ಕುಂಡ್, ಇತ್ಯಾದಿ ಸೇರಿದಂತೆ ದೇಶಾದ್ಯಂತ ಹಲವಾರು ಪ್ರಮುಖ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕವನ್ನು ಸುಧಾರಿಸುತ್ತದೆ.

ಅನುಮೋದಿತ ಯೋಜನೆಗಳು ಕಲ್ಲಿದ್ದಲು, ಕಲ್ಲು, ಡಾಲಮೈಟ್, ಸಿಮೆಂಟ್, ಸ್ಲ್ಯಾಗ್, ಜಿಪ್ಸಮ್, ಕಬ್ಬಿಣ ಮತ್ತು ಉಕ್ಕು, ಆಹಾರ ಧಾನ್ಯಗಳು, ಪಿಒಎಲ್, ಕಂಟೇನರ್ ಇತ್ಯಾದಿ ಸರಕುಗಳ ಸಾಗಣೆಗೆ ಅಗತ್ಯವಾದ ಮಾರ್ಗಗಳಾಗಿವೆ. ಸಾಮರ್ಥ್ಯ ವರ್ಧನೆಯ ಕಾರ್ಯಗಳು 31ಎಂ.ಟಿ.ಪಿ.ಎ (ವಾರ್ಷಿಕ ಮಿಲಿಯನ್ ಟನ್) ಗಳಷ್ಟು ಹೆಚ್ಚುವರಿ ಸರಕು ಸಾಗಣೆಗೆ ಅವಕಾಶ ಲಭ್ಯವಾಗಿಸುತ್ತವೆ. ರೈಲ್ವೆಗಳು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ಸಾರಿಗೆ ವಿಧಾನವಾಗಿರುವುದರಿಂದ, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಸಾಗಾಟವ್ಯವಸ್ಥೆಯ (ಲಾಜಿಸ್ಟಿಕ್ಸ್) ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದು (06 ಕೋಟಿ ಲೀಟರ್) ಕಡಿಮೆ ಮಾಡಲು ಮತ್ತು ಸಿಒ2 ಹೊರಸೂಸುವಿಕೆಯನ್ನು (28 ಕೋಟಿ ಕೆಜಿ) ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸರಸರಿ ಅಂದಾಜು 01 (ಒಂದು) ಕೋಟಿ ಮರಗಳ ನೆಡುವಿಕೆಗೆ ಸಮಾನವಾಗಿರುತ್ತದೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Auckland's Sky Tower lights up in India's tricolour as PM Modi begins historic New Zealand visit

Media Coverage

Auckland's Sky Tower lights up in India's tricolour as PM Modi begins historic New Zealand visit
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2026
July 11, 2026

Record Exports, Record Investments, Record Pride: India’s Rise Under PM Modi is Multi-Dimensional