ನನ್ನ ಆತ್ಮೀಯ ಸ್ನೇಹಿತ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ನಾನು 2026ರ ಫೆಬ್ರವರಿ 25ರಿಂದ 26ರವರೆಗೆ ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದೇನೆ.

ಭಾರತ ಮತ್ತು ಇಸ್ರೇಲ್ ದೃಢವಾದ ಹಾಗೂ ಬಹುಮುಖಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿವೆ. ಇದು ಇತ್ತೀಚಿನ ವರ್ಷಗಳಲ್ಲಿ ಗಮನಾರ್ಹ ಮಟ್ಟದಲ್ಲಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ಕೃಷಿ, ಜಲ ನಿರ್ವಹಣೆ, ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ ಹಾಗೂ ಜನರ ನಡುವಿನ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಿರುವ ಪ್ರಧಾನಮಂತ್ರಿ ನೆತನ್ಯಾಹು ಅವರ ಜೊತೆ ಚರ್ಚೆಗಳನ್ನು ನಾನು ನಿರೀಕ್ಷಿಸುತ್ತಿದ್ದೇನೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ನಾವು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇವೆ.

ಈ ಭೇಟಿಯ ವೇಳೆ, ನಾನು ಇಸ್ರೇಲ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಐಸಾಕ್ ಹೆರ್ಜೋಗ್ ಅವರನ್ನೂ ಭೇಟಿ ಮಾಡಲಿದ್ದೇನೆ. ಇಸ್ರೇಲಿ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡುವ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಗೌರವವೂ ನನಗೆ ಲಭಿಸಿದೆ, ಇದು ನಮ್ಮ ಎರಡು ರಾಷ್ಟ್ರಗಳನ್ನು ಬೆಸೆಯುವ ಬಲವಾದ ಸಂಸದೀಯ ಮತ್ತು ಪ್ರಜಾಪ್ರಭುತ್ವ ಸಂಬಂಧಗಳಿಗೆ ಗೌರವ ಸಲ್ಲಿಸುವ ಸಂದರ್ಭವಾಗಿದೆ.

ಭಾರತ-ಇಸ್ರೇಲ್ ವಿಶೇಷ ಸ್ನೇಹವನ್ನು ದೀರ್ಘಕಾಲದಿಂದ ಪೋಷಿಸುತ್ತಿರುವ ಭಾರತೀಯ ವಲಸಿಗರ ಸದಸ್ಯರೊಂದಿಗೆ ಸಂವಹನ ನಡೆಸಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ.

ನನ್ನ ಅಧಿಕೃತ ಭೇಟಿಯು ಉಭಯ ದೇಶಗಳ ನಡುವಿನ ನಿರಂತರ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ಗುರಿಗಳನ್ನು ನಿಗದಿಪಡಿಸುತ್ತದೆ. ಜೊತೆಗೆ ಸದೃಢ, ನವೀನ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ನಮ್ಮ ಹಂಚಿಕೆಯ ದೃಷ್ಟಿಕೋನವನ್ನು ಮುನ್ನಡೆಸುತ್ತದೆ ಎಂದು ನನಗೆ ವಿಶ್ವಾಸವಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's food services market to reach USD 150 billion by FY31, online share to rise to 18%: Report

Media Coverage

India's food services market to reach USD 150 billion by FY31, online share to rise to 18%: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜುಲೈ 2026
July 10, 2026

Building Viksit Bharat: PM Modi Accelerating India's Growth at Home and Across the World