ಶಾಂತಿ ಮತ್ತು ಅಭಿವೃದ್ಧಿಗಾಗಿ ಪರಮಾಣು ಶಕ್ತಿಯ ಸುರಕ್ಷಿತ ಬಳಕೆಗೆ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿಯವರು ವಿವರಿಸಿದರು
ಜವಾಬ್ದಾರಿಯುತ ಪರಮಾಣು ಶಕ್ತಿಯಾಗಿ ಭಾರತದ ಸ್ಪಷ್ಟ ದಾಖಲೆ ಮತ್ತು ಸಾಮಾಜಿಕ ಪ್ರಯೋಜನಕ್ಕಾಗಿ ನಾಗರಿಕ ಪರಮಾಣು ಅನ್ವಯಗಳಲ್ಲಿ ಭಾರತದ ಜಾಗತಿಕ ನಾಯಕತ್ವದ ಪಾತ್ರವನ್ನು ಮಹಾನಿರ್ದೇಶಕರಾದ ಶ್ರೀ ಗ್ರೋಸಿ ಶ್ಲಾಘಿಸಿದರು
ಜಾಗತಿಕ ದಕ್ಷಿಣದಲ್ಲಿ ಪರಮಾಣು ತಂತ್ರಜ್ಞಾನದ ಅನ್ವಯಿಕೆಗಳನ್ನು ವಿಸ್ತರಿಸಲು ಸಹಕರಿಸಲು ಭಾರತ ಮತ್ತು ಐ.ಎ.ಇ.ಎ. ಒಪ್ಪಿಕೊಂಡಿವೆ

ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಮಹಾನಿರ್ದೇಶಕರಾದ ಶ್ರೀ ರಾಫೆಲ್ ಮರಿಯಾನೋ ಗ್ರೋಸಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

 ಶಾಂತಿ ಮತ್ತು ಅಭಿವೃದ್ಧಿಗಾಗಿ ಪರಮಾಣು ಶಕ್ತಿಯ ಸುರಕ್ಷಿತ ಮತ್ತು ಸುಭದ್ರ ಬಳಕೆಗೆ ಭಾರತದ ನಿರಂತರ ಬದ್ಧತೆಯನ್ನು ಪ್ರಧಾನಮಂತ್ರಿ ಖಚಿತಪಡಿಸಿದರು. ವಿವಿಧ ಶಕ್ತಿಯ ಮಿಶ್ರಣ ಬಳಕೆಗಾಗಿ ಪರಿಸರ ಸ್ನೇಹಿ ಪರಮಾಣು ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಪಾಲನ್ನು ಹೆಚ್ಚಿಸುವ ಭಾರತದ ಮಹತ್ವಾಕಾಂಕ್ಷೆಯ ಗುರಿಗಳನ್ನು ಪ್ರಧಾನಮಂತ್ರಿಯವರು ಶ್ರೀ ಗ್ರೋಸಿ  ಹಂಚಿಕೊಂಡರು.

ಜವಾಬ್ದಾರಿಯುತ ಪರಮಾಣು ಶಕ್ತಿಯಾಗಿ ಭಾರತದ ಸುಸ್ಪಷ್ಟ ದಾಖಲೆಯನ್ನು ಹಾಗೂ  ಪರಮಾಣು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿಯನ್ನು ಮಹಾನಿರ್ದೇಶಕರಾದ ಶ್ರೀ ರಾಫೆಲ್ ಅವರು ಶ್ಲಾಘಿಸಿದರು. ವಿಶೇಷವಾಗಿ ಸ್ಥಳೀಯ ಪರಮಾಣು ವಿದ್ಯುತ್ ಸ್ಥಾವರಗಳ ಅಭಿವೃದ್ಧಿ ಮತ್ತು ನಿಯೋಜನೆಗಳ ಕುರಿತು ಸಂತಸ ವ್ಯಕ್ತ ಪಡಿಸಿದರು.  ಸಾಮಾಜಿಕ ಪ್ರಯೋಜನಗಳಿಗಾಗಿ ನಾಗರಿಕ ಪರಮಾಣು ಅನ್ವಯಗಳಲ್ಲಿ ಭಾರತದ ಜಾಗತಿಕ ನಾಯಕತ್ವದ ಪಾತ್ರವನ್ನು ಅವರು ಶ್ಲಾಘಿಸಿದರು.  ಆರೋಗ್ಯ, ಆಹಾರ, ನೀರು ಸಂಸ್ಕರಣೆ, ಪ್ಲಾಸ್ಟಿಕ್ ಮಾಲಿನ್ಯ ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಮಾನವಕುಲವು ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ಪರಮಾಣು ತಂತ್ರಜ್ಞಾನವನ್ನು ಬಳಸಿಕೊಳ್ಳುವಲ್ಲಿ ಭಾರತ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಅವರು ಉಲ್ಲೇಖಿಸಿ ಮಾತನಾಡಿದರು.

ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಮತ್ತು ಮೈಕ್ರೊ-ರಿಯಾಕ್ಟರ್‌ಗಳು ಸೇರಿದಂತೆ ನಿವ್ವಳ ಶೂನ್ಯ ಬದ್ಧತೆಗಳನ್ನು ಪೂರೈಸುವಲ್ಲಿ ಪರಮಾಣು ಶಕ್ತಿಯ ಪಾತ್ರವನ್ನು ವಿಸ್ತರಿಸುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಮಹಾನಿರ್ದೇಶಕರಾದ ಶ್ರೀ ಗ್ರೋಸಿ ಅವರು  ಐ.ಎ.ಇ.ಎ.  ಮತ್ತು ಭಾರತದ ನಡುವಿನ ಮಹೋನ್ನತ ಮಟ್ಟದ ಪಾಲುದಾರಿಕೆಗೆ ತಮ್ಮ ಮೆಚ್ಚುಗೆಯನ್ನು ತಿಳಿಸಿದರು. ಅನೇಕ ದೇಶಗಳಿಗೆ ಸಹಾಯ ಮಾಡಿರುವ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳಿಗಾಗಿ ಅವರು ಭಾರತವನ್ನು ಶ್ಲಾಘಿಸಿದರು.  ಜಾಗತಿಕ ದಕ್ಷಿಣದಲ್ಲಿ ನಾಗರಿಕ ಪರಮಾಣು ತಂತ್ರಜ್ಞಾನದ ಅನ್ವಯಿಕೆಗಳನ್ನು ವಿಸ್ತರಿಸಲು ಭಾರತ ಮತ್ತು ಐ.ಎ.ಇ.ಎ ನಡುವಿನ ಸಹಕಾರದ ಮಾರ್ಗಗಳನ್ನು ಅನ್ವೇಷಿಸಲು ಎರಡೂ ಕಡೆಯವರು ಈ ಸಂದರ್ಭದಲ್ಲಿ  ಒಪ್ಪಿಕೊಂಡರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.