ಪ್ರಧಾನ ಮಂತ್ರಿಯವರು ಅವರನ್ನು ಅಭಿನಂದಿಸಿದರು ಮತ್ತು ಉನ್ನತ ಮಟ್ಟದ ಪೂರ್ವನಿರ್ಧಾರಿತ ಕಾರ್ಯಕ್ರಮಗಳ ವೇಗತಿಗಾಗಿ ಅವರನ್ನು ಶ್ಲಾಘಿಸಿದರು
ನೇಪಾಳದ ಪ್ರಧಾನಮಂತ್ರಿಯವರ ಶುಭಾಶಯಗಳು ಮತ್ತು ಆಹ್ವಾನಕ್ಕಾಗಿ ಪ್ರಧಾನಮಂತ್ರಿಯವರು ಅವರಿಗೆ ಧನ್ಯವಾದಗಳನ್ನು ತಿಳಿಸಿದರು

ವಿದೇಶಾಂಗ ಸಚಿವರ ಆಹ್ವಾನದ ಮೇರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವ ಘನತೆವೆತ್ತ ಡಾ. ಅರ್ಜು ರಾಣಾ ದೇವುಬಾ ಅವರು ಇಂದು ಪ್ರಧಾ ನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ನೇಪಾಳದ ವಿದೇಶಾಂಗ ಸಚಿವೆಯಾಗಿ ನೇಮಕಗೊಂಡಿದ್ದಕ್ಕಾಗಿ ಡಾ. ಅರ್ಜು ರಾಣಾ ದೇವುಬಾ ಅವರನ್ನು ಪ್ರಧಾನ ಮಂತ್ರಿಯವರು ಅಭಿನಂದಿಸಿದರು. ಉಭಯ ಪಕ್ಷಗಳ ನಡುವಿನ ಉನ್ನತ ಮಟ್ಟದ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳ ನಿಶ್ಚಿತಾರ್ಥಗಳಲ್ಲಿ ನಡೆಯುತ್ತಿರುವ ವೇಗಗತಿಯನ್ನು ಪ್ರಧಾನ ಮಂತ್ರಿಯವರು ಶ್ಲಾಘಿಸಿದರು. ದ್ವಿಪಕ್ಷೀಯ ಸಂಬಂಧದಲ್ಲಿ ಈ ಸಂವಾದಗಳ ಸಕಾರಾತ್ಮಕ ಪರಿಣಾಮವನ್ನು ಎತ್ತಿ ಹಿಡಿದ ಪ್ರಧಾನ ಮಂತ್ರಿಯವರು, ಭಾರತ ಆಯೋಜಿಸಿರುವ 3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ನೇಪಾಳದ ಪ್ರಧಾನಮಂತ್ರಿಯವರು ಭಾಗವಹಿಸಿದ್ದನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಭಾರತದ ನೆರೆಹೊರೆ ಮೊದಲ ನೀತಿ ಮತ್ತು ನೇಪಾಳದೊಂದಿಗೆ ಭಾರತ ಕೈಗೊಂಡಿರುವ ವಿವಿಧ ಅಭಿವೃದ್ಧಿ ಸಹಕಾರ ಉಪಕ್ರಮಗಳಿಗಾಗಿ ವಿದೇಶಾಂಗ ಸಚಿವ ಡಾ. ಅರ್ಜು ರಾಣಾ ದೇವುಬಾ ಅವರು ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಅವರು ತಿಳಿಸಿದರು. ನೇಪಾಳಕ್ಕೆ ಭೇಟಿ ನೀಡುವಂತೆ ನೇಪಾಳದ ಪ್ರಧಾನಮಂತ್ರಿಯವರಿಂದ ಅವರು ತಂದಿರುವ ಆಹ್ವಾನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಸ್ತಾಂತರಿಸಿದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ನಿರ್ಧರಿಸಿ, ಪರಸ್ಪರ ಅನುಕೂಲಕರ ದಿನಾಂಕಗಳಲ್ಲಿ ನೇಪಾಳಕ್ಕೆ ಭೇಟಿ ನೀಡುವ ಆಹ್ವಾನವನ್ನು ಪ್ರಧಾನ ಮಂತ್ರಿಯವರು ಸ್ವೀಕರಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IndiaAI Mission-backed startup Avataar launches indigenous video AI model

Media Coverage

IndiaAI Mission-backed startup Avataar launches indigenous video AI model
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಜೂನ್ 2026
June 13, 2026

Viksit Bharat Accelerating: Tech, Defense, Infra & Exports Power India's Global Leap Under the Leadership of PM Modi