ಭಾರತವು 74 ನೇ ಗಣರಾಜ್ಯೋತ್ಸವವನ್ನು ಅತ್ಯಂತ ಉತ್ಸಾಹ ಮತ್ತು ಹುರುಪಿನಿಂದಆಚರಿಸಿತು. ನವದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವೈವಿಧ್ಯಮಯ ಸಂಸ್ಕೃತಿ, ಸಶಸ್ತ್ರ ಪಡೆಗಳ ಪರಾಕ್ರಮವನ್ನು ಪ್ರದರ್ಶಿಸಲಾಯಿತು. ಈ ವರ್ಷದ ಮುಖ್ಯ ಅತಿಥಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು.






















