ಭಾರತದ ಗ್ರ್ಯಾಂಡ್ ಮುಫ್ತಿ ಶೇಖ್ ಅಬೂಬಕರ್ ಅಹ್ಮದ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು. ಭೇಟಿಯ ಸಮಯದಲ್ಲಿ, ಉಭಯರು ವಿವಿಧ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ದೇಶಾದ್ಯಂತ ಸಾಮಾಜಿಕ ಸಾಮರಸ್ಯ, ಭ್ರಾತೃತ್ವ ಮತ್ತು ಶಿಕ್ಷಣವನ್ನು ಸುಧಾರಿಸಲು ಗ್ರ್ಯಾಂಡ್ ಮುಫ್ತಿ ಅವರ ಶ್ಲಾಘನೀಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಗಮನಿಸಿದರು.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಭಾರತದ ಗ್ರ್ಯಾಂಡ್ ಮುಫ್ತಿ ಶೇಖ್ ಅಬೂಬಕರ್ ಅಹ್ಮದ್ ಸಾಹಬ್ ಅವರೊಂದಿಗೆ ಉತ್ತಮ ಸಂವಹನ ನಡೆಸಿದೆ. ನಾವು ವಿವಿಧ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದೇವೆ. ಸಾಮಾಜಿಕ ಸಾಮರಸ್ಯ, ಸಹೋದರತ್ವ ಮತ್ತು ಶಿಕ್ಷಣವನ್ನು ಸುಧಾರಿಸುವಲ್ಲಿ ಅವರ ಪ್ರಯತ್ನಗಳು ಗಮನಾರ್ಹವಾಗಿವೆ.
@shkaboobacker”
Had a very good interaction with Sheikh Abubakr Ahmad Sahab, Grand Mufti of India. We exchanged views on a wide range of issues. His efforts to further social harmony, brotherhood and improve education are noteworthy.@shkaboobacker pic.twitter.com/HSxmCe2aUG
— Narendra Modi (@narendramodi) February 16, 2026


