ಭಾರತಕ್ಕಾಗಿ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಶ್ರೀ ಗೋರ್ ಅವರ ಅಧಿಕಾರಾವಧಿಯು ಯಶಸ್ವಿಯಾಗಲೇಂದು ಪ್ರಧಾನಮಂತ್ರಿ ಅವರು ಶುಭ ಹಾರೈಸಿದರು ಮತ್ತು ಅವರ ಅಧಿಕಾರಾವಧಿಯು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ;
“ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಅವರ ಅಧಿಕಾರಾವಧಿಯು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ.
@SergioGor”
Glad to receive Mr. Sergio Gor, Ambassador-designate of the US to India. I’m confident that his tenure will further strengthen the India–US Comprehensive Global Strategic Partnership.@SergioGor pic.twitter.com/WSzsPxrJXv
— Narendra Modi (@narendramodi) October 11, 2025


