ಜನವರಿ 23ರಂದು ನೇತಾಜಿ ಅವರ ಜನ್ಮ ದಿನದಂದು ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿರುವ ಪ್ರಧಾನಿ

ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ, 2022ರ ಜನವರಿ 23ರಂದು ಬೋಸ್‌ ಅವರ ಜನ್ಮ ದಿನದಂದು ಪ್ರಧಾನಮಂತ್ರಿಯವರು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಸರಣಿ ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ, "ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಲಾದ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವು ಎಂಬ ವಿಷಯ ತಿಳಿಸಲು ನನಗೆ ಹರ್ಷವೆನಿಸುತ್ತಿದೆ. ಇದು ಭಾರತವು ಅವರಿಗೆ ಆಭಾರಿಯಾಗಿರುವುದರ ಸಂಕೇತ.”

“ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರಲಿದೆ. ನೇತಾಜಿ ಅವರ ಜನ್ಮ ದಿನವಾದ ಜನವರಿ 23ರಂದು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದೇನೆ.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IndiaAI Mission-backed startup Avataar launches indigenous video AI model

Media Coverage

IndiaAI Mission-backed startup Avataar launches indigenous video AI model
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಜೂನ್ 2026
June 13, 2026

Viksit Bharat Accelerating: Tech, Defense, Infra & Exports Power India's Global Leap Under the Leadership of PM Modi