ನನ್ನ ಪ್ರೀತಿಯ ಭಾರತೀಯರೇ, ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ 2024ರ ಲೋಕಸಭಾ ಚುನಾವಣೆಗಳು ಮುಕ್ತಾಯವಾಗಿವೆ. ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಆಧ್ಯಾತ್ಮಿಕ ಪಯಣ ಮುಗಿಸಿ ಈಗಷ್ಟೇ ದೆಹಲಿಗೆ ವಿಮಾನವೇರಿದೆ. ದಿನವಿಡೀ ಕಾಶಿ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ನನ್ನ ಮನಸ್ಸು ಹಲವಾರು ಅನುಭವಗಳು ಮತ್ತು ಭಾವನೆಗಳಿಂದ ತುಂಬಿದೆ. ನನ್ನೊಳಗೆ ಅನಂತ ಶಕ್ತಿಯ ಹರಿವಿನ ಅನುಭವವಾಗುತ್ತಿದೆ. ಈ ಸಲದ್ದು ಅಮೃತಕಾಲದ ಮೊದಲ ಚುನಾವಣೆ. ನಾನು ಮೀರತ್​ನಿಂದ ಕೆಲವು ತಿಂಗಳ ಹಿಂದೆ ನನ್ನ ಅಭಿಯಾನ ಪ್ರಾರಂಭಿಸಿ ರಾಷ್ಟ್ರದ ಉದ್ದಗಲಕ್ಕೂ ಸಂಚರಿಸಿದ್ದೇನೆ. ಅಂತಿಮ ಸಮಾವೇಶ ಪಂಜಾಬಿನ ಹೋಶಿಯಾರಪುರದಲ್ಲಿ ನಡೆಯಿತು. ಅದು ಮಹಾನ್ ಗುರುಗಳ ನಾಡು. ಅಲ್ಲಿಂದ ನಾನು ಭಾರತಮಾತೆಯ ಪಾದಗಳಾದ ಕನ್ಯಾಕುಮಾರಿಗೆ ಆಗಮಿಸಿದೆ.

ಚುನಾವಣೆಯ ಕಾವು ನನ್ನ ಹೃದಯ ಮತ್ತು ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಿತ್ತು. ಸಮಾವೇಶ, ರೋಡ್​ಶೋಗಳಲ್ಲಿ ಕಾಣುತ್ತಿದ್ದ ಅಪಾರಸಂಖ್ಯೆಯ ಮುಖಗಳು ನನ್ನ ಕಣ್ಣ ಮುಂದೆ ಬಂದವು. ನಮ್ಮ ನಾರಿಶಕ್ತಿಯ ಆಶೀರ್ವಾದ, ನಂಬಿಕೆ, ವಾತ್ಸಲ್ಯ, ಇವೆಲ್ಲವೂ ಬಹಳ ವಿನಮ್ರವಾದ ಅನುಭವ. ನನ್ನ ಕಣ್ಣುಗಳು ತೇವವಾಗುತ್ತಿದ್ದವು. ನಾನು ಸಾಧನ(ಧ್ಯಾನಸ್ಥ ಸ್ಥಿತಿ)ಗೆ ಪ್ರವೇಶಿಸಿದೆ. ತದನಂತರ, ಬಿಸಿಬಿಸಿ ರಾಜಕೀಯ ಚರ್ಚೆಗಳು, ದಾಳಿ-ಪ್ರತಿದಾಳಿ, ವಿಶಿಷ್ಟ ಆರೋಪಗಳ ಧ್ವನಿ-ಮಾತುಗಳು… ಅವೆಲ್ಲವೂ ಶೂನ್ಯದಲ್ಲಿ ಕಣ್ಮರೆಯಾದವು. ನನ್ನೊಳಗೆ ನಿರ್ಲಿಪ್ತ ಭಾವ ಬೆಳೆಯತೊಡಗಿತು. ನನ್ನ ಮನಸ್ಸು ಬಾಹ್ಯ ಪ್ರಪಂಚದಿಂದ ಸಂಪೂರ್ಣ ಬೇರ್ಪಟ್ಟಿತು.

ದೊಡ್ಡ ಜವಾಬ್ದಾರಿಗಳ ನಡುವೆ ಧ್ಯಾನ ಸವಾಲಿನದಾಗುತ್ತದೆ, ಆದರೆ ಕನ್ಯಾಕುಮಾರಿಯ ನೆಲ ಮತ್ತು ಸ್ವಾಮಿ ವಿವೇಕಾನಂದರ ಸ್ಪೂರ್ತಿ ಅದನ್ನು ಸುಲಭವಾಗಿಸಿತು. ಹುಟ್ಟಿನಿಂದಲೇ ಈ ಮೌಲ್ಯಗಳನ್ನು ನನ್ನಲ್ಲಿ ತುಂಬಿದ ದೇವರಿಗೆ ನಾನು ಕೃತಜ್ಞ. ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿಯ ಈ ಸ್ಥಳದಲ್ಲಿ ಧ್ಯಾನ ಮಾಡುವಾಗ ಏನನ್ನು ಅನುಭವಿಸಿರಬಹುದು ಎಂದು ನಾನು ಯೋಚಿಸುತ್ತಿದ್ದೆ! ನನ್ನ ಧ್ಯಾನದ ಒಂದು ಭಾಗವು ಇದೇ ರೀತಿಯ ಆಲೋಚನೆಗಳ ಹೊಳೆಯಲ್ಲಿ ಹರಿಯಿತು.

ಈ ನಿರ್ಲಿಪ್ತತೆಯ ನಡುವೆ, ಶಾಂತಿ-ಮೌನದ ನಡುವೆ, ಭಾರತದ ಉಜ್ವಲ ಭವಿಷ್ಯಕ್ಕಾಗಿ ನನ್ನ ಮನಸ್ಸಿನಲ್ಲಿ ಆಲೋಚನೆಗಳು ನಿರಂತರವಾಗಿ ಚಿಮ್ಮುತ್ತಿದ್ದವು. ಕನ್ಯಾಕುಮಾರಿಯಲ್ಲಿ ಉದಯಿಸಿದ ಸೂರ್ಯ ನನ್ನ ಆಲೋಚನೆಗಳಿಗೆ ಹೊಸ ಎತ್ತರವನ್ನು ನೀಡಿದ, ಸಾಗರದ ವೈಶಾಲ್ಯ ನನ್ನ ಆಲೋಚನೆಗಳನ್ನು ವಿಸ್ತರಿಸಿತು, ದಿಗಂತದ ವಿಸ್ತಾರವು ಬ್ರಹ್ಮಾಂಡದ ಆಳದಲ್ಲಿ ಹುದುಗಿರುವ ಏಕತೆಯ ನಿರಂತರ ಭಾವನೆಯನ್ನು ನೀಡಿತು. ಹಿಮಾಲಯದ ಮಡಿಲಲ್ಲಿ ದಶಕಗಳ ಹಿಂದೆ ಮಾಡಿದ ಆಲೋಚನೆಗಳು ಮತ್ತು ಅನುಭವಗಳು ಪುನರುಜ್ಜೀವನಗೊಳ್ಳುತ್ತಿರುವಂತೆ ತೋರುತ್ತಿದೆ.

ಮಿತ್ರರೇ, ಕನ್ಯಾಕುಮಾರಿ ಯಾವತ್ತೂ ನನ್ನ ಹೃದಯಕ್ಕೆ ಹತ್ತಿರವಾದುದು. ಇಲ್ಲಿ ವಿವೇಕಾನಂದ ಶಿಲಾ ಸ್ಮಾರಕವನ್ನು ಏಕನಾಥ್ ರಾನಡೆ ಅವರ ನೇತೃತ್ವದಲ್ಲಿ ನಿರ್ವಿುಸಲಾಯಿತು. ಏಕನಾಥ್​ಜೀ ಜತೆ ವ್ಯಾಪಕವಾಗಿ ಪ್ರಯಾಣಿಸುವ ಅವಕಾಶ ನನಗೆ ದೊರೆಯಿತು. ಈ ಸ್ಮಾರಕ ನಿರ್ವಣದ ಸಮಯದಲ್ಲಿ ಕನ್ಯಾಕುಮಾರಿಯಲ್ಲಿಯೂ ಸ್ವಲ್ಪ ಸಮಯ ಕಳೆಯುವ ಅವಕಾಶ ಸಿಕ್ಕಿತು.

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ… ಇದು ಪ್ರತಿಯೊಬ್ಬ ದೇಶವಾಸಿಗಳ ಹೃದಯದಲ್ಲಿ ಆಳವಾಗಿ ಬೇರೂರಿರುವ ಸಾಮಾನ್ಯ ಗುರುತು, ಇದು ತಾಯಿ ಶಕ್ತಿಯು ಕನ್ಯಾಕುಮಾರಿಯ ರೂಪದಲ್ಲಿ ಅವತರಿಸಿದ ಶಕ್ತಿಪೀಠ. ಈ ದಕ್ಷಿಣದ ತುದಿಯಲ್ಲಿ, ತಾಯಿ ಶಕ್ತಿ ತಪಸ್ಸು ಮಾಡಿದಳು, ಭಾರತದ ಉತ್ತರತುದಿಯಲ್ಲಿ ಹಿಮಾಲಯದ ಮೇಲೆ ಕುಳಿತಿರುವ ಶಿವನಿಗಾಗಿ ಕಾಯುತ್ತಿದ್ದಳು.

ಕನ್ಯಾಕುಮಾರಿ ಸಂಗಮಗಳ ನಾಡು. ನಮ್ಮ ದೇಶದ ಪವಿತ್ರ ನದಿಗಳು ವಿವಿಧ ಸಮುದ್ರಗಳಿಗೆ ಸೇರುತ್ತವೆ, ಇಲ್ಲಿ ಆ ಸಮುದ್ರಗಳು ಸಂಗಮಿಸುತ್ತವೆ. ಇಲ್ಲಿ ಇನ್ನೊಂದು ಮಹಾಸಂಗಮಕ್ಕೆ ಸಾಕ್ಷಿಯಾಗಿದ್ದೇವೆ- ಭಾರತದ ಸೈದ್ಧಾಂತಿಕ ಸಂಗಮ! ಇಲ್ಲಿ, ವಿವೇಕಾನಂದ ರಾಕ್ ಸ್ಮಾರಕ, ಸಂತ ತಿರುವಳ್ಳುವರ್ ಪ್ರತಿಮೆ, ಗಾಂಧಿಮಂಟಪ ಮತ್ತು ಕಾಮರಾಜರ್ ಮಣಿಮಂಟಪವಿದೆ. ಈ ದಿಗ್ಗಜರ ಚಿಂತನಾಧಾರೆಗಳು ಇಲ್ಲಿ ಸಂಗಮಗೊಂಡಿವೆ. ಇದು ರಾಷ್ಟ್ರ ನಿರ್ವಣಕ್ಕೆ ಮಹತ್ತರ ಸ್ಪೂರ್ತಿ ನೀಡುತ್ತದೆ.

ತಿರುವಳ್ಳುವರ್ ಪ್ರತಿಮೆ ಸಮುದ್ರದಿಂದ ಭಾರತಮಾತೆಯ ವಿಸ್ತಾರವನ್ನು ನೋಡುತ್ತಿದೆ. ಅವರ ಕೃತಿ ತಿರುಕ್ಕುರಳ್ ಸುಂದರ ತಮಿಳು ಭಾಷೆಯ ಮುಕುಟಮಣಿಗಳಲ್ಲಿ ಒಂದಾಗಿದೆ. ಇದು ಜೀವನದ ಪ್ರತಿಯೊಂದು ಅಂಶವನ್ನು ಒಳಗೊಂಡಿದೆ, ರಾಷ್ಟ್ರಕ್ಕಾಗಿ ಅತ್ಯುತ್ತಮವಾದದ್ದನ್ನು ನೀಡಲು ನಮ್ಮನ್ನು ಪ್ರೇರೇಪಿಸುತ್ತದೆ. ಸ್ನೇಹಿತರೇ, ವಿವೇಕಾನಂದರು ಒಮ್ಮೆ ಹೀಗೆ ಹೇಳಿದ್ದರು, ‘ಪ್ರತಿಯೊಂದು ರಾಷ್ಟ್ರಕ್ಕೂ ತಲುಪಿಸಲು ಒಂದು ಸಂದೇಶವಿದೆ, ಪೂರೈಸಲು ಒಂದು ಧ್ಯೇಯವಿದೆ, ತಲುಪಲು ಒಂದು ಗಮ್ಯವಿದೆ’.

ಭಾರತ ಸಹಸ್ರಾರು ವರ್ಷಗಳಿಂದ ಒಂದು ಅರ್ಥಪೂರ್ಣ ಉದ್ದೇಶ, ಚೈತನ್ಯದೊಂದಿಗೆ ಮುನ್ನಡೆಯುತ್ತಿದೆ. ಸಾವಿರಾರು ವರ್ಷಗಳಿಂದ ಇದು ಚಿಂತನೆಗಳ ತೊಟ್ಟಿಲು. ನಾವು ಗಳಿಸಿದ್ದನ್ನು ಎಂದಿಗೂ ನಮ್ಮ ವೈಯಕ್ತಿಕ ಬಂಡವಾಳವೆಂದು ಪರಿಗಣಿಸುವುದಿಲ್ಲ, ಅದನ್ನು ಆರ್ಥಿಕ ಅಥವಾ ವಸ್ತುನಿಯತಾಂಕಗಳಿಂದ ಅಳೆಯುವುದಿಲ್ಲ. ಆದುದರಿಂದಲೇ, ‘ಇದಂ-ನಾ-ಮಮ’ (ಇದು ನನ್ನದಲ್ಲ) ಭಾರತದ ಅಂತರ್ಗತ, ಸಹಜ ಭಾಗವಾಗಿದೆ.

ಭಾರತದ ಪ್ರಗತಿಯು ಪ್ರಪಂಚದ ಪ್ರಗತಿಗೆ ಕಾರಣವಾಗುತ್ತದೆ. ನಮ್ಮ ಸ್ವಾತಂತ್ರ್ಯ ಚಳವಳಿ ಇದಕ್ಕೆ ಉದಾಹರಣೆ. ಭಾರತ 1947ರ ಆಗಸ್ಟ್ 15ರಂದು ಸ್ವತಂತ್ರವಾಯಿತು. ಆಗ ಪ್ರಪಂಚದ ಅನೇಕ ದೇಶಗಳು ಗುಲಾಮಗಿರಿಯಲ್ಲಿದ್ದವು. ಆ ದೇಶಗಳೂ ಭಾರತದ ಸ್ವಾತಂತ್ರ್ಯದಿಂದ ಸ್ಪೂರ್ತಿ ಮತ್ತು ಶಕ್ತಿಪಡೆದು ಸ್ವಾತಂತ್ರ್ಯ ಗಳಿಸಿದವು. ಕರೊನಾ ಅವಧಿಯ ಉದಾಹರಣೆಯೂ ನಮ್ಮೆದುರಿಗಿದೆ. ಬಡ, ಅಭಿವೃದ್ಧಿಶೀಲ ರಾಷ್ಟ್ರಗಳ ಬಗ್ಗೆ ಆತಂಕ ವ್ಯಕ್ತವಾಗುತ್ತಿದ್ದಾಗ, ಭಾರತದ ಯಶಸ್ವಿ ಪ್ರಯತ್ನಗಳು ಅನೇಕ ದೇಶಗಳಿಗೆ ಪೋ›ತ್ಸಾಹ, ಸಹಕಾರ ನೀಡಿದವು.

ಇಂದು ಭಾರತದ ಆಡಳಿತವು ವಿಶ್ವದ ಹಲವು ದೇಶಗಳಿಗೆ ಮಾದರಿಯಾಗಿದೆ. ಕೇವಲ 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಿರುವುದು ಅಭೂತಪೂರ್ವ. ಜನಪರ ಆಡಳಿತ, ಮಹತ್ವಾಕಾಂಕ್ಷೆಯ ಜಿಲ್ಲೆ, ಮಹತ್ವಾಕಾಂಕ್ಷೆಯ ತಾಲ್ಲೂಕಿನಂತಹ ವಿನೂತನ ಪ್ರಯೋಗಗಳು ಇಂದು ವಿಶ್ವದಲ್ಲಿ ಚರ್ಚೆಯಾಗುತ್ತಿವೆ. ಬಡವರ ಸಬಲೀಕರಣದಿಂದ ಕೊನೆಯ ಮೈಲಿಗೆ ತಲುಪಿಸುವವರೆಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆದ್ಯತೆ ನೀಡುವ ನಮ್ಮ ಪ್ರಯತ್ನಗಳು ಜಗತ್ತಿಗೆ ಸ್ಪೂರ್ತಿ ನೀಡಿವೆ. ಪಾರದರ್ಶಕತೆ ತರಲು, ಬಡವರ ಔನ್ನತ್ಯಕ್ಕೆ ನಾವು ಹೇಗೆ ತಂತ್ರಜ್ಞಾನ ಬಳಸಬಹುದು ಎಂಬುದಕ್ಕೆ ಭಾರತದ ಡಿಜಿಟಲ್ ಇಂಡಿಯಾ ಅಭಿಯಾನ ಇಂದು ಇಡೀ ಜಗತ್ತಿಗೆ ಉದಾಹರಣೆ. ಭಾರತದಲ್ಲಿ ಇಂದು, ಅಗ್ಗದ ಡೇಟಾವು ಮಾಹಿತಿ ಮತ್ತು ಸೇವೆಗಳಿಗೆ ಬಡವರ ಪ್ರವೇಶವನ್ನು ಖಾತ್ರಿಪಡಿಸುವ ಮೂಲಕ ಸಾಮಾಜಿಕ ಸಮಾನತೆಯ ಮಾಧ್ಯಮವಾಗುತ್ತಿದೆ. ಇಡೀ ಜಗತ್ತು ಈ ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣವನ್ನು ಸಂಶೋಧನಾ ದೃಷ್ಟಿಕೋನದಿಂದ ನೋಡುತ್ತಿದೆ.

ಸ್ನೇಹಿತರೇ, ಭಾರತದ ಅಭಿವೃದ್ಧಿ ಪಥ ನಮಗೆ ಹೆಮ್ಮೆ, ವೈಭವ ತುಂಬುತ್ತದೆ, ಅದೇ ವೇಳೆ, ಇದು 140 ಕೋಟಿ ನಾಗರಿಕರಿಗೆ ಅವರ ಜವಾಬ್ದಾರಿಗಳನ್ನೂ ನೆನಪಿಸುತ್ತದೆ. ಈಗ, ಒಂದು ಕ್ಷಣವನ್ನೂ ವ್ಯರ್ಥ ಮಾಡದೆ, ನಾವು ಕರ್ತವ್ಯ, ದೊಡ್ಡ ಗುರಿ ಕಡೆಗೆ ಹೆಜ್ಜೆ ಹಾಕಬೇಕು. ಹೊಸ ಕನಸು ಕಾಣಬೇಕು, ಅವುಗಳನ್ನು ನನಸು ಮಾಡಬೇಕು ಮತ್ತು ಆ ಕನಸುಗಳನ್ನು ಬದುಕಲು ಪ್ರಾರಂಭಿಸಬೇಕು.

ಭಾರತದ ಅಭಿವೃದ್ಧಿಯನ್ನು ಜಾಗತಿಕ ದೃಷ್ಟಿಕೋನದಲ್ಲಿ ನೋಡಬೇಕು. ಇದಕ್ಕಾಗಿ ನಾವು ಭಾರತದ ಅಂತರ್ಗತ ಸಾಮರ್ಥ್ಯವನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯ. ನಾವು ಭಾರತದ ಶಕ್ತಿಯನ್ನು ಪ್ರಪಂಚದ ಲಾಭಕ್ಕಾಗಿ ಬಳಸಿಕೊಳ್ಳಬೇಕು. 21ನೇ ಶತಮಾನದ ಜಗತ್ತು ಹಲವು ಭರವಸೆಗಳೊಂದಿಗೆ ಭಾರತದತ್ತ ನೋಡುತ್ತಿದೆ. ಭಾರತವು ಸುಧಾರಣೆಯನ್ನು ಕೇವಲ ಆರ್ಥಿಕ ಸುಧಾರಣೆಗಳಿಗೆ ಸೀಮಿತಗೊಳಿಸುವುದಿಲ್ಲ. ಸುಧಾರಣೆಯ ದಿಕ್ಕಿನತ್ತ ನಾವು ಜೀವನದ ಪ್ರತಿಯೊಂದು ಅಂಶದಲ್ಲೂ ಮುನ್ನಡೆಯಬೇಕು. ನಮ್ಮ ಸುಧಾರಣೆಗಳು 2047ರ ವೇಳೆಗೆ ‘ವಿಕಸಿತ ಭಾರತ’ದ ಆಶಯಗಳಿಗೆ ಅನುಗುಣವಾಗಿರಬೇಕು.

ಸ್ನೇಹಿತರೇ, ದೇವರು ನಮಗೆ ಭರತಭೂಮಿಯಲ್ಲಿ ಜನ್ಮ ನೀಡಿದ್ದಾನೆ ಎಂದು ನಾವು ಪ್ರತಿಕ್ಷಣವೂ ಹೆಮ್ಮೆಪಡಬೇಕು. ಭಾರತಕ್ಕೆ ಸೇವೆ ಸಲ್ಲಿಸಲು ಮತ್ತು ಅದರ ಉನ್ನತಿಯ ಪ್ರಯಾಣದಲ್ಲಿ ನಮ್ಮ ಪಾತ್ರ ನಿರ್ವಹಿಸಲು ದೇವರು ನಮ್ಮನ್ನು ಆರಿಸಿಕೊಂಡಿದ್ದಾನೆ. ಪುರಾತನ ಮೌಲ್ಯಗಳನ್ನು ಆಧುನಿಕ ರೂಪದಲ್ಲಿ ಅಳವಡಿಸಿಕೊಂಡು ನಮ್ಮ ಪರಂಪರೆಯನ್ನು ಆಧುನಿಕ ರೀತಿಯಲ್ಲಿ ಮರುವ್ಯಾಖ್ಯಾನಿಸಬೇಕು. ಕಳೆದ 10 ವರ್ಷಗಳಲ್ಲಿ ಬೆಳೆಯುತ್ತಿರುವ ಭಾರತದ ಈ ಸಾಮರ್ಥ್ಯವನ್ನು ನಾನು ನೋಡಿದ್ದೇನೆ, ಅನುಭವಿಸಿದ್ದೇನೆ.

20ನೇ ಶತಮಾನದ 4 ಮತ್ತು 5ನೇ ದಶಕಗಳನ್ನು ಸ್ವಾತಂತ್ರ್ಯ ಚಳವಳಿಗೆ ಹೊಸ ವೇಗ ನೀಡಲು ಬಳಸಿಕೊಂಡಂತೆ, 21ನೇ ಶತಮಾನದ ಈ 25 ವರ್ಷಗಳಲ್ಲಿ ನಾವು ವಿಕಸಿತ ಭಾರತಕ್ಕೆ ಅಡಿಪಾಯ ಹಾಕಬೇಕು. 1897ರಲ್ಲಿ ಸ್ವಾಮಿ ವಿವೇಕಾನಂದರು ಮುಂದಿನ 50 ವರ್ಷಗಳನ್ನು ದೇಶಕ್ಕಾಗಿ ಮೀಸಲಿಡಬೇಕು ಎಂದು ಹೇಳಿದ್ದರು. ಈ ಕರೆ ನೀಡಿದ 50 ವರ್ಷಗಳ ನಂತರ, ಭಾರತವು 1947ರಲ್ಲಿ ಸ್ವಾತಂತ್ರ್ಯ ಗಳಿಸಿತು. ಇಂದು ನಮಗೆ ಅದೇ ಸುವರ್ಣಾವಕಾಶವಿದೆ. ಮುಂದಿನ 25 ವರ್ಷಗಳನ್ನು ದೇಶಕ್ಕಾಗಿ ಮುಡಿಪಾಗಿಡೋಣ.

(ಈ ಚಿಂತನಾ ಬರಹವನ್ನು ಪ್ರಧಾನಿ ಮೋದಿ ಅವರು ಜೂನ್ 1ರ ಸಂಜೆ 4.15ರಿಂದ 7ರವರೆಗೆ ಕನ್ಯಾಕುಮಾರಿಯಿಂದ ದೆಹಲಿಗೆ ಹಿಂದಿರುಗುವ ವಿಮಾನದಲ್ಲಿ ಬರೆದಿದ್ದಾರೆ)

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Best Never The Loudest': Bear Grylls Gives Shoutout To ‘Powerful Leader’ PM Modi

Media Coverage

'Best Never The Loudest': Bear Grylls Gives Shoutout To ‘Powerful Leader’ PM Modi
NM on the go

Nm on the go

Always be the first to hear from the PM. Get the App Now!
...
ಭಾರತದ ಏಕತೆ ಮತ್ತು ಪ್ರಗತಿಗೆ ಮೀಸಲಾದ ಜೀವನ
July 06, 2026

ಇಂದು, ಜುಲೈ 6, ರಾಷ್ಟ್ರೀಯತೆ ಮತ್ತು ನಿಸ್ವಾರ್ಥ ಸೇವೆಯ ಆದರ್ಶಗಳನ್ನು ಗೌರವಿಸುವ ಅಸಂಖ್ಯಾತ ಜನರಿಗೆ ವಿಶೇಷ ದಿನವಾಗಿದೆ. ನಾವು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ 125ನೇ ಜನ್ಮ ಜಯಂತಿಯನ್ನು ಸ್ಮರಿಸುತ್ತಿದ್ದೇವೆ. ಅವರ ಜೀವನವು ಮಾ ಭಾರತಿಯ ಬಗೆಗಿನ ಧೈರ್ಯ ಮತ್ತು ಅಚಲ ಬದ್ಧತೆಗೆ ಎಂದೆಂದಿಗೂ ಮಾದರಿಯಾಗಿದೆ. ಆಧುನಿಕ ಭಾರತದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರಷ್ಟು ಆಳವಾಗಿ ಬುದ್ಧಿವಂತಿಕೆ, ಸಾರ್ವಜನಿಕ ಸೇವೆ ಮತ್ತು ನೈತಿಕ ದೃಢತೆಯ ಸಂಗಮವನ್ನು ಹೊಂದಿದ್ದ ನಾಯಕರು ಬಹಳ ಕಡಿಮೆ.

ಯುವ ಶ್ಯಾಮ ಪ್ರಸಾದ್ ರವರು ತಮಗೆ ಸುಲಭವಾಗಿ, ಸಂರಕ್ಷಿತ ಮತ್ತು ಸುಖಮಯ ಜೀವನವನ್ನು ನೀಡಬಲ್ಲಂತಹ ಪರಿಸರದಲ್ಲಿ ಜನಿಸಿದ್ದರು. ಅವರ ತಂದೆ ಸರ್ ಅಶುತೋಷ್ ಮುಖರ್ಜಿಯವರು ಆ ಕಾಲದ ಪ್ರಮುಖ ಶಿಕ್ಷಣ ತಜ್ಞರು ಮತ್ತು ಬುದ್ಧಿಜೀವಿಗಳಲ್ಲಿ ಒಬ್ಬರಾಗಿದ್ದರು. ಆದರೆ, ವಿಧಿಯು ಅವರ ಮುಂದೆ ಸೌಲಭ್ಯಗಳ ಹಾದಿಯನ್ನು ಇರಿಸಿದ್ದರೂ, ಅವರ ಆತ್ಮಸಾಕ್ಷಿಯು ಅವರನ್ನು ತ್ಯಾಗ ಮತ್ತು ರಾಷ್ಟ್ರ ಸೇವೆಯ ಹಾದಿಯತ್ತ ಕೊಂಡೊಯ್ಯಿತು. ವಸಾಹತುಶಾಹಿ, ಕೋಮುವಾದ, ಮಾನವೀಯ ಸವಾಲುಗಳು ಹೀಗೆ ಆ ಕಾಲದ ಯಾವುದೇ ಪ್ರಕ್ಷುಬ್ಧತೆಯ ವಿಷಯದಲ್ಲಿ ಮೌನ ಪ್ರೇಕ್ಷಕರಾಗಿ ಉಳಿಯಲು ಅವರಿಗೆ ಸಾಧ್ಯವಿರಲಿಲ್ಲ. ಈ ಹಾದಿಯಲ್ಲಿ ಅವರು ತಮ್ಮ ಶಿಶುವಿನ ಮರಣ ಮತ್ತು ನಂತರ ಪತ್ನಿಯ ಅಗಲಿಕೆಯಂತಹ ಆಳವಾದ ವೈಯಕ್ತಿಕ ದುರಂತಗಳನ್ನು ಅನುಭವಿಸಿದರು. ಆದರೂ, ಈ ದುರಂತಗಳು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದವು ಮತ್ತು ಸೇವೆಯ ಬಗೆಗಿನ ಅವರ ಬದ್ಧತೆಯನ್ನು ಹೆಚ್ಚಿಸಿದವು.

ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಸಾರ್ವಜನಿಕ ಜೀವನವನ್ನು ವ್ಯಾಖ್ಯಾನಿಸುವ ಒಂದು ಆದರ್ಶವಿದ್ದರೆ, ಅದು ಭಾರತದ ಅವಿಭಾಜ್ಯತೆ. ದೇಶ ವಿಭಜನೆಯ ಪ್ರಕ್ಷುಬ್ಧತೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಭಾರತದ ಅವಿಭಾಜ್ಯ ಅಂಗವಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಅವರು ದೃಢವಾಗಿ ನಿಂತರು. ಕೆಲವು ವರ್ಷಗಳ ನಂತರ, ಅದೇ ದೃಢ ನಂಬಿಕೆ ಅವರನ್ನು ಜಮ್ಮು ಮತ್ತು ಕಾಶ್ಮೀರದತ್ತ ಸೆಳೆಯಿತು. ಸೆರೆವಾಸ ಅವರನ್ನು ನಿರುತ್ಸಾಹಗೊಳಿಸಲಿಲ್ಲ ಮತ್ತು ಏಕಾಂತತೆ ಅವರನ್ನು ಕುಗ್ಗಿಸಲಿಲ್ಲ. ತಾವು ಯಾರ ಹಿತಕ್ಕಾಗಿ ಹೋರಾಡಿದ್ದರೋ, ಅಂತಹ ಅಸಂಖ್ಯಾತ ಜನರಿಂದ ದೂರವಿದ್ದಾಗಲೇ ಬಂಧನದಲ್ಲಿ ಅವರ ಜೀವನವು ಅಕಾಲಿಕವಾಗಿ ಕೊನೆಗೊಂಡಿತು. ಇತಿಹಾಸದಲ್ಲಿ ಒಬ್ಬ ವ್ಯಕ್ತಿಯ ಅಂತಿಮ ತ್ಯಾಗವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಸ್ಮರಣೆಯ ಭಾಗವಾಗುವ ಕೆಲವು ಕ್ಷಣಗಳು ಬರುತ್ತವೆ. ಡಾ. ಮುಖರ್ಜಿಯವರ ಕೊನೆಯ ಪಯಣ ಅಂತಹ ಒಂದು ಕ್ಷಣವಾಗಿದೆ. ಆಚಾರ್ಯ ವಿನೋಬಾ ಭಾವೆಯವರು, "ಡಾ. ಮುಖರ್ಜಿಯವರು ತಮಗೆ ನಂಬಿಕೆಯಿದ್ದ ಉದ್ದೇಶಕ್ಕಾಗಿ ತಮ್ಮನ್ನೇ ಬಲಿದಾನ ಮಾಡಿಕೊಂಡರು" ಎಂದು ಹೇಳಿದ್ದರು. ಹಲವು ವರ್ಷಗಳ ನಂತರ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ 370 ಮತ್ತು 35(ಎ) ವಿಧಿಗಳ ರದ್ದು ಅವರ ಹುತಾತ್ಮತೆಗೆ ನೀಡಿದ ಅತ್ಯಂತ ಸೂಕ್ತ ಗೌರವವಾಗಿದೆ.

ಡಾ. ಮುಖರ್ಜಿಯವರು ಭಾರತಕ್ಕೆ ಮತ್ತು ಭಾರತೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಿದರು. ಆ ಕಾಲದ ಸಾಂಪ್ರದಾಯಿಕ ಮನಸ್ಥಿತಿಯನ್ನು ವಿರೋಧಿಸುವ ಸಂಸ್ಥೆಗಳನ್ನು ನಿರ್ಮಿಸುವ ಮತ್ತು ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಅವರು ಇದನ್ನು ಸಾಧಿಸಿದರು. ಅವರು ಕಲ್ಕತ್ತಾ ವಿಶ್ವವಿದ್ಯಾನಿಲಯದ ಅತಿಕಿರಿಯ ಉಪಕುಲಪತಿಯಾದರು. ತಮ್ಮ ವಿಶಿಷ್ಟ ಶೈಲಿಯಲ್ಲಿ, ದೇಶಭಕ್ತಿಯುತ ಮತ್ತು ಭವಿಷ್ಯದ ದೃಷ್ಟಿಯುಳ್ಳ ಸಕಾರಾತ್ಮಕ ಬದಲಾವಣೆಗಳನ್ನು ಅವರು ತಂದರು. ಶಿಕ್ಷಣ ತಜ್ಞರ ಸಮಾವೇಶವೊಂದರಲ್ಲಿ ಮಾತನಾಡುತ್ತಾ, ಡಾ. ಮುಖರ್ಜಿಯವರು, "ಶೈಕ್ಷಣಿಕ ಸಂಸ್ಥೆಗಳನ್ನು ಕೇವಲ ಗುಮಾಸ್ತರು ಮತ್ತು ಕಡಿಮೆ ಸಂಬಳ ಪಡೆಯುವ ಸಿಬ್ಬಂದಿಯನ್ನು ಸಿದ್ಧಪಡಿಸುವ ಕಾರ್ಖಾನೆಗಳೆಂದು ನೋಡುವುದು ತಪ್ಪು. ನಾವು ಪುರಸಭೆಗಳು, ಪ್ರಾಂತೀಯ ಮತ್ತು ಕೇಂದ್ರ ಶಾಸನಸಭೆಗಳಂತಹ ನಮ್ಮ ಸ್ವಯಂ-ಆಡಳಿತ ಸಂಸ್ಥೆಗಳಿಗೆ ನಾಯಕತ್ವವನ್ನು ನೀಡಬಲ್ಲ ಹಾಗೂ ಹಣಕಾಸು, ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಗಳಂತಹ ಜೀವನದ ವಿವಿಧ ಕ್ಷೇತ್ರಗಳಲ್ಲಿ ವ್ಯವಹಾರಗಳನ್ನು ನಿರ್ವಹಿಸಬಲ್ಲ ವಿದ್ಯಾರ್ಥಿಗಳನ್ನು ಸಿದ್ಧಪಡಿಸಬೇಕು" ಎಂದು ಅವರು ಅದ್ಭುತವಾಗಿ ಹೇಳಿದ್ದರು.

ಅವರ ನೇತೃತ್ವದಲ್ಲಿ, ಕಲ್ಕತ್ತಾ ವಿಶ್ವವಿದ್ಯಾನಿಲಯವು ಗ್ರಂಥಾಲಯದ ಮೂಲಸೌಕರ್ಯಗಳನ್ನು ಸುಧಾರಿಸುವುದು, ವಿಜ್ಞಾನದಲ್ಲಿ ಸಂಶೋಧನೆಯನ್ನು ಉತ್ತೇಜಿಸುವುದು, ಕಲಾಕೃತಿಗಳ ಅಧ್ಯಯನವನ್ನು ಪ್ರೋತ್ಸಾಹಿಸುವುದು ಮತ್ತು ಕೃಷಿಯಲ್ಲಿ ಕೋರ್ಸ್‌ಗಳನ್ನು ಸ್ಥಾಪಿಸುವಂತಹ ವಿಶಿಷ್ಟ ಪ್ರಯತ್ನಗಳನ್ನು ಕೈಗೊಂಡಿತು. ಕ್ರೀಡೆ, ಶಿಕ್ಷಕರ ತರಬೇತಿ ಮತ್ತು ವಿದ್ಯಾರ್ಥಿ ಕಲ್ಯಾಣದಂತಹ ಕ್ಷೇತ್ರಗಳತ್ತ ಅವರು ಗಮನ ಸೆಳೆದರು. ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳಲ್ಲಿ ಹೆಮ್ಮೆಯ ಭಾವನೆಯನ್ನು ಮೂಡಿಸಲು, ಅವರು ಜನವರಿ 24 ಅನ್ನು ವಿಶ್ವವಿದ್ಯಾನಿಲಯದ ಸ್ಥಾಪನಾ ದಿನವನ್ನಾಗಿ ಆಚರಿಸುವ ಪದ್ಧತಿಯನ್ನು ಪ್ರಾರಂಭಿಸಿದರು. ವಿಶ್ವವಿದ್ಯಾನಿಲಯಕ್ಕಾಗಿ ಗೀತೆ ರಚಿಸಲು ಅವರು ಸ್ವತಃ ಗುರುದೇವ ಟ್ಯಾಗೋರ್ ಅವರನ್ನೇ ಕೋರಿದ್ದರು.

ಈ ಮನೋಭಾವದ ಮತ್ತೊಂದು ಉದಾಹರಣೆಯನ್ನು ಅವರ ಜೀವನದ ನಂತರದ ಭಾಗದಲ್ಲಿ, ಅವರು ಭಾರತೀಯ ಜನಸಂಘವನ್ನು ಸ್ಥಾಪಿಸಲು ನಿರ್ಧರಿಸಿದಾಗ ಕಾಣಬಹುದು. ಕಾಂಗ್ರೆಸ್ ಪಕ್ಷವು ಸರ್ವವ್ಯಾಪಿಯಾಗಿದ್ದ ಸಮಯದಲ್ಲಿ, ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಹೊಂದಿರುವಂತೆಯೇ ಭಾರತದ ಪ್ರಗತಿಗಾಗಿ ಧ್ವನಿ ಎತ್ತಲು ಪರ್ಯಾಯ ವೇದಿಕೆಯ ಅಗತ್ಯವಿದೆ ಎಂದು ಅವರು ಭಾವಿಸಿದರು. ಪಕ್ಷದ ಚಿಹ್ನೆಯು ಮಣ್ಣಿನ ದೀಪವಾಗಿದ್ದುದು ಬಹಳ ಅರ್ಥಪೂರ್ಣವಾಗಿತ್ತು. ಒಂದು ದೀಪವು ಚಿಕ್ಕದಾಗಿ ಕಾಣಿಸಬಹುದು, ಆದರೆ ಅದು ತನ್ನ ಸುತ್ತಲಿನ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಜನಸಂಘವು ಸಕ್ರಿಯವಾಗಿದ್ದ ವರ್ಷಗಳಲ್ಲಿ ಮತ್ತು ನಂತರದ ದಿನಗಳಲ್ಲಿ ಮಾಡಿದ್ದು ಕೂಡ ಇದನ್ನೇ.

ಭಾರತದ ಕೈಗಾರಿಕಾ ಮತ್ತು ಪೂರೈಕೆ ಸಚಿವರಾಗಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಅಧಿಕಾರಾವಧಿಯು, ಅಭಿವೃದ್ಧಿಯ ಕುರಿತಾದ ಅವರ ಸಮಗ್ರ ಮತ್ತು ಮಾನವೀಯ ದೃಷ್ಟಿಕೋನವನ್ನು ಹೊಂದಿದ್ದ ಒಬ್ಬ ರಾಜನೀತಿಜ್ಞರನ್ನು ಅನಾವರಣಗೊಳಿಸುತ್ತದೆ. ಅವರು ಕೈಗಾರಿಕೆಯನ್ನು ನವತಂತ್ರದ ಭಾರತಕ್ಕೆ ಘನತೆ, ಅವಕಾಶ ಮತ್ತು ಆತ್ಮವಿಶ್ವಾಸವನ್ನು ಮರಳಿ ತರುವ ಸಾಧನವಾಗಿ ನೋಡಿದರು. ಅವರು ಸಂಪತ್ತಿನ ಸೃಷ್ಟಿ ಮತ್ತು ಮೌಲ್ಯವರ್ಧನೆಯನ್ನು ಗೌರವಿಸಿದರು. ದಾಮೋದರ ವ್ಯಾಲಿ ಕಾರ್ಪೊರೇಷನ್, ಸಿಂಧ್ರಿ ರಸಗೊಬ್ಬರ ಕಾರ್ಖಾನೆ ಮತ್ತು ಬಲಿಷ್ಠ ಕೈಗಾರಿಕಾ ನೀತಿಯಂತಹ ಪ್ರವರ್ತಕ ಉಪಕ್ರಮಗಳ ಮೂಲಕ ಆಧುನಿಕ ಕೈಗಾರಿಕಾ ಭಾರತದ ಅಡಿಪಾಯವನ್ನು ಹಾಕುವಾಗ, ಅವರು ಭಾರತದ ಸಾಂಪ್ರದಾಯಿಕ ಶಕ್ತಿಗಳು ನಿರ್ಲಕ್ಷ್ಯಕ್ಕೆ ಒಳಗಾಗದಂತೆ ಏಕಕಾಲದಲ್ಲಿ ನೋಡಿಕೊಂಡರು. ಕೈಮಗ್ಗ, ಕುಟೀರ ಕೈಗಾರಿಕೆಗಳು, ಕುಶಲಕರ್ಮಿಗಳು ಮತ್ತು ಜವಳಿ ಕಾರ್ಮಿಕರು ಅವರಲ್ಲಿ ಸಮಾನವಾದ ಬದ್ಧತೆಯುಳ್ಳ ಚಾಂಪಿಯನ್ ಅನ್ನು ಕಂಡುಕೊಂಡರು.

ಇಲ್ಲಿ, ನಾನು ವೈಯಕ್ತಿಕ ಅನುಭವವನ್ನು ಹಂಚಿಕೊಳ್ಳಲು ಬಯಸುತ್ತೇನೆ. ಸ್ವಾವಲಂಬನೆಯ ಸ್ಪಷ್ಟ ದೃಷ್ಟಿಯೊಂದಿಗೆ ಡಾ. ಮುಖರ್ಜಿಯವರು ಸ್ಥಾಪಿಸಲು ಶ್ರಮಿಸಿದ ಸಿಂಧ್ರಿ ಕಾರ್ಖಾನೆಯನ್ನು, ಹಲವು ದಶಕಗಳ ಕಾಲ ದೇಶವನ್ನು ಆಳಿದವರು ನಿರ್ಲಕ್ಷಿಸಿದ್ದರು. ನಮ್ಮ ಸರ್ಕಾರಕ್ಕೆ ಅದರ ಪುನರುಜ್ಜೀವನಕ್ಕೆ ಕೊಡುಗೆ ನೀಡುವ ಅವಕಾಶ ದೊರೆತಿದ್ದು ನನ್ನ ಪಾಲಿಗೆ ಹೆಮ್ಮೆಯ ವಿಷಯವಾಗಿದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಿಜಕ್ಕೂ ಅತ್ಯಂತ ವಿಶೇಷ ಕ್ಷಣಗಳಲ್ಲಿ ಒಂದಾಗಿದೆ.

ಭಾರತದ ನಾಗರಿಕತೆಯ ಪರಂಪರೆಯು ದೀರ್ಘಕಾಲದಿಂದಲೂ ಸಂವಾದ ಮತ್ತು ಚರ್ಚೆಗಳನ್ನು ಸಂಭ್ರಮಿಸಿದೆ. ಡಾ. ಮುಖರ್ಜಿಯವರು ಈ ಪ್ರಜಾಸಾಮಾಜಿಕ ಮನೋಭಾವವನ್ನು ಸಾಕಾರಗೊಳಿಸಿದ್ದರು. ದೇಶ ನಿರ್ಮಾಣದ ಕಾರ್ಯವು, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದು ಎಂದು ನಂಬಿ, ಅವರು ಪಂಡಿತ್ ನೆಹರು ಅವರ ಸಂಪುಟಕ್ಕೆ ಸೇರಿದರು. ಅವರು ಪ್ರಾಮಾಣಿಕತೆಯಿಂದ ಮತ್ತು ರಚನಾತ್ಮಕ ಮನೋಭಾವದಿಂದ ಸೇವೆ ಸಲ್ಲಿಸಿದರು. ಆದರೆ, ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಶ್ನೆಗಳು ಭಿನ್ನ ಹಾದಿಯನ್ನು ಬಯಸುತ್ತವೆ ಎಂದು ಅವರಿಗೆ ಅನ್ನಿಸಿದಾಗ, ಅವರು ಘನತೆಯಿಂದ ಅಧಿಕಾರ ತ್ಯಜಿಸಿದರು ಮತ್ತು ರಾಷ್ಟ್ರಕ್ಕೆ ಅಗತ್ಯವೆಂದು ಅವರು ನಂಬಿದ್ದ ರಾಜಕೀಯ ಕೆಲಸಕ್ಕಾಗಿ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡರು.

75 ವರ್ಷಗಳ ಹಿಂದೆ, ಪಂಡಿತ್ ನೆಹರು ಅವರು ಮೊದಲ ತಿದ್ದುಪಡಿಯನ್ನು ತಂದರು, ಇದು ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿತ್ತು. ಡಾ. ಮುಖರ್ಜಿಯವರು ಇದನ್ನು ತೀವ್ರವಾಗಿ ಟೀಕಿಸಿದವರಲ್ಲಿ ಒಬ್ಬರಾಗಿದ್ದರು. ಕಾಂಗ್ರೆಸ್ ಏನು ಮಾಡಲು ಸಮರ್ಥವಾಗಿದೆ ಎಂಬುದನ್ನು ಅವರು ಸಂಪೂರ್ಣವಾಗಿ ಅರಿತಿದ್ದರು. ಮತ್ತು ಅವರು ಹೇಳಿದ್ದು ನಿಜವಾಯಿತು. 75 ವರ್ಷಗಳ ಹಿಂದೆ ಮೊದಲ ತಿದ್ದುಪಡಿಯನ್ನು ತಂದವರು, 1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದರು ಮತ್ತು 50 ವರ್ಷಗಳ ಹಿಂದೆ 42ನೇ ತಿದ್ದುಪಡಿ ಕಾಯಿದೆಯನ್ನು ತಂದರು, ಇದು ಮತ್ತೊಮ್ಮೆ ಉದಾರವಾದಿ ಪ್ರಜಾಸತ್ತಾತ್ಮಕ ಮೌಲ್ಯಗಳ ಮೂಲದ ಮೇಲೆ ದಾಳಿ ಮಾಡಿತು.

ಡಾ. ಮುಖರ್ಜಿಯವರು ತಮ್ಮ ಮಾನವೀಯ ಪ್ರಯತ್ನಗಳಿಗಾಗಿಯೂ ಜನಪ್ರಿಯರಾಗಿದ್ದರು. 1943 ರಲ್ಲಿ ಬಂಗಾಳದಲ್ಲಿ ಅತಿ ಭೀಕರ ಬರಗಾಲ ಉಂಟಾದಾಗ, ಡಾ. ಮುಖರ್ಜಿಯವರು ಸಂತ್ರಸ್ತರಿಗೆ ಸೇವೆ ಸಲ್ಲಿಸುವುದರಲ್ಲಿ ಮಗ್ನರಾದರು. ಜನರಿಗೆ ಆಹಾರ ಒದಗಿಸಲು ಹಲವಾರು ಕ್ಯಾಂಟೀನ್‌ಗಳು ಮತ್ತು ಪರಿಹಾರ ಕೇಂದ್ರಗಳನ್ನು ತೆರೆಯುವುದನ್ನು ಅವರು ಖಚಿತಪಡಿಸಿದರು. ಒಂದು ಕಡೆ, ಅವರು ತಮ್ಮ ಜನರ ಸಂಕಷ್ಟದಿಂದ ತೀವ್ರವಾಗಿ ನೊಂದಿದ್ದರೆ, ಇನ್ನೊಂದೆಡೆ ವಸಾಹತುಶಾಹಿ ಆಡಳಿತಗಾರರ ಸಂವೇದನಾಹೀನತೆಯು ಅವರನ್ನು ಅಸಹ್ಯಪಡುವಂತೆ ಮಾಡಿತ್ತು. ಅವರು 'ಪಂಚಶೇರ್ ಮನ್ವಾಂತರ್' (ಐವತ್ತರ ಕ್ಷಾಮ) ಎಂಬ ಪುಸ್ತಕವನ್ನೂ ಬರೆದರು, ಅದರಲ್ಲಿ ಅವರು ತಮ್ಮ ನೋವನ್ನು ವ್ಯಕ್ತಪಡಿಸಿದರು. 1942 ರಲ್ಲಿ ಮಿಡ್ನಾಪುರದಲ್ಲಿ ಸೂಪರ್ ಸೈಕ್ಲೋನ್ ಅಪ್ಪಳಿಸಿದಾಗ, ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಅವರು ಮಾಡಿದ ಪ್ರಯತ್ನಗಳು ವ್ಯಾಪಕವಾಗಿ ಶ್ಲಾಘನೆಗೆ ಒಳಗಾದವು.

ಕೋಲ್ಕತ್ತಾದ ಕಾಲೇಜೊಂದರಲ್ಲಿ ಮಾತನಾಡುತ್ತಾ, ಡಾ. ಮುಖರ್ಜಿಯವರು "ನೀವು ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ, ಅದನ್ನು ಗಂಭೀರವಾಗಿ, ಸಂಪೂರ್ಣವಾಗಿ ಮತ್ತು ಚೆನ್ನಾಗಿ ಮಾಡಿ; ಅದನ್ನು ಅರ್ಧಕ್ಕೆ ಬಿಡಬೇಡಿ ಅಥವಾ ಅಪೂರ್ಣವಾಗಿ ಬಿಡಬೇಡಿ, ನೀವು ನಿಮ್ಮ ಅತ್ಯುತ್ತಮ ಪ್ರಯತ್ನವನ್ನು ನೀಡುವವರೆಗೂ ಎಂದಿಗೂ ತೃಪ್ತರಾಗಬೇಡಿ." ಎಂದು ಅವರು ಯುವಕರಿಗೆ ಕರೆ ನೀಡಿದರು. ಭಾರತವು 'ವಿಕಸಿತ ಭಾರತ'ದ ಗುರಿಯತ್ತ ಮುನ್ನಡೆಯುತ್ತಿರುವಾಗ, ನಾವು ಅವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವವೆಂದರೆ, ಅವರು ಆಳವಾಗಿ ನಂಬಿದ್ದ ಬಲಿಷ್ಠ, ಸಂಘಟಿತ, ಆತ್ಮವಿಶ್ವಾಸವುಳ್ಳ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ನಿರ್ಮಿಸಲು ಪ್ರತಿದಿನ ಶ್ರಮಿಸುವುದು. ಮತ್ತು ಇಂದಿನ ಯುವಕರನ್ನು ನೋಡಿದಾಗ, ಅವರು ಸಂದರ್ಭಕ್ಕೆ ತಕ್ಕಂತೆ ಮುಂದೆ ಬಂದು, ನಿಖರವಾಗಿ ಅದನ್ನೇ ಮಾಡುತ್ತಾರೆ ಎಂಬ ದೃಢವಾದ ನಂಬಿಕೆ ನನಗಿದೆ.

- ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ