ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಉತ್ತರ ನೀಡಿ, ಈಶಾನ್ಯ ಭಾಗ ಇನ್ನು ಯಾವುದೇ ವಿಧದಲ್ಲೂ ನಿರ್ಲಕ್ಷಿತ ಭಾಗವಲ್ಲ ಎಂದರು.

ಸರ್ಕಾರ ಹಲವು ವಲಯಗಳಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದಕ್ಕೆ ಧನ್ಯವಾದಗಳನ್ನು ಹೇಳಿದ ಅವರು, ಈಶಾನ್ಯ ಭಾಗ ಇಂದು ದೇಶದ ಪ್ರಮುಖ ಆರ್ಥಿಕ ಬೆಳವಣಿಗೆಯ ಪ್ರಗತಿಯತ್ತ ಸಾಗಿದೆ.

“ಈಶಾನ್ಯ ಭಾಗದ ಜನರು ಇನ್ನು, ದೆಹಲಿ ನಮಗೆ ದೂರದ ಸ್ಥಳ ಎಂದು ಭಾವಿಸಬೇಕಿಲ್ಲ, ಇದೀಗ ಸರ್ಕಾರವೇ ಅವರ ಮನೆಯ ಬಾಗಿಲ ಬಳಿ ಇದೆ. ನಮ್ಮ ಸಚಿವರು ಮತ್ತು ಅಧಿಕಾರಿಗಳು ನಿರಂತರವಾಗಿ ಆ ಪ್ರಾಂತ್ಯಕ್ಕೆ ಭೇಟಿ ನೀಡುತ್ತಿದ್ದಾರೆ” ಎಂದು ಹೇಳಿದರು.

ಈಶಾನ್ಯ ಭಾಗಕ್ಕೆ ವಿದ್ಯುತ್, ರೈಲ್ವೆ ಸಂಪರ್ಕ, ಮೊಬೈಲ್ ಸಂಪರ್ಕ ಒದಗಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ ಮತ್ತು ಆ ಭಾಗದ ಅಭಿವೃದ್ಧಿಯ ಹಲವು ಆಯಾಮಗಳಿಗೆ ಆದ್ಯತೆ ನೀಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಇತ್ತೀಚಿನ ಬೋಡೋ ಒಪ್ಪಂದದ ಕುರಿತು ಉಲ್ಲೇಖಿಸಿದ ಪ್ರಧಾನಮಂತ್ರಿ, ದಶಕಗಳ ಹಿಂದಿನ ಬಿಕ್ಕಟ್ಟನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಂಬಂಧಿಸಿದ ಎಲ್ಲರನ್ನು ಒಟ್ಟುಗೂಡಿಸಿ ಅದನ್ನು ಸಾಧಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಆಲಸ್ಯ ಮಾಡಿದ್ದರಿಂದ ಹಲವು ದಶಕಗಳ ಹಿಂದಿನಿಂದ ನಡೆಯುತ್ತಿರುವ ಹಿಂಸಾಚಾರಗಳಲ್ಲಿ ಕನಿಷ್ಠ 40 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು.

“ಆದರೆ ಈ ಬಾರಿ ನಾವು ಸಂಬಂಧಿಸಿದ ಎಲ್ಲರನ್ನು ಒಗ್ಗೂಡಿಸಿದ್ದೇವೆ ಮತ್ತು ಒಪ್ಪಂದ ಅತ್ಯಂತ ಸ್ಪಷ್ಟವಾಗಿದ್ದು, ಬಿಕ್ಕಟ್ಟಿಗೆ ಸಂಬಂಧಿಸಿದ ಯಾವುದೇ ವಿಷಯ ಬಾಕಿ ಇಲ್ಲ” ಎಂದು ಹೇಳಿದರು.

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Strength of 'janbhagidari' in India: PM Modi on people's support for fuel saving, no-gold-buy appeals

Media Coverage

Strength of 'janbhagidari' in India: PM Modi on people's support for fuel saving, no-gold-buy appeals
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasizing on respecting the diverse cultures of the world
June 29, 2026

The Prime Minister, Shri Narendra Modi, shared a Sanskrit Subhashitam:

“देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥"

The Subhashitam emphasizes that respecting the diverse cultures of the world fosters a sense of trust and cooperation among people, and strengthens mutual understanding and brotherhood.

The Prime Minister wrote on X;

दुनिया की अलग-अलग संस्कृतियों का सम्मान करने से लोगों के बीच विश्वास और सहयोग की भावना बढ़ती है। इससे आपसी समझ और भाईचारा और मजबूत होता है।

देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥