ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾದ ಎಲ್ಲರನ್ನೂ ಅಭಿನಂದಿಸಿದರು. ಭಾರತ ಮಹಾತ್ಮಾ ಗಾಂಧೀಜಿಯವರ 150ನೇ ವರ್ಷಾಚರಣೆ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು. ಈ ಸಂದರ್ಭದಲ್ಲಿ ಪ್ರೀತಿಯ ಬಾಪುಗೆ ಅತ್ಯಂತ ಪ್ರಿಯವಾದ ಭಕ್ತಿ ಗೀತೆ “ವೈಷ್ಣವ ಜನ ತೋ” ಹಾಡನ್ನು ವಿಶ್ವದ ಸುಮಾರು 150 ರಾಷ್ಟ್ರಗಳ ಕಲಾವಿದರು ಹಾಡುತ್ತಿರುವುದು ಸಂತೋಷಕರ ಎಂದರು. ಇದು ಗಾಂಧಿಜಿಯವರ ಆದರ್ಶ ಮತ್ತು ತತ್ವಗಳು ಇಂದಿಗೂ ಪ್ರಸ್ತುತ ಎಂಬುದನ್ನು ಇಡೀ ವಿಶ್ವಕ್ಕೆ ಒಪ್ಪಿಕೊಂಡಿದೆ ಎಂಬುದನ್ನು ಸೂಚಿಸುತ್ತದೆ ಎಂದು ಹೇಳಿದರು. ಪ್ರಧಾನಮಂತ್ರಿಗಳು ಸ್ವಚ್ಛತೆಯ ಬಗ್ಗೆ ಮಹಾತ್ಮಾ ಗಾಂಧೀಜಿಯವರಿಗೆ ಇದ್ದ ಬದ್ಧತೆಯ ಕುರಿತು ಮಾತನಾಡಿದರು.
ಮಹಾತ್ಮಾಗಾಂಧೀಜಿಯವರ ದೂರದರ್ಶಿತ್ವದ ಪ್ರಯತ್ನಗಳಿಂದಾಗಿ ಸ್ವಾತಂತ್ರ್ಯ ಸಂಗ್ರಾಮ ಜನಾಂದೋಲನವಾಗಿ ರೂಪುಗೊಂಡಿತು ಎಂದು ಪ್ರಧಾನಿ ಹೇಳಿದರು. ಮಹಾತ್ಮಾ ಗಾಂಧೀಜಿ ಅವರು ಜನ ಭಾಗಿದಾರಿ(ಜನರ ಸಹಭಾಗಿತ್ವ) ಮತ್ತು ಜನಾಂದೋಲನ( ಸಾಮೂಹಿಕ ಚಳವಳಿ)ಗಳನ್ನು ಹುಟ್ಟು ಹಾಕಿದರು ಎಂದು ಪ್ರಧಾನಿ ಹೇಳಿದರು. ದೇಶದ ಪ್ರತಿಯೊಬ್ಬ ಪ್ರಜೆಯೂ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕೊಡುಗೆ ನೀಡುತ್ತಿದ್ದೇವೆ ಎಂಬ ಸ್ಪೂರ್ತಿಯನ್ನು ಮಹಾತ್ಮಾಗಾಂಧೀಜಿ ತುಂಬಿದ್ದರೆಂದು ಪ್ರದಾನಿ ಹೇಳಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Best Never The Loudest': Bear Grylls Gives Shoutout To ‘Powerful Leader’ PM Modi

Media Coverage

'Best Never The Loudest': Bear Grylls Gives Shoutout To ‘Powerful Leader’ PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಜುಲೈ 2026
July 15, 2026

Rooted in Tradition, Built for Tomorrow: PM Modi’s Blueprint for a Developed India