ವೈರಾಣು ನಿಭಾಯಿಸುವಲ್ಲಿ ನಾಗರಿಕರ ಸಕ್ರಿಯ ಪಾಲ್ಗೊಳ್ಳುವಿಕೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರು ಅವಿರತ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ
ಕೋವಿಡ್ ಸಂಬಂಧಿತ ಶಿಷ್ಟಾಚಾರ, ಮಾರ್ಗಸೂಚಿಗಳ ಅನುಸರಣೆಯ ಮಹತ್ವಕ್ಕೆ ಒತ್ತು ನೀಡಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿಯನ್ನು ವಿಶೇಷವಾಗಿ ಓಮಿಕ್ರಾನ್ ಅಲೆಯ ಪರಿಣಾಮಗಳು ಮತ್ತು ದೇಶದಲ್ಲಿ ಲಸಿಕಾ ಅಭಿಯಾನ ಸ್ಥಿತಿಗತಿ ಪರಿಶೀಲಿಸಿದರು.

ಭಾರತದಲ್ಲಿ ಕೋವಿಡ್-19ರ ಸ್ಥಿತಿಗತಿ ಮತ್ತು ಜಾಗತಿಕ ಸನ್ನಿವೇಶ ಕುರಿತು ಸಭೆಯಲ್ಲಿ ಪ್ರಧಾನಿ ಅವರಿಗೆ ವಿವರವಾದ ಪ್ರಸ್ತುತಿ ನೀಡಲಾಗಿದೆ. ಲಸಿಕೆ ಅಭಿಯಾನದ ಕಡೆಗೆ ಭಾರತದ ನಿರಂತರ ಪ್ರಯತ್ನಗಳು ಮತ್ತು ಇತ್ತೀಚಿನ ಸೋಂಕು ಉಲ್ಬಣ ಸಮಯದಲ್ಲಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಇಳಿಮುಖವಾಗಲು, ಸೋಂಕಿನ ತೀವ್ರತೆ ಕಡಿಮೆಯಾಗಲು ಮತ್ತು ಮರಣ ಪ್ರಮಾಣ ತಗ್ಗಲು ಲಸಿಕೆ ಪರಿಣಾಮಕಾರಿತ್ವದ ವಿಶ್ಲೇಷಣೆಯನ್ನು ಪ್ರಧಾನಿ ಅವರಿಗೆ ವಿವರಿಸಲಾಯಿತು. ಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆದ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗಿದೆ ಎಂಬ ಪರಾಮರ್ಶೆ ಸಭೆಯಲ್ಲಿ ಹೂರಮೂಡಿತು. ವಿಶ್ವ ಆರೋಗ್ಯ ಸಂಘಟನೆ, ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ಯುನೈಟೆಡ್ ನೇಷನ್ಸ್, ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಮತ್ತು ಹಾರ್ವರ್ಡ್ ನಿಯಂತ್ರಣ ಮತ್ತು ಲಸಿಕಾ ಅಭಿಯಾನಗವನ್ನು ಶ್ಲಾಘಿಸಿವೆ ಎಂಬ ಅಂಶವನ್ನು ಸಭೆಯಲ್ಲಿ ಪ್ರಧಾನಿ ಅವರ ಗಮನಕ್ಕೆ ತರಲಾಯಿತು.

ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು. ಕೋವಿಡ್ ಸಂಬಂಧಿತ ಶಿಷ್ಟಾಚಾರಗಳನ್ನು ಅನುಸರಿಸುವ  ಮಹತ್ವ, ಸಮುದಾಯದ ನಿರಂತರ ಬೆಂಬಲ ಮತ್ತು ಕೋವಿಡ್ ಸೂಕ್ತ ನಡವಳಿಕೆಗಳ ಅನುಸರಣೆ ಮತ್ತು ಲಸಿಕೆ ಪಡೆಯಲು ಸಾರ್ವಜನಿಕರ ಸಕ್ರಿಯ ವ್ಯಕ್ತಿಗಳ ಭಾಗವಹಿಸುವಿಕೆಯ ಮಹತ್ವಕ್ಕೆ ಪ್ರಧಾನ ಮಂತ್ರಿ ಅವರು ಒತ್ತು ನೀಡಿದರು.

ಸಭೆಯಲ್ಲಿ ಗೃಹ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರು ಮತ್ತು ನೀತಿಯ ಆಯೋಗದ ಆರೋಗ್ಯ ವಿಭಾಗದ ಸದಸ್ಯರು ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Microsoft to invest $17.5 billion in India; CEO Satya Nadella thanks PM Narendra Modi

Media Coverage

Microsoft to invest $17.5 billion in India; CEO Satya Nadella thanks PM Narendra Modi
NM on the go

Nm on the go

Always be the first to hear from the PM. Get the App Now!
...
Prime Minister Shares Timeless Wisdom from Yoga Shlokas in Sanskrit
December 10, 2025

The Prime Minister, Shri Narendra Modi, today shared a Sanskrit shloka highlighting the transformative power of yoga. The verses describe the progressive path of yoga—from physical health to ultimate liberation—through the practices of āsana, prāṇāyāma, pratyāhāra, dhāraṇā, and samādhi.

In a post on X, Shri Modi wrote:

“आसनेन रुजो हन्ति प्राणायामेन पातकम्।
विकारं मानसं योगी प्रत्याहारेण सर्वदा॥

धारणाभिर्मनोधैर्यं याति चैतन्यमद्भुतम्।
समाधौ मोक्षमाप्नोति त्यक्त्त्वा कर्म शुभाशुभम्॥”