ನಿನ್ನೆ ಶ್ರೀಲಂಕಾದಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಗೋಟಬಯ ರಾಜಪಕ್ಸೆ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಅಭಿನಂದಿಸಿದ್ದಾರೆ.

ಪ್ರಧಾನಿಯವರು ತಮ್ಮ ಹಾಗೂ ಭಾರತದ ಜನರ ಪರವಾಗಿ ಶುಭಾಶಯಗಳನ್ನು ತಿಳಿಸಿದರು. ಶ್ರೀ ರಾಜಪಕ್ಸೆ ಅವರ ಸಮರ್ಥ ನಾಯಕತ್ವದಲ್ಲಿ ಶ್ರೀಲಂಕಾದ ಜನರು ಶಾಂತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮತ್ತಷ್ಟು ಪ್ರಗತಿ ಹೊಂದುತ್ತಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಭ್ರಾತೃತ್ವ, ಸಾಂಸ್ಕೃತಿಕ , ಐತಿಹಾಸಿಕ ಮತ್ತು ನಾಗರಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲಾಗುವುದು. ಈ ಉದ್ದೇಶಗಳಿಗಾಗಿ ಶ್ರೀಲಂಕಾ ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುವ ಭಾರತದ ಬದ್ಧತೆಯನ್ನು ಪ್ರಧಾನಿಯವರು ಪುನರುಚ್ಚರಿಸಿದರು.

ಶ್ರೀ ರಾಜಪಕ್ಸೆಯವರು ಪ್ರಧಾನಿಯವರ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತದೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡಲು ಸಿದ್ಧರಿರುವುದಾಗಿ. ಅವರು ತಿಳಿಸಿದರು.

ರಾಜಪಕ್ಸೆ ಅವರ ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿಯವರು ಆಹ್ವಾನವನ್ನು ನೀಡಿದರು. ಆಹ್ವಾನವನ್ನು ಸ್ವೀಕರಿಸಲಾಯಿತು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vietnam group to invest $8.5 billion in Maharashtra

Media Coverage

Vietnam group to invest $8.5 billion in Maharashtra
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಎಪ್ರಿಲ್ 2026
April 08, 2026

Bold Vision, Tangible Wins: PM Modi’s India Leads in AI, EVs, Nuclear & Inclusive Entrepreneurship