ಶೇರ್
 
Comments
PM-KISAN scheme will give wings to the aspirations of crores of hardworking farmers of India who feed our nation
NDA government is committed to provide the farmers with all the facilities so that by 2020 his income doubles: PM Modi
Congress along with other parties in Opposition alliance recall the farmers only when polls are near: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರಪ್ರದೇಶದ ಗೋರಖ್ ಪುರದಲ್ಲಿಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ – ಕಿಸಾನ್) ಯೋಜನೆಗೆ ಚಾಲನೆ ನೀಡಿದರು.

ಇದರಿಂದಾಗಿ ಆಯ್ದ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮೊದಲ ಕಂತಿನ ಎರಡು ಸಾವಿರ ರೂಪಾಯಿ ಜಮೆಯಾಗಲಿದೆ.

ಪ್ರಧಾನಮಂತ್ರಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಉದ್ಘಾಟಿಸಿದ್ದಕ್ಕಾಗಿ ರೈತರನ್ನು ಅಭಿನಂದಿಸಿದರು. ಅವರು ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ತೊಡಗಿ, ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ಪಡೆದುಕೊಂಡಿರುವ ರೈತ ಸಮುದಾಯದ ಕುಟುಂಬಗಳನ್ನು ಅಭಿನಂದಿಸಿದರು.

ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಈ ದಿನ ಇತಿಹಾಸದ ಪುಟಗಳಲ್ಲಿ ಬರೆದಿಡುವಂತಹ ದಿನವಾಗಿದೆ. ಕಾರಣ ಸ್ವಾತಂತ್ರ್ಯಾ ನಂತರ ರೈತರಿಗಾಗಿ ಇಷ್ಟು ದೊಡ್ಡ ಯೋಜನೆಯೊಂದು ಆರಂಭವಾಗಿರಲಿಲ್ಲ, ಇಂದು ಅಂತಹ ಬೃಹತ್ ಯೋಜನೆ ಆರಂಭವಾಗಿದೆ ಎಂದರು.

ತಮ್ಮ ಸರ್ಕಾರ ರೈತರ ಸಾಮರ್ಥ್ಯವೃದ್ಧಿ ಮತ್ತು ಸಬಲೀಕರಣಕ್ಕೆ ಬದ್ಧವಾಗಿದ್ದು, ಅದಕ್ಕಾಗಿ ಎಲ್ಲ ಪ್ರಯತ್ನಗಳನ್ನು ನಡೆಸಿದೆ ಎಂದು ಪ್ರಧಾನಮಂತ್ರಿ ಹೇಳಿದರು.

2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ತಮ್ಮ ಸರ್ಕಾರ ರೈತರಿಗೆ ಎಲ್ಲ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಯೋಜನೆಯಿಂದ ಸುಮಾರು 12 ಕೋಟಿ ರೈತರಿಗೆ ಅನುಕೂಲವಾಗುವ ಸಾಧ್ಯತೆ ಇದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗಳಿಗೆ 75 ಸಾವಿರ ಕೋಟಿ ರೂಪಾಯಿ ವರ್ಗಾವಣೆಯಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಜ್ಯ ಸರ್ಕಾರಗಳು ರೈತ ಫಲಾನುಭವಿಗಳ ಪಟ್ಟಿಯನ್ನು ಆದಷ್ಟು ಬೇಗ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಆಗ್ರಹಿಸಿದ ಅವರು, ಪಟ್ಟಿ ಬಂದರೆ ಕೂಡಲೇ ರೈತರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತದೆ, ಯೋಜನೆಯ ಪ್ರಯೋಜನ ರೈತರಿಗೆ ಸಕಾಲದಲ್ಲಿ ಸಿಗಲಿದೆ ಎಂದರು.

ಹಿಂದಿನ ಸರ್ಕಾರಗಳು ಆಗಿಂದ್ದಾಗ್ಗೆ ಮಾಡಿದ ಸಾಲ ಮನ್ನಾ ಘೋಷಣೆಗಳಿಂದ ರೈತರಿಗೆ ದೀರ್ಘಾವಧಿಯ ಅಥವಾ ಸಮಗ್ರ ಪರಿಹಾರ ದೊರಕಿಲ್ಲ ಎಂದ ಪ್ರಧಾನಮಂತ್ರಿಗಳು, ಪಿಎಂ ಕಿಸಾನ್ ಯೋಜನೆಯಿಂದ ರೈತರಿಗೆ ಪರಿಹಾರ ಸಿಗುವುದಷ್ಟೇ ಅಲ್ಲ, ಗ್ರಾಮೀಣ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದಂತಾಗುತ್ತದೆ ಎಂದೂ ಸಹ ಅವರು ಹೇಳಿದರು.

ಪ್ರಧಾನಮಂತ್ರಿ ಕಿಸಾನ್ ಯೋಜನೆ ನೇರ ನಗದು ವ್ಯವಸ್ಥೆಯನ್ನು ಅವಲಂಬಿಸಿದೆ ಮತ್ತು ಇದರಿಂದ ಪೂರ್ಣ ಹಣ ನೇರವಾಗಿ ಫಲಾನುಭವಿ ರೈತರಿಗೆ ತಲುಪಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಇದಲ್ಲದೆ, ತಮ್ಮ ಸರ್ಕಾರ ಬಹು ಕಾಲದಿಂದ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒಂದು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದ ಅವರು, ಇದರಿಂದ ದೇಶದ ಹಲವು ಭಾಗಗಳಲ್ಲಿ ರೈತರಿಗೆ ಹಚ್ಚಿನ ನೆರವು ಲಭ್ಯವಾಗಲಿದೆ ಎಂದರು. 17 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ ಗಳನ್ನು ವಿತರಣೆ, ಬೇವುಲೇಪಿತ ಯೂರಿಯಾ, 22 ಬೆಳೆಗಳಿಗೆ ಉತ್ಪಾದನಾ ವೆಚ್ಚದ ಶೇಕಡಾ 50ಕ್ಕೂ ಅಧಿಕ ಕನಿಷ್ಠ ಬೆಂಬಲ ಬೆಲೆ ನಿಗದಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಇ-ನ್ಯಾಮ್ ಯೋಜನೆಗಳನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು.

ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಗಳ ಮೂಲಕ 1.60 ಲಕ್ಷ ರೂಪಾಯಿಗಳ ವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಲ್ಲದೆ, ರೈತರ ಅನುಕೂಲಕ್ಕಾಗಿ ಕೈಗೊಂಡಿರುವ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಅವರು ಪ್ರಸ್ತಾಪಿಸಿದರು.

ಉತ್ತರಪ್ರದೇಶದ ಈಶಾನ್ಯಭಾಗದ ಇಡೀ ಪ್ರದೇಶದಲ್ಲಿ ಕ್ಷಿಪ್ರ ಪರಿವರ್ತನೆಯಾಗುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಉದ್ಯಮ, ಸಂಪರ್ಕ ಮತ್ತು ಆರೋಗ್ಯ ವಲಯಗಳಲ್ಲಿ ಎಲ್ಲ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದರು.

ಗೋರಖ್ ಪುರ ಮತ್ತು ಉತ್ತರಪ್ರದೇಶದ ಪೂರ್ವ ಭಾಗದ ಸುಮಾರು 10 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳನ್ನು ಇಂದು ಉದ್ಘಾಟಿಸಲಾಗಿದೆ ಅಥವಾ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಈ ಎಲ್ಲಾ ಯೋಜನೆಗಳಿಂದ ಜನರ ಜೀವನಮಟ್ಟ ಇನ್ನಷ್ಟು ಸುಧಾರಿಸಲಿದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ ಮತ್ತು ಆಯುಷ್ಮಾನ್ ಭಾರತ್ ಮತ್ತಿತರ ಯೋಜನೆಗಳು ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಸ್ಫೂರ್ತಿಯ ಸಂಕೇತಗಳಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು.

 

 

 

 

 

 

 

 

 

 

 

 

 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
A confident India is taking on the world

Media Coverage

A confident India is taking on the world
...

Nm on the go

Always be the first to hear from the PM. Get the App Now!
...
PM expresses happiness over inauguration of various developmental works in Baramulla District of J&K
June 01, 2023
ಶೇರ್
 
Comments

The Prime Minister, Shri Narendra Modi has expressed happiness over inauguration of several key infrastructure projects including 7 Custom Hiring Centres for farmers, 9 Poly Green Houses for SHGs in Baramulla District of J&K.

Sharing tweet threads of Office of Lieutenant Governor of J&K, the Prime Minister tweeted;

“The remarkable range of developmental works inaugurated stand as a testament to our commitment towards enhancing the quality of life for the people of Jammu and Kashmir, especially the aspirational districts.”