ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಂಧ್ರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಭಾರತ ಸರ್ಕಾರ ಮತ್ತು ಜಾರ್ಖಂಡ್ ಸರ್ಕಾರ ಕೈಗೆತ್ತಿಕೊಂಡಿರುವ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಆ ಯೋಜನೆಗಳೆಂದರೆ 

 

•ಸಿಂಧ್ರಿ ರಸಗೊಬ್ಬರ ಕಾರ್ಖಾನೆ ಯೋಜನೆಯಡಿ ಹಿಂದೂಸ್ತಾನ್ ಊರ್ವರಾಕ್ ಮತ್ತು ರಸಾಯನ್ ಲಿಮಿಟೆಡ್ ಪುನರುಜ್ಜೀವನ.

•ಗೇಲ್ ನಿಂದ ಕೈಗೊಂಡಿರುವ ರಾಂಚಿ ನಗರ ಅನಿಲ ವಿತರಣಾ ಯೋಜನೆ.

•ದಿಯೋಗರ್ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ(ಏಮ್ಸ್) ಕೇಂದ್ರ ಸ್ಥಾಪನೆ. 

•ದಿಯೋಗರ್ ವಿಮಾನ ನಿಲ್ದಾಣ ಅಭಿವೃದ್ಧಿ.

•ಪತ್ರಾತು ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ. 

 

ಪ್ರಧಾನಮಂತ್ರಿ ಅವರು ಜನೌಷಧಿ ಕೇಂದ್ರಗಳ ಸ್ಥಾಪನೆ ಕುರಿತ ಒಪ್ಪಂದ ಪತ್ರ ವಿನಿಮಯಕ್ಕೂ ಸಾಕ್ಷಿಯಾದರು. 

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮೊದಲು ಭಗವಾನ್ ಬಿರ್ಸಾ ಮುಂಡಾ ಅವರಿಗೆ ನಮನ ಸಲ್ಲಿಸಿದರು. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಎರಡೂ ಒಗ್ಗೂಡಿ ಜಾರ್ಖಂಡ್ ನಲ್ಲಿ ಕ್ಷಿಪ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. 

ಇಂದು ಶಂಕುಸ್ಥಾಪನೆ ನೆರವೇರಿಸಲಾದ ಅಭಿವೃದ್ಧಿ ಕಾರ್ಯಗಳ ಒಟ್ಟಾರೆ ವೆಚ್ಚ 27 ಸಾವಿರ ಕೋಟಿ ರೂ. ಗಳಾಗಿದೆ ಎಂದ ಪ್ರಧಾನಿ ಅವರು, ಈ ಎಲ್ಲ ಅಭಿವೃದ್ಧಿ ಯೋಜನೆಗಳಿಂದ ಜಾರ್ಖಂಡ್ ನ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಎಂದರು. 

 

ತಾವು ಅಧಿಕಾರ ವಹಿಸಿಕೊಂಡಾಗ ದೇಶದ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕವಿರಲಿಲ್ಲ, ನಾವು ಇದೀಗ ಆ ಗ್ರಾಮಗಳಿಗೆ ವಿದ್ಯುತ್ ಕೊಂಡೊಯ್ದು, ಅಲ್ಲಿನ ಜನರ ಬದುಕಿನಲ್ಲಿ ಬೆಳಕು ಮೂಡಿಸಿದ್ದೇವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಭಾರತದ ಪ್ರತಿಯೊಂದು ಮನೆಗೂ ವಿದ್ಯುತ್ ಸಿಗುವಂತೆ ಖಾತ್ರಿಪಡಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಪ್ರಧಾನಿ ಹೇಳಿದರು. 

ರಸಗೊಬ್ಬರ ಕಾರ್ಖಾನೆಗಳು ಬಹುತೇಕ ಗೊಬ್ಬರ ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದವು, ಅಂತಹ ಕಾರ್ಖಾನೆಗಳ ಪುನರುಜ್ಜೀವನ ಕಾರ್ಯ ಕೈಗೊಳ್ಳಲಾಗಿದೆ, ಇದರಿಂದ ಈಶಾನ್ಯ ಭಾರತಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. 

ಜಾರ್ಖಂಡ್ ನಲ್ಲಿ ಏಮ್ಸ್ ಸ್ಥಾಪನೆಯಿಂದ ರಾಜ್ಯದಲ್ಲಿ ಆರೋಗ್ಯ ರಕ್ಷಣಾ ವಲಯ ಸುಧಾರಿಸಲಿದೆ ಮತ್ತು ರಾಜ್ಯವೂ ಬದಲಾಗಲಿದೆ. ಬಡಜನರಿಗೆ ಶ್ರೇಷ್ಠ ಗುಣಮಟ್ಟದ ಆರೋಗ್ಯ ರಕ್ಷಣಾ ಸೇವೆಗಳು ಲಭ್ಯವಾಗಲಿವೆ ಎಂದು ಪ್ರಧಾನಿ ಹೇಳಿದರು. 

ವಿಮಾನಯಾನ ಅತ್ಯಂತ ಸುಲಭ ಹಾಗೂ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಪ್ರಧಾನಿ ಹೇಳಿದರು. 

 

 

 

 

 

 

 

 

 

 

 

 

Click here to read full text speech

ದೇಣಿಗೆ
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Landmark day for India: PM Modi on passage of Citizenship Amendment Bill

Media Coverage

Landmark day for India: PM Modi on passage of Citizenship Amendment Bill
...

Nm on the go

Always be the first to hear from the PM. Get the App Now!
...
Here are the Top News Stories for 12th December 2019
December 12, 2019
ಶೇರ್
 
Comments

Top News Stories is your daily dose of positive news. Take a look and share news about all latest developments about the government, the Prime Minister and find out how it impacts you!