PM Modi lays the foundation stone of Pune metro.
India is urbanising at a very quick pace & thus, its essential to work in 2 directions. 1st is to improve quality of life in villages: PM
Growth of our cities must be adequately planned: PM
The Government of India is actively working on the Rurban Mission: PM
We need to invigorate our villages with good facilities while preserving their character & spirit: PM
After 8th November, urban local bodies' income has increased which can be allocated towards development: PM
In this nation everybody is equal before the law and everyone has to follow the law: PM
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುಣೆ ಮೆಟ್ರೋ ಯೋಜನೆ (1ನೇ ಹಂತಕ್ಕೆ) ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಗರದಲ್ಲಿ ಬೃಹತ್ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತವು ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿದೆ ಮತ್ತು ಹೀಗಾಗಿ, ಎರಡು ದಿಕ್ಕಿನಲ್ಲಿ ಕೆಲಸ ಮಾಡುವುದು ಅವಶ್ಯವಾಗಿದೆ: ಹಳ್ಳಿಗಳಲ್ಲಿ ಜೀವನಮಟ್ಟ ಸುಧಾರಿಸುವುದು; ಮತ್ತು ದೀರ್ಘಾವಧಿಗೆ ಚಿಂತಿಸುವುದು, ಹೀಗಾದಾಗ ನಾವು ನಗರ ಪ್ರದೇಶಗಳು ಎದುರಿಸುತ್ತಿರುವ ಸವಾಲುಗಳನ್ನು ತಗ್ಗಿಸಬಹುದಾಗಿದೆ.
ನಾವು ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕು ಎಂದು ಪ್ರತಿಪಾದಿಸಿದ ಪ್ರಧಾನಮಂತ್ರಿಯವರು, ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡಲು ಸಾಧ್ಯವಿಲ್ಲ ಎಂದರು. ನಾವು ನಮ್ಮ ನಗರಗಳ ಪ್ರಗತಿಯ ಬಗ್ಗೆ ಸೂಕ್ತವಾಗಿ ಯೋಜನೆ ರೂಪಿಸಬೇಕು ಎಂದರು.
ತ್ವರಿತವಾಗಿ ನಗರೀಕರಣಗೊಳ್ಳುತ್ತಿರುವ ಪ್ರದೇಶಗಳ ಅಗತ್ಯ ಪೂರೈಸುವ ರುರ್ಬನ್ ಅಭಿಯಾನದ ಮೇಲೆ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.
ಪ್ರಸಕ್ತ ಸಂದರ್ಭದ ಲಾಭವೂ ಮುಖ್ಯವಾದ್ದೆ ಆದರೆ, ಭವಿಷ್ಯದ ಆಶಯ ಹಾಗೂ ಅಗತ್ಯಗಳಗನ್ನು ಪೂರೈಸುವಂತಹ ವ್ಯವಸ್ಥೆಯ ಅಗತ್ಯವೂ ಇದೆ ಎಂದು ಪ್ರಧಾನಮಂತ್ರಿ ಹೇಳಿದರು. ಯಾವುದೇ ಯೋಜನೆಯನ್ನು ಕೈಗೆತ್ತಿಕೊಂಡರೂ ಅದನ್ನು ಕಾಲಮಿತಿಯ ಚೌಕಟ್ಟಿನೊಳಗೆ ಪೂರ್ಣಗೊಳಿಸುವ ಇರಾದೆ ಸರ್ಕಾರದ್ದಾಗಿದೆ ಎಂದು ಹೇಳಿದರು.
ಸರ್ಕಾರವು ಗ್ಯಾಸ್ ಗ್ರಿಡ್, ವಾಟರ್ ಗ್ರಿಡ್, ಡಿಜಿಟಲ್ ನೆಟ್ವರ್ಕ್, ಬಾಹ್ಯಾಕಾಶ ತಂತ್ರಜ್ಞಾನದ ಬಳಕೆ ಮತ್ತು ರೈತರ ಅನುಕೂಲಕ್ಕಾಗಿ ತಂತ್ರಜ್ಞಾನ ಉಪಯೋಗಿಸುವ ಬಗ್ಗೆ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ನಮ್ಮ ದೇಶದಲ್ಲಿ ಕಾನೂನಿನ ಮುಂದೆ ಪ್ರತಿಯೊಬ್ಬರೂ ಸಮಾನರೇ ಮತ್ತು ಪ್ರತಿಯೊಬ್ಬರೂ ಕಾನೂನನ್ನು ಪಾಲಿಸಬೇಕು ಎಂದು ಪ್ರತಿಪಾದಿಸಿದರು. ಈ ಮೊದಲೇ ಕಪ್ಪುಹಣ ಮತ್ತು ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕಿದಿದ್ದರೆ, ತಾವು ಇಂತಹ ನಿರ್ಧಾರ ಕೈಗೊಳ್ಳುವ ಅಗತ್ಯ ಬರುತ್ತಿರಲಿಲ್ಲ ಎಂದರು.
ಪುಣೆ ಕಲಿಕೆಯ ನಗರಿಯಾಗಿ, ಆನ್ ಲೈನ್ ಬ್ಯಾಂಕಿಂಗ್  ಮತ್ತು ಸೌಲಭ್ಯಗಳನ್ನು ಶೋಧಿಸುವಲ್ಲಿ ಮುಂದಾಳತ್ವ ವಹಿಸಬೇಕು ಎಂದರು.
ಈ ದೇಶದಲ್ಲಿ 125 ಕೋಟಿ ಭಾರತೀಯರ ಧ್ವನಿಯನ್ನೂ ಆಲಿಸಲಾಗುತ್ತದೆ; ಈ ಧ್ವನಿಯನ್ನು ಆಯ್ದ ಕೆಲವರು ಮಾತ್ರ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ತಿಳಿಸಿದರು.
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
GST completes nine years with stronger revenues and compliance

Media Coverage

GST completes nine years with stronger revenues and compliance
NM on the go

Nm on the go

Always be the first to hear from the PM. Get the App Now!
...
Prime Minister congratulates Sachin Siwach on winning Gold in Men’s 60 kg Boxing
August 02, 2026

The Prime Minister, Shri Narendra Modi, has congratulated Sachin Siwach on winning the Gold medal in the Men’s 60 kg Boxing event at the Commonwealth Games 2026 in Glasgow.

The Prime Minister said that Sachin Siwach’s achievement will inspire several young boxers.

Shri Modi extended his best wishes to him for his future endeavours and expressed hope that he would continue to make India proud.

The Prime Minister wrote on X;

“Sachin Siwach strikes Gold at Glasgow!

Congrats to him for the success in the Men's 60 kg Boxing event. He will motivate several young boxers. All the best for his endeavours ahead. May he always make India proud.

#CWG2026”