1896 ರಲ್ಲಿ ಸ್ವಾಮಿ ವಿವೇಕಾನಂದ ಅವರು ಪ್ರಾರಂಭಿಸಿದ ರಾಮಕೃಷ್ಣ ಮಿಷನ್ ನ ಮಾಸ ಪತ್ರಿಕೆ 'ಪ್ರಬುದ್ಧ ಭಾರತ' ದ 125 ನೇ ವಾರ್ಷಿಕೋತ್ಸವವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಲಿದ್ದಾರೆ. 2021 ರ ಜನವರಿ 31 ರಂದು ಮಧ್ಯಾಹ್ನ 3.15 ಕ್ಕೆ ಪ್ರಧಾನಿಯವರ ಬಾಷಣ ಇರುತ್ತದೆ. ಈ ಕಾರ್ಯಕ್ರಮವನ್ನು ಮಾಯಾವತಿಯ ಅದ್ವೈತ ಆಶ್ರಮ ಆಯೋಜಿಸಿದೆ.

'ಪ್ರಬುದ್ಧ ಭಾರತ’ ಕುರಿತು

ಭಾರತದ ಪ್ರಾಚೀನ ಆಧ್ಯಾತ್ಮದ ಸಂದೇಶವನ್ನು ಪ್ರಚಾರ ಮಾಡಲು ‘ಪ್ರಬುದ್ಧ ಭಾರತ’ ಪತ್ರಿಕೆ ಒಂದು ಪ್ರಮುಖ ಮಾಧ್ಯಮವಾಗಿದೆ. ಇದರ ಪ್ರಕಟಣೆಯನ್ನು ಚೆನ್ನೈನಿಂದ (ಹಿಂದಿನ ಮದ್ರಾಸ್) ಪ್ರಾರಂಭಿಸಲಾಯಿತು. ಅಲ್ಲಿ ಎರಡು ವರ್ಷಗಳವರೆಗೆ ಪತ್ರಿಕೆ ಪ್ರಕಟವಾಯಿತು. ನಂತರ ಅದನ್ನು ಅಲ್ಮೋರಾದಿಂದ ಪ್ರಕಟಿಸಲಾಯಿತು. ನಂತರ, ಏಪ್ರಿಲ್ 1899 ರಲ್ಲಿ, ಪತ್ರಿಕೆಯ ಪ್ರಕಟಣಾ ಸ್ಥಳವನ್ನು ಅದ್ವೈತ ಆಶ್ರಮಕ್ಕೆ ಸ್ಥಳಾಂತರಿಸಲಾಯಿತು. ಅಂದಿನಿಂದ ಅಲ್ಲಿಂದಲೇ ಪತ್ರಿಕೆಯನ್ನು ನಿರಂತರವಾಗಿ ಪ್ರಕಟಿಸಲಾಗುತ್ತಿದೆ.

ಹಲವಾರು ಶ್ರೇಷ್ಠ ವ್ಯಕ್ತಿಗಳು ಭಾರತೀಯ ಸಂಸ್ಕೃತಿ, ಆಧ್ಯಾತ್ಮ, ತತ್ವಶಾಸ್ತ್ರ, ಇತಿಹಾಸ, ಮನೋವಿಜ್ಞಾನ, ಕಲೆ ಮತ್ತು ಇತರ ಸಾಮಾಜಿಕ ವಿಷಯಗಳ ಕುರಿತು ‘ಪ್ರಬುದ್ಧ ಭಾರತ’ ದಲ್ಲಿ ಬರೆದಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕ್, ಸೋದರಿ ನಿವೇದಿತಾ, ಶ್ರೀ ಅರಬಿಂದೋ, ಮಾಜಿ ರಾಷ್ಟ್ರಪತಿ ಸರ್ವೆಪಲ್ಲಿ ರಾಧಾಕೃಷ್ಣನ್ ಮುಂತಾದವರು ಪತ್ರಿಕೆಗೆ ಬರೆದಿದ್ದಾರೆ.

ಅದ್ವೈತ ಆಶ್ರಮವು ತನ್ನ ವೆಬ್‌ಸೈಟ್‌ನಲ್ಲಿ ಸಂಪೂರ್ಣ ‘ಪ್ರಬುದ್ಧ ಭಾರತ’ ದ ಹಳೆಯ ಸಂಚಿಕೆಗಳು ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Operation Sagar Bandhu: India provides assistance to restore road connectivity in cyclone-hit Sri Lanka

Media Coverage

Operation Sagar Bandhu: India provides assistance to restore road connectivity in cyclone-hit Sri Lanka
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಡಿಸೆಂಬರ್ 2025
December 05, 2025

Unbreakable Bonds, Unstoppable Growth: PM Modi's Diplomacy Delivers Jobs, Rails, and Russian Billions