ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ಸಂಶೋಧನಾ ಸಾಮರ್ಥ್ಯಗಳಿಗೆ ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2020 ರ ಜನವರಿ 2 ರಂದು ಐದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯುವ ವಿಜ್ಞಾನಿಗಳ ಪ್ರಯೋಗಾಲಯಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಈ ಕಾರ್ಯಕ್ರಮವನ್ನು ಬೆಂಗಳೂರಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ವೈಮಾನಿಕ ಅಭಿವೃದ್ಧಿ ವ್ಯವಸ್ಥೆ (ADE) ಯಲ್ಲಿ ಆಯೋಜಿಸಲಾಗಿದೆ. ಫಲಕವನ್ನು ಅನಾವರಣಗೊಳಿಸುವ ಮೂಲಕ ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡುವರು ಮತ್ತು ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಈ ಸಂದರ್ಭದಲ್ಲಿ ಡಿಆರ್‌ಡಿಒ ತನ್ನ ಕೆಲವು ನವೀನ ಉತ್ಪನ್ನಗಳನ್ನು ಪ್ರಧಾನಮಂತ್ರಿಯವರಿಗೆ ಪ್ರದರ್ಶಿಸಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಡಿಆರ್‌ಡಿಒ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

2014 ರಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಪ್ರಶಸ್ತಿಗಳನ್ನು ಪ್ರದಾನ ಮಾಡಿದ ನಂತರ, ಹಿರಿಯ ರಕ್ಷಣಾ ವಿಜ್ಞಾನಿಗಳು ಮತ್ತು ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನ ಮಂತ್ರಿಯವರು, 35 ವರ್ಷ ವಯಸ್ಸಿನವರೆಗಿನ ಯುವ ವಿಜ್ಞಾನಿಗಳು ಅನ್ವೇಷಣೆಯಲ್ಲಿ ತೊಡಗಿಸಿಕೊಳ್ಳಲು ಕನಿಷ್ಠ ಐದು ಡಿಆರ್‌ಡಿಒ ಲ್ಯಾಬ್‌ಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಆ ಸಂದರ್ಭದಲ್ಲಿ, ರಕ್ಷಣಾ ಕ್ಷೇತ್ರದ ಜಾಗತಿಕ ತಾಂತ್ರಿಕ ಪ್ರಗತಿಯಲ್ಲಿ ಭಾರತವು ಸರಿಸಮನಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು, ರಕ್ಷಣಾ ಸಂಶೋಧನಾ ಸಂಬಂಧಿತ ಚಟುವಟಿಕೆಗಳಲ್ಲಿ ಯುವಕರನ್ನು ದೊಡ್ಡ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರಧಾನಿ ಕರೆ ನೀಡಿದ್ದರು.

 
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Tariff cut to open door wider for exports, lift rupee, fund inflows: Nirmala Sitharaman

Media Coverage

Tariff cut to open door wider for exports, lift rupee, fund inflows: Nirmala Sitharaman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಫೆಬ್ರವರಿ 2026
February 04, 2026

Under PM Modi's Leadership: Digital Revolution, Trade Victories, and Economic Powerhouse Moments Redefining India