ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವ (ಐಐಎಸ್ಎಫ್) 2020ರಲ್ಲಿ 2020ರ ಡಿಸೆಂಬರ್ 22ರಂದು ಸಂಜೆ 4.30ಕ್ಕೆ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವ ಡಾ. ಹರ್ಷವರ್ಧನ್ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

ಐಐಎಸ್ಎಫ್ ಬಗ್ಗೆ

ಸಮಾಜದಲ್ಲಿ ಸಾಮಾಜಿಕ ಸ್ಫೂರ್ತಿ ಉತ್ತೇಜಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಭೂ ವಿಜ್ಞಾನಗಳ ಸಚಿವಾಲಯಗಳು ವಿಜ್ಞಾನ ಭಾರತಿಯ ಸಹಯೋಗದೊಂದಿಗೆ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವವನ್ನು ರೂಪಿಸಿವೆ. ವಿಜ್ಞಾನ ಮತ್ತು ತಂತ್ರಜ್ಞಾನದ ಉತ್ತೇಜನಕ್ಕಾಗಿ 2015ರಲ್ಲಿ ಐಐಎಸ್ಎಫ್ ಆರಂಭಿಸಲಾಯಿತು. ಸಾರ್ವಜನಿಕರನ್ನು ವಿಜ್ಞಾನದೊಂದಿಗೆ ತೊಡಗಿಸಿಕೊಳ್ಳುವುದು, ವಿಜ್ಞಾನದ ಆನಂದವನ್ನು ಆಚರಿಸುವುದು ಮತ್ತು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (ಎಸ್‌.ಟಿ.ಇ.ಎಂ) ಜೀವನವನ್ನು ಸುಧಾರಿಸಲು ಹೇಗೆ ಪರಿಹಾರಗಳನ್ನು ಒದಗಿಸುತ್ತದೆ ಎಂಬುದನ್ನು ತೋರಿಸುವುದು ಇದರ ಉದ್ದೇಶವಾಗಿದೆ. ಐ.ಐ.ಎಸ್.ಎಫ್. 2020ರ ಗುರಿ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ, ಸಮಸ್ಯೆಗಳಿಗೆ ಪರಿಹಾರ ಮತ್ತು ತಂಡದ ಕೆಲಸಗಳನ್ನು ಕೇಂದ್ರೀಕರಿಸಿ, ಯುವಜನರಿಗೆ 21ನೇ ಶತಮಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ನೆರವಾಗುವುದಾಗಿದೆ. ವೈಜ್ಞಾನಿಕ ಕ್ಷೇತ್ರಗಳಲ್ಲಿ ಅಧ್ಯಯನ ಮಾಡಲು ಮತ್ತು ಕೆಲಸ ಮಾಡಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಇದರ ದೀರ್ಘಕಾಲೀನ ಉದ್ದೇಶವಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, India sees highest Q1 smartphone exports by value

Media Coverage

Led by iPhones, India sees highest Q1 smartphone exports by value
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2026
July 29, 2026

Aatmanirbhar & Eco-Conscious: PM Modi’s Record of Results in Conservation, Banking, Exports & Beyond