ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2018ರ ಜೂನ್ 29ರಂದು ನವದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಸುಮಾರು 150 ರೈತರನ್ನೊಳಗೊಂಡ ಕಬ್ಬು ಬೆಳೆಗಾರರ
ನಿಯೋಗವನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಲಿದ್ದಾರೆ. ನಿಯೋಗದಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಹಾರಾಷ್ಟ್ರ ಮತ್ತು ಕರ್ನಾಟಕದ ರೈತರಿದ್ದಾರೆ.
ಸಭೆಯಲ್ಲಿ ಸಕ್ಕರೆ ಉತ್ಪಾದನಾ ವಲಯದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.


