ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಟಲ್ ನಗರ ಪುನರುಜ್ಜೀವ ಮತ್ತು ಪರಿವರ್ತನೆ ಯೋಜನೆ 2.0ʼಗೆ (ಅಮೃತ್‌ 2.0) 2021ರ ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಚಾಲನೆ ನೀಡಲಿದ್ದಾರೆ.

ಪ್ರಧಾನಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ, ನಮ್ಮ ಎಲ್ಲಾ ನಗರಗಳನ್ನು 'ಕಸ ಮುಕ್ತ'ಗೊಳಿಸುವ  ಮತ್ತು 'ಜಲ ಸುರಕ್ಷಿತ' ಮಾಡುವ ಆಕಾಂಕ್ಷೆಯನ್ನು ಸಾಕಾರಗೊಳಿಸಲು ʻಸ್ವಚ್ಛ ಭಾರತ್‌ ಯೋಜನೆ-ನಗರ 2.0ʼ ಮತ್ತು ʻಅಮೃತ್ 2.0ʼ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಪ್ರಮುಖ ಯೋಜನೆಗಳು ತ್ವರಿತ ನಗರೀಕರಣಕ್ಕೆ ಸಾಕ್ಷಿಯಾಗುತ್ತಿರುವ ಭಾರತದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಜೊತೆಗೆ ʻಸುಸ್ಥಿರ ಅಭಿವೃದ್ಧಿ ಗುರಿಗಳು 2030ʼ ಸಾಧನೆಗೆ ಸಹಾಯ ಮಾಡುತ್ತವೆ.

ಕೇಂದ್ರ ಸಚಿವರು, ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವರು,  ರಾಜ್ಯಗಳು  ಮತ್ತು ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ʻಸ್ವಚ್ಛ ಭಾರತ ಯೋಜನೆ-ನಗರ 2.0ʼ (ಎಸ್‌ಬಿಎಂ-ಯು 2.0)  ಕುರಿತು

ಈ ಯೋಜನೆಯು ಎಲ್ಲಾ ನಗರಗಳನ್ನು 'ಕಸ ಮುಕ್ತ'ಗೊಳಿಸುವ ಮತ್ತು ʻಅಮೃತ್ʼ ವ್ಯಾಪ್ತಿಗೆ ಒಳಪಟ್ಟ ನಗರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ನಗರಗಳಲ್ಲಿ ತ್ಯಾಜ್ಯ ನೀರಿನ ನಿರ್ವಹಣೆಯ ಉದ್ದೇಶವನ್ನು ಹೊಂದಿದೆ. ಜೊತೆಗೆ ಎಲ್ಲಾ  ನಗರ ಸ್ಥಳೀಯ ಸಂಸ್ಥೆಗಳು ಬಯಲು ಶೌಚ ಮುಕ್ತವಾಗುವಂತೆ (ಒಡಿಎಫ್‌+) ಮತ್ತು 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವವ ಸ್ಥಳೀಯ ಸಂಸ್ಥೆಗಳು ಒಡಿಎಫ್++ ಆಗಿರುವಂತೆ ಖಾತರಿಪಡಿಸುತ್ತದೆ. ಆ ಮೂಲಕ ನಗರ ಪ್ರದೇಶಗಳಲ್ಲಿ ಸುರಕ್ಷಿತ ನೈರ್ಮಲ್ಯದ ಗುರಿಯನ್ನು ಸಾಧಿಸುತ್ತದೆ. ಮೂಲದಲ್ಲೇ ಘನ ತ್ಯಾಜ್ಯದ ವಿಂಗಡಣೆ, ʻ3ಆರ್ʼ (ಕಡಿಮೆಮಾಡುವುದು, ಮರುಬಳಕೆ, ಸಂಸ್ಕರಣೆ), ಪುರಸಭೆಯ ಎಲ್ಲಾ ರೀತಿಯ ಘನ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆ ಮತ್ತು ಪರಿಣಾಮಕಾರಿ ಘನ ತ್ಯಾಜ್ಯ ನಿರ್ವಹಣೆಗಾಗಿ ಕಸ ಸುರಿಯುವ ಸ್ಥಳಗಳಲ್ಲಿ ಮಾಲಿನ್ಯಕಾರಕಗಳ ನಿವಾರಣೆಯತ್ತ ಈ ಯೋಜನೆಯು ಗಮನ ಹರಿಸಲಿದೆ. ಈ ಯೋಜನೆಯ ವೆಚ್ಚ ಸುಮಾರು  1.41 ಲಕ್ಷ ಕೋಟಿ ರೂಪಾಯಿಗಳು. 

ʻಅಮೃತ್ ಬಗ್ಗೆ 2.0ʼ ಕುರಿತು
ʻಅಮೃತ್ 2.0ʼ ಯೋಜನೆಯು ಸುಮಾರು 4,700 ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸುವ ಉದ್ದೇಶ ಹೊಂದಿದೆ. ಸುಮಾರು 2.68 ಕೋಟಿ ನೀರಿನ ಕೊಳಾಯಿ ಸಂಪರ್ಕಗಳನ್ನು ಒದಗಿಸುವ ಮೂಲಕ ಇದನ್ನು ಸಾಧಿಸಲು ಉದ್ದೇಶಿಸಲಾಗಿದೆ. ಜೊತೆಗೆ 500 ಅಮೃತ್ ನಗರಗಳಲ್ಲಿ 2.64 ಕೋಟಿ ಒಳಚರಂಡಿ/ ಶೌಚಾಲಯ ತ್ಯಾಜ್ಯ (ಸೆಪ್ಟೇಜ್) ಸಂಪರ್ಕಗಳನ್ನು ಒದಗಿಸುವ ಮೂಲಕ 100% ಒಳಚರಂಡಿ ಮತ್ತು ಶೌಚಾಲಯ ತ್ಯಾಜ್ಯ ವಿಲೇವಾರಿ (ಸೆಪ್ಟೇಜ್) ವ್ಯವಸ್ಥೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದರಿಂದ ನಗರ ಪ್ರದೇಶಗಳಲ್ಲಿ10.5 ಕೋಟಿಗೂ ಹೆಚ್ಚು ಜನರು ಪ್ರಯೋಜನ ಪಡೆಯಲಿದ್ದಾರೆ. ʻಅಮೃತ್ 2.0ʼ ಯೋಜನೆಯು ಆವರ್ತನ ಆರ್ಥಿಕತೆಯ ತತ್ವಗಳನ್ನು ಅಳವಡಿಸಿಕೊಳ್ಳುತ್ತದೆ ಮತ್ತು ಮೇಲ್ಮೈ ಮತ್ತು ಅಂತರ್ಜಲ ಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನವನ್ನು ಉತ್ತೇಜಿಸುತ್ತದೆ. ಇತ್ತೀಚಿನ ಜಾಗತಿಕ ತಂತ್ರಜ್ಞಾನಗಳು ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ನೀರಿನ ನರ್ವಹಣೆಯಲ್ಲಿ ದತ್ತಾಂಶ ಆಧರಿತ ಆಡಳಿತ ಹಾಗೂ ʻತಂತ್ರಜ್ಞಾನ ಉಪ-ಯೋಜನೆʼಯನ್ನು ʻಅಮೃತ್‌ 2.0’ ಉತ್ತೇಜಿಸುತ್ತದೆ. ನಗರಗಳ ನಡುವೆ ಪ್ರಗತಿಪರ ಸ್ಪರ್ಧೆಯನ್ನು ಉತ್ತೇಜಿಸಲು 'ಪೇ ಜಲ್ ಸುರ್ವೇಕ್ಷಣ್' ಅನ್ನು ನಡೆಸಲಾಗುತ್ತದೆ. ಈ ಯೋಜನೆಯ ಒಟ್ಟು ವೆಚ್ಚ ಸುಮಾರು 2.87 ಲಕ್ಷ ಕೋಟಿ ರೂಪಾಯಿಗಳು.

ʻಎಸ್‌ಬಿಎಂ-ಯುʼ ಮತ್ತು ʻಅಮೃತ್ʼ ಪ್ರಭಾವ
ಕಳೆದ ಏಳು ವರ್ಷಗಳಲ್ಲಿ ನಗರ ಭೂದೃಶ್ಯವನ್ನು ಸುಧಾರಿಸಲು ʻಎಸ್‌ಬಿಎಂ-ಯುʼ ಮತ್ತು ʻಅಮೃತ್ʼ ಗಮನಾರ್ಹ ಕೊಡುಗೆ ನೀಡಿವೆ. ಈ ಎರಡು ಪ್ರಮುಖ ಯೋಜನೆಗಳು ನಾಗರಿಕರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯದ ಮೂಲಸೌಕರ್ಯ ಸೇವೆಗಳನ್ನು ತಲುಪಿಸುವ ಸಾಮರ್ಥ್ಯವನ್ನು ಹೆಚ್ಚಿಸಿವೆ. ಸ್ವಚ್ಛತೆಯು ಇಂದು ಜನಾಂದೋಲನವಾಗಿ ಮಾರ್ಪಟ್ಟಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಶೌಚಮುಕ್ತ (ಒಡಿಎಫ್) ಎಂದು ಘೋಷಿಸಲಾಗಿದೆ ಮತ್ತು 70% ಘನ ತ್ಯಾಜ್ಯವನ್ನು ಈಗ ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತಿದೆ. 1.1 ಕೋಟಿ ಗೃಹ ನೀರಿನ ನಲ್ಲಿ ಸಂಪರ್ಕಗಳು ಮತ್ತು 85 ಲಕ್ಷ ಒಳಚರಂಡಿ ಸಂಪರ್ಕಗಳನ್ನು ಸೇರಿಸುವ ಮೂಲಕ ನೀರಿನ ಭದ್ರತೆಯನ್ನು ʻಅಮೃತ್ʼ ಯೋಜನೆ ಖಾತರಿಪಡಿಸುತ್ತದೆ. ಇದರಿಂದಾಗಿ 4 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಿದೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
'ಪರೀಕ್ಷಾ ಪೇ ಚರ್ಚಾ 2022' ರಲ್ಲಿ  ಭಾಗವಹಿಸಲು ಪ್ರಧಾನಮಂತ್ರಿ ಆಹ್ವಾನ
Explore More
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
 Grant up to Rs 10 lakh to ICAR institutes, KVKs, state agri universities for purchase of drones, says Agriculture ministry

Media Coverage

Grant up to Rs 10 lakh to ICAR institutes, KVKs, state agri universities for purchase of drones, says Agriculture ministry
...

Nm on the go

Always be the first to hear from the PM. Get the App Now!
...
Social Media Corner 23rd January 2022
January 23, 2022
ಶೇರ್
 
Comments

Nation pays tribute to Netaji Subhash Chandra Bose on his 125th birth anniversary.

Indian appreciates the continuous development push seen in each sector