ಪ್ರಧಾನಿ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಭೇಟಿ ನೀಡುತ್ತಿದ್ದಾರೆ. ಆಸಿಯಾನ್-ಇಂಡಿಯಾ ಶೃಂಗಸಭೆ, ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆರ್‌ಸಿಇಪಿ ಮಾತುಕತೆಗಳ ಸಭೆ ಸೇರಿದಂತೆ ವಿವಿಧ ಆಸಿಯಾನ್ ಸಂಬಂಧಿತ ಶೃಂಗಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಮುಖ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲು ಅವರು ವಿಶ್ವ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಆಸಿಯಾನ್ ಸಂಬಂಧಿತ ಶೃಂಗಸಭೆಗಳು ಭಾರತದ ವಿದೇಶಾಂಗ ನೀತಿಯ ಪ್ರಮುಖ ಅಂಶಗಳಾಗಿವೆ, ಮುಖ್ಯವಾಗಿ ನಮ್ಮ ಆಕ್ಟ್ ಈಸ್ಟ್ ಪಾಲಿಸಿ ಎಂದು ಪ್ರಧಾನ ಮಂತ್ರಿ ತಮ್ಮ ಪ್ರವಾಸಕ್ಕೆ ನಿರ್ಗಮಿಸುವ ಮುನ್ನದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೂರ್ವ ಏಷ್ಯಾ ಶೃಂಗಸಭೆಯ ಮಹತ್ವವನ್ನು ತಿಳಿಸಿದ ಪ್ರಧಾನ ಮಂತ್ರಿಯವರು, ಇಂಡೋ-ಪೆಸಿಫಿಕ್ ಪ್ರದೇಶಕ್ಕಾಗಿ ಇರುವ ನಮ್ಮ ದೂರದೃಷ್ಟಿಯನ್ನು ಪ್ರಸ್ತುತಪಡಿಸಲು ಇದು ಒಂದು ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.

ಇಂದು ಸಂಜೆ 6 ಗಂಟೆಗೆ ಪ್ರಧಾನಿ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ‘ಸಾವಸ್ಡೀ ಪಿಎಂ ಮೋದಿ’ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಥೈಲ್ಯಾಂಡ್ ದೇಶಕ್ಕೆ ಭಾರತೀಯ ಸಮುದಾಯದ ಕೊಡುಗೆಗಳನ್ನು ಶ್ಲಾಘಿಸಿದ ಪ್ರಧಾನ ಮಂತ್ರಿಯವರು, ಅವರೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth