ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜನಪ್ರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಸಾಮಾಜಿಕ ನ್ಯಾಯದ ಸಂಕೇತ ಮತ್ತು ಸಾರ್ವಜನಿಕ ಸೇವೆಗೆ ಸಮರ್ಪಿತವಾದ ಬಿಹಾರದ ಜನಪ್ರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು. ಅವರು ಸದಾ ಸಮಾಜದ ವಂಚಿತ ಮತ್ತು ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದರು. ರಾಜಕೀಯ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ.”
सामाजिक न्याय के प्रतीक और जनसेवा के प्रति समर्पित बिहार के लोकप्रिय नेता और पूर्व केंद्रीय मंत्री रामविलास पासवान जी को उनकी पुण्यतिथि पर मेरी भावभीनी श्रद्धांजलि। उन्होंने हमेशा समाज के वंचित और शोषित समुदायों के कल्याण के लिए कार्य किया। राजनीति के साथ-साथ राष्ट्र निर्माण के…
— Narendra Modi (@narendramodi) October 8, 2025


